AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ಬಳಿಕ ಈಗ ತೆಲುಗಿಗೆ ‘ಸು ಫ್ರಂ ಸೋ’ ಸವಾರಿ

Su From So: ಕನ್ನಡದಲ್ಲಿ ಭಾರಿ ಯಶಸ್ವಿಯಾದ ‘ಸು ಫ್ರಂ ಸೋ’ ಸಿನಿಮಾ ಅದರ ಬಳಿಕ ಕೇರಳಕ್ಕೂ ಕಾಲಿಟ್ಟಿದೆ. ಆಗಸ್ಟ್ 1 ರಂದು ಸಿನಿಮಾದ ಮಲಯಾಳಂ ಆವೃತ್ತಿ ಕೇರಳ ರಾಜ್ಯದಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಗಿದ್ದು, ಅಲ್ಲಿಯೂ ಸಹ ಜನಪ್ರೇಮ ಗಳಿಸಿಕೊಂಡಿದೆ. ಇದೀಗ ತೆಲುಗಿನಲ್ಲಿಯೂ ಸಿನಿಮಾ ಬಿಡುಗಡೆ ಆಗಲಿದ್ದು, ದಿನಾಂಕ ಘೋಷಣೆಯಾಗಿದೆ.

ಮಲಯಾಳಂ ಬಳಿಕ ಈಗ ತೆಲುಗಿಗೆ ‘ಸು ಫ್ರಂ ಸೋ’ ಸವಾರಿ
Su From So
ಮಂಜುನಾಥ ಸಿ.
|

Updated on: Aug 03, 2025 | 7:36 PM

Share

ರಾಜ್ ಬಿ ಶೆಟ್ಟಿ (Raj B Shetty) ನಿರ್ಮಿಸಿ, ಜೆಪಿ ತುಮ್ಮಿನಾಡ್ ನಿರ್ದೇಶನ ಮಾಡಿರುವ ‘ಸು ಫ್ರಂ ಸೋ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಕಡಿಮೆ ಬಜೆಟ್​ನಲ್ಲಿ, ಕಡಿಮೆ ಅವಧಿಯಲ್ಲಿ, ಸರಳವಾದ ಕತೆಯೊಂದಿಗೆ, ಯಾವುದೇ ಸ್ಟಾರ್ ನಟರುಗಳಿಲ್ಲದೆ ಸರಳವಾಗಿ ನಿರ್ಮಿಸಲಾಗಿರುವ ‘ಸು ಫ್ರಂ ಸೋ’ ಸಿನಿಮಾ ಕನ್ನಡಿಗರ ಮನಸೂರೆಗೊಳಿಸಿದೆ. ಸಿನಿಮಾದ ಕಲೆಕ್ಷನ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಸಾಗುತ್ತಿದೆ.

ಈ ಸಿನಿಮಾ, ಕನ್ನಡದಲ್ಲಿ ಭಾರಿ ಯಶಸ್ವಿಯಾದ ಬಳಿಕ ಇತ್ತೀಚೆಗಷ್ಟೆ ಕೇರಳಕ್ಕೂ ಕಾಲಿಟ್ಟಿದೆ. ಆಗಸ್ಟ್ 1 ರಂದು ಸಿನಿಮಾದ ಮಲಯಾಳಂ ಆವೃತ್ತಿ ಕೇರಳ ರಾಜ್ಯದಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಗಿದ್ದು, ಅಲ್ಲಿಯೂ ಸಹ ಜನಪ್ರೇಮ ಗಳಿಸಿಕೊಂಡಿದೆ. ಮಲಯಾಳಂ ಪ್ರೇಕ್ಷಕರು ಸಹ ‘ಸು ಫ್ರಂ ಸೋ’ ಸಿನಿಮಾವನ್ನು ಅಪ್ಪಿ ಸ್ವಾಗತಿಸಿದ್ದಾರೆ. ಇದೀಗ ಈ ಸಿನಿಮಾ ಮತ್ತೊಂದು ನೆರೆಯ ರಾಜ್ಯಕ್ಕೆ ಕಾಲಿಡುತ್ತಿದ್ದು, ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ನೆರೆಯ ತೆಲುಗು ರಾಜ್ಯಗಳಾದ ಆಂಧ್ರ ಪ್ರದೇಶ ಮತ್ತು ತೆಲಂಗಾಣಗಳಲ್ಲಿ ‘ಸು ಫ್ರಂ ಸೋ’ ಬಿಡುಗಡೆ ಆಗುತ್ತಿದೆ. ಸಿನಿಮಾದ ತೆಲುಗು ಆವೃತ್ತಿ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಆಗಸ್ಟ್ 8 ರಂದು ‘ಸು ಫ್ರಂ ಸೋ’ ಸಿನಿಮಾ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಏಕಕಾಲಕ್ಕೆ ತೆಲುಗಿನಲ್ಲಿ ಬಿಡುಗಡೆ ಆಗಲಿದೆ.

‘ಪುಷ್ಪ’, ‘ಪುಷ್ಪ 2’ ಸೇರಿದಂತೆ ಅನೇಕ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಹಾಗೂ ಹಲವಾರು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ವಿತರಣೆ ಮಾಡಿರುವ ಮೈತ್ರಿ ಮೂವಿ ಮೇಕರ್ಸ್​ನವರು ‘ಸು ಫ್ರಂ ಸೋ’ ಸಿನಿಮಾವನ್ನು ತೆಲುಗಿನಲ್ಲಿ ವಿತರಣೆ ಮಾಡಲಿದ್ದಾರೆ. ತೆಲುಗಿನಲ್ಲಿಯೂ ಸಹ ‘ಸು ಫ್ರಂ ಸೋ’ ಹೆಸರಿನಲ್ಲಿಯೇ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ ಮತ್ತು ಮಲಯಾಳಂನಲ್ಲಿ ದೊರೆತ ಯಶಸ್ಸು ತೆಲುಗಿನಲ್ಲಿ ಈ ಸಿನಿಮಾಕ್ಕೆ ಸಿಗುತ್ತದೆಯೋ ಇಲ್ಲವೊ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ