AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸು ಫ್ರಮ್ ಸೋ’ ಪ್ರೀಮಿಯರ್ ಶೋ ನೋಡಿ ಹೊಗಳಿದ ಪ್ರೇಕ್ಷಕರು; ಚಿತ್ರದಲ್ಲಿ ಅಂಥದ್ದೇನಿದೆ?

Su From So Movie: ‘ಸು ಫ್ರಮ್ ಸೋ’ ಚಿತ್ರದ ಹಾರರ್-ಕಾಮಿಡಿ ಸಿನಿಮಾ ಜುಲೈ 25ರಂದು ಪ್ರೇಕ್ಷಕರ ಎದುರು ಬರಲಿದೆ. ಮಂಗಳೂರಿನಲ್ಲಿ ನಡೆದ ಪ್ರೀಮಿಯರ್ ಶೋ ನಂತರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊಸ ಕಲಾವಿದರು ಹಾಗೂ ಯುವ ನಿರ್ದೇಶಕನ ಸಿನಿಮಾಗೆ ರಾಜ್ ಬಿ ಶೆಟ್ಟಿ ಬಂಡವಾಳ ಹೂಡಿದ್ದಾರೆ.

‘ಸು ಫ್ರಮ್ ಸೋ’ ಪ್ರೀಮಿಯರ್ ಶೋ ನೋಡಿ ಹೊಗಳಿದ ಪ್ರೇಕ್ಷಕರು; ಚಿತ್ರದಲ್ಲಿ ಅಂಥದ್ದೇನಿದೆ?
ಸು ಫ್ರಮ್ ಸೋ
ರಾಜೇಶ್ ದುಗ್ಗುಮನೆ
|

Updated on:Jul 22, 2025 | 8:37 AM

Share

ಸ್ಯಾಂಡಲ್​ವುಡ್​ನಲ್ಲಿ ಈಗ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗುತ್ತಿವೆ. ಅದರಲ್ಲೂ ಜುಲೈ ತಿಂಗಳಲ್ಲಿ ಒಳ್ಳೊಳ್ಳೆಯ ಚಿತ್ರಗಳು ಥಿಯೇಟರ್​ಗೆ ಬರುತ್ತಿವೆ. ಈಗಾಗಲೇ ‘ಎಕ್ಕ’ (Ekka Movie) ಹಾಗೂ ‘ಜೂನಿಯರ್’ ಸಿನಿಮಾಗಳು ರಿಲೀಸ್ ಆಗಿ ಮೆಚ್ಚುಗೆ ಪಡೆದಿವೆ. ಹೀಗಿರುವಾಗಲೇ ಈ ವಾರ ಮತ್ತೊಂದು ಸಿನಿಮಾ ರಿಲೀಸ್​ಗೆ ರೆಡಿ ಇದೆ. ಇಷ್ಟೇ ಅಲ್ಲ, ಚಿತ್ರದ ಪ್ರೀಮಿಯರ್ ಶೋ ನೋಡಿರೋ ಪ್ರೇಕ್ಷಕರು ಚಿತ್ರವನ್ನು ಹಾಡಿ ಹೊಗಳುತ್ತಿದ್ದಾರೆ. ಈ ಮೂಲಕ ಸ್ಯಾಂಡಲ್​ವುಡ್​ಗೆ ಒಂದೇ ತಿಂಗಳಲ್ಲಿ ಮೂರು ಹಿಟ್ ಸಿನಿಮಾ​ಗಳು ಸಿಗುವ ನಿರೀಕ್ಷೆ ಇದೆ.

ಪಾತ್ರವರ್ಗ

‘ಸು ಫ್ರಮ್ ಸೋ’ ಚಿತ್ರದಲ್ಲಿ ಯಾವುದೇ ದೊಡ್ಡ ಸ್ಟಾರ್ಸ್ ಇಲ್ಲ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಜೆಪಿ ತುಮಿನಾಡ ಅವರು. ಈ ಸಿನಿಮಾ ರಾಜ್ ಬಿ. ಶೆಟ್ಟಿ ಅವರ ‘ಲೈಟರ್ ಬುದ್ಧ ಫಿಲಂಸ್’ ಲಾಂಛನದ ಅಡಿಯಲ್ಲಿ ರಾಜ್ ಬಿ. ಶೆಟ್ಟಿ, ಶಶಿಧರ ಶೆಟ್ಟಿ ಬರೋಡಾ, ರವಿ ರೈ ಕಳಸ ನಿರ್ಮಾಣ ಮಾಡಿದ್ದಾರೆ. ಜೆಪಿ ತುಮಿನಾಡ, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡ, ಮೈಮ್ ರಾಮದಾಸ್, ದೀಪಕ್ ರೈ ಪಣಜೆ, ಅರ್ಜುನ್ ಕಜೆ ಮೊದಲಾದವರು ಅಭಿನಯಿಸಿದ್ದಾರೆ. ಎಲ್ಲರೂ ಈ ಮೊದಲು ಪೋಷಕ ಪಾತ್ರಗಳನ್ನು ಮಾಡಿ ಭೇಷ್ ಎನಿಸಿಕೊಂಡಿರುವುದು ವಿಶೇಷ.

ಇದನ್ನೂ ಓದಿ
Image
‘ಎಕ್ಕ’ ಹಾಗೂ ‘ಜೂನಿಯರ್’ ಸಿನಿಮಾ ಕಲೆಕ್ಷನ್; ಯಾವುದು ಪಾಸ್, ಯಾವುದು ಫೇಲ್?
Image
ಈ ದಿನಂದು ‘ಕಣ್ಣಪ’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ?
Image
ಈ ಸಸ್ಪೆನ್ಸ್ ಥ್ರಿಲ್ಲರ್​ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಲೇಬೇಡಿ
Image
‘ಎಕ್ಕ’ ಚಿತ್ರಕ್ಕೆ ಸರಿ ಸಮಾನವಾಗಿ ಗಳಿಕೆ ಮಾಡುತ್ತಿದೆ ‘ಜೂನಿಯರ್’

ಇದನ್ನೂ ಓದಿ: ಹಾರರ್ ಕಾಮಿಡಿ ಶೈಲಿಯ ‘ಸು ಫ್ರಮ್ ಸೋ’ ಟ್ರೇಲರ್​ನಲ್ಲಿ ಟೈಟಲ್ ಅರ್ಥ ರಿವೀಲ್

ಸಿನಿಮಾದಲ್ಲಿ ಏನಿದೆ..

ಇದು ಮಂಗಳು ಭಾಗದಲ್ಲಿ ನಡೆಯುವ ಕಥೆ. ಹೀಗಾಗಿ, ಅದೇ ಆ ಭಾಗದ ಭಾಷೆಯನ್ನೇ ಇಲ್ಲಿ ಬಳಸಲಾಗಿದೆ. ಇದು ಚಿತ್ರದ ಹೈಲೈಟ್ ಕೂಡ ಹೌದು. ಇದು ಹಾರರ್ ಕಾಮಿಡಿ ಸಿನಿಮಾ. ಹಾರರ್ ಸಿನಿಮಾ ಅಂತ ಇಲ್ಲಿ ಭಯ ಪಡೋ ಅಗತ್ಯ ಇಲ್ಲ. ಏಕೆಂದರೆ ಅಲ್ಲಿಯೂ ನಿಮಗೆ ನಗು ಬರೋದು ಗ್ಯಾರಂಟಿ. ಆ ರೀತಿಯಲ್ಲಿ ಸಿನಿಮಾ ಮೂಡಿ ಬಂದಿದೆ ಎನ್ನುತ್ತಿದೆ ಟ್ರೇಲರ್.

ಪ್ರೀಮಿಯರ್ ಶೋ

‘ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ರಿಲೀಸ್ ಆಗಬೇಕಿದೆ. ಈ ಚಿತ್ರದ ಪ್ರೀಮಿಯರ್ ಶೋನ ಜುಲೈ 21ರಂದು ಮಂಗಳೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಹೊಸ ಪ್ರಯತ್ನವನ್ನು ಎಲ್ಲರೂ ಹೊಗಳಿದ್ದಾರೆ.

ಬೆಂಗಳೂರಿನಲ್ಲೂ ಇದೆ ಪ್ರೀಮಿಯರ್ ಶೋ

ಜುಲೈ 24ರಂದು ಬೆಂಗಳೂರಿನಲ್ಲೂ ಪ್ರೀಮಿಯುರ್ ಶೋನ ಆಯೋಜನೆ ಮಾಡಲಾಗಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾ ಇಷ್ಟವಾದರೆ ಸ್ಯಾಂಡಲ್​ವುಡ್​ಗೆ ಮತ್ತೊಂದು ಚೈತನ್ಯ ಸಿಕ್ಕಂತೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:38 am, Tue, 22 July 25

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!