ನಿಂತಿಲ್ಲ ‘ಸು ಫ್ರಮ್ ಸೋ ಅಬ್ಬರ’; 38ನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮೊತ್ತ ಬಾಚಿದ ಸಿನಿಮಾ

‘ಸು ಫ್ರಮ್ ಸೋ’ ಸಿನಿಮಾ ಬಿಡುಗಡೆಯಾಗಿ 38 ದಿನಗಳಾದರೂ ಭರ್ಜರಿಯಾಗಿ ಕಲೆಕ್ಷನ್ ಮಾಡುತ್ತಿದೆ. ಭಾರತದಲ್ಲಿ 100 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದ ಈ ಚಿತ್ರ ಒಟ್ಟು 120 ಕೋಟಿ ರೂಪಾಯಿ ಗಳಿಸಿದೆ. ನಿರ್ಮಾಪಕ ರಾಜ್ ಬಿ ಶೆಟ್ಟಿ ಮತ್ತು ನಿರ್ದೇಶಕ ಜೆಪಿ ತುಮಿನಾಡ್ ಅವರ ಯಶಸ್ಸಿಗೆ ಇದು ಸಾಕ್ಷಿ. ಚಿತ್ರವು ಒಟಿಟಿಗೆ ಬರಲು ಸಿದ್ಧವಾಗಿದ್ದರೂ ಥಿಯೇಟರ್‌ಗಳಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಲಿದೆ.

ನಿಂತಿಲ್ಲ ‘ಸು ಫ್ರಮ್ ಸೋ ಅಬ್ಬರ’; 38ನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮೊತ್ತ ಬಾಚಿದ ಸಿನಿಮಾ
ರಾಜ್ ಬಿ ಶೆಟ್ಟಿ
Updated By: Digi Tech Desk

Updated on: Sep 05, 2025 | 3:27 PM

‘ಸು ಫ್ರಮ್ ಸೋ’ ಸಿನಿಮಾ (Su From So) ಬಾಕ್ಸ್ ಆಫೀಸ್​ನಲ್ಲಿ ತನ್ನ ಅಬ್ಬರವನ್ನೂ ಇನ್ನೂ ಕಡಿಮೆ ಮಾಡಿಲ್ಲ. ಸಿನಿಮಾ ಬಿಡುಗಡೆ ಆಗಿದೆ ಬರೋಬ್ಬರಿ 38 ದಿನಗಳು ಕಳೆದಿವೆ. ಈ ಸಂದರ್ಭದಲ್ಲೂ ಸಿನಿಮಾ ಕೋಟಿ ರೂಪಾಯಿ ಸಮೀಪ ಕಲೆಕ್ಷನ್ ಮಾಡುತ್ತಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಈ ಚಿತ್ರದ ಭಾರತದ ಗ್ರಾಸ್ ಕಲೆಕ್ಷನ್ 100 ಕೋಟಿ ರೂಪಾಯಿ ಆಗಿದೆ ಅನ್ನೋದು ವಿಶೇಷ.

‘ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ರಿಲೀಸ್ ಆಯಿತು. ಈ ಸಿನಿಮಾ ಒಟ್ಟಾರೆ 120 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ 90 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಆಗಿದೆ. ಗ್ರಾಸ್ ಕಲೆಕ್ಷನ್ 105 ಕೋಟಿ ರೂಪಾಯಿ ಆಗಿದೆ. ವಿದೇಶದಲ್ಲಿ ಸಿನಿಮಾಗೆ 15 ಕೋಟಿ ರೂಪಾಯಿ ಹರಿದು ಬಂದಿದೆ ಎಂಬುದು ವಿಶೇಷ.

ಈ ಚಿತ್ರ ಭಾನುವಾರ (ಆಗಸ್ಟ್ 31) 80 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಸಿನಿಮಾಗೆ ಇದು 38ನೇ ದಿನ. ದೊಡ್ಡ ದೊಡ್ಡ ಸಿನಿಮಾಗಳ ಅಬ್ಬರದ ಮಧ್ಯೆಯೂ ಇಷ್ಟು ಉತ್ತಮ ಕಲೆಕ್ಷನ್ ಮಾಡುತ್ತಿರುವುದು ಚಿತ್ರದ ಹೆಚ್ಚುಗಾರಿಕೆ. ಸಿನಿಮಾ ಒಟಿಟಿಗೆ ಬರಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಆದಾಗ್ಯೂ ಸಿನಿಮಾನ ಥಿಯೇಟರ್​ನಲ್ಲಿ ನೋಡುವವರ ಸಂಖ್ಯೆ ಕಡಿಮೆ ಆಗಿಲ್ಲ. ಮೊದಲ ದಿನ ಈ ಚಿತ್ರ 78 ಲಕ್ಷ ರೂಪಾಯಿ ಗಳಿಕೆ ಮಾಡಿತ್ತು. ಆ ಬಳಿಕ ಸಿಕ್ಕ ಬಾಯ್ಮಾತಿನ ಪ್ರಚಾರ ಚಿತ್ರಕ್ಕೆ ಸಹಕಾರಿ ಆಗಿದೆ.

ಇದನ್ನೂ ಓದಿ
‘ಕಡಿಮೆ ಬೆಲೆ ಎಂದು ಮುಸ್ಲಿಮರು ಗೋಮಾಂಸ ಸೇವಿಸುತ್ತಾರೆ, ನಾನು ತಿಂದೇ ಇಲ್ಲ’
ಗರ್ಲ್​ಫ್ರೆಂಡ್​ಗೆ ಮನೆ ಕೊಟ್ಟು ಬಾಡಿಗೆ ಪಡೆದ ಹೃತಿಕ್ ರೋಷನ್
ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ರಾಜ್ ಬಿ. ಶೆಟ್ಟಿ; ಕಾರಣ ಏನು?
Bigg Boss ಟೈಟಲ್​ನಲ್ಲಿ ಹೆಚ್ಚುವರಿ G ಏಕೆ? ಸಂಖ್ಯಾಶಾಸ್ತ್ರದ ಲೆಕ್ಕಾಚಾರ

ಇದನ್ನೂ ಓದಿ: ಗಣಪತಿ ಹಬ್ಬದ ಸಂಭ್ರಮದಲ್ಲಿ ‘ಸು ಫ್ರಮ್ ಸೋ’ ವೇಶ; ಬಾವ-ಗುರೂಜಿ ಹೈಲೈಟ್

‘ಸು ಫ್ರಮ್ ಸೋ’ ಸಿನಿಮಾಗೆ ರಾಜ್​ ಬಿ ಶೆಟ್ಟಿ ನಿರ್ಮಾಣ ಇದೆ. ಈ ಚಿತ್ರದ ಮೂಲಕ ಅವರು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಅವರಿಗೆ ಮುಂದಿನ ಸಿನಿಮಾ ನಿರ್ಮಾಣಕ್ಕೆ ಸಾಕಷ್ಟು ಹಣ ಸಿಕ್ಕಂತೆ ಆಗಿದೆ. ಇನ್ನು, ನಿರ್ದೇಶಕ ಜೆಪಿ ತುಮಿನಾಡ್ ಅವರು ಮೊದಲ ಪ್ರಯತ್ನದಲ್ಲೇ ಯಶಸ್ಸು ಕಂಡಿದ್ದಾರೆ. ಹಲವು ನಾಟಕಗಳನ್ನು ಮಾಡಿ ಅವರು ಮೆಚ್ಚುಗೆ ಪಡೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 7:28 am, Mon, 1 September 25