
‘ಸು ಫ್ರಮ್ ಸೋ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದಿದೆ. ಈ ಚಿತ್ರ ಸೂಪರ್ ಹಿಟ್ ಆಗಿದೆ. ಕನ್ನಡ ಮಾತ್ರವಲ್ಲದೆ, ತೆಲುಗು ಹಾಗೂ ಮಲಯಾಳಂನಲ್ಲೂ ಸಿನಿಮಾ ಮೆಚ್ಚುಗೆ ಪಡೆದಿದೆ. ಈ ಚಿತ್ರ ತಮಿಳಿಗೆ ರಿಮೇಕ್ ಮಾಡುವ ಬಗ್ಗೆ ಮಾತುಕತೆ ನಡೆಯುತ್ತಿತ್ತು. ಈಗ ಆ ಮಾತುಕತೆ ಫೈನಲ್ ಆಗಿದೆ. ದೊಡ್ಡ ಮೊತ್ತಕ್ಕೆ ಎನ್ಎಸ್ ರಾಜ್ಕುಮಾರ್ ಅವರು ‘ಸು ಫ್ರಮ್ ಸೋ’ (Su From So) ಚಿತ್ರದ ತಮಿಳು ರಿಮೇಕ್ ಹಕ್ಕನ್ನು ಪಡೆದಿದ್ದಾರೆ.
‘ಸು ಫ್ರಮ್ ಸೋ’ ಚಿತ್ರವನ್ನು ರಾಜ್ ಬಿ ಶೆಟ್ಟಿ ಅವರ ‘ಲೈಟರ್ ಬುದ್ಧ ಫಿಲ್ಮ್ಸ್’ ಮೂಲಕ ನಿರ್ಮಾಣ ಮಾಡಲಾಗಿದೆ. ಈ ಚಿತ್ರ ಆರಂಭದಲ್ಲಿ ಕನ್ನಡದಲ್ಲಿ ಮಾತ್ರ ರಿಲೀಸ್ ಆಯಿತು. ಆ ಬಳಿಕ ಚಿತ್ರ ಮಲಯಾಳಂನಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ತೆಲುಗು ಮಂದಿ ಕೂಡ ಚಿತ್ರವನ್ನು ಇಷ್ಟಪಟ್ಟರು. ಈ ಸಿನಿಮಗೆ ಜೆಪಿ ತುಮಿನಾಡ್ ನಿರ್ದೇಶನ ಇದೆ. ಅವರು ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಶನೀಲ್ ಗೌತಮ್, ಸಂಧ್ರ ಅರಕೆರೆ, ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಜೆ ನಟಿಸಿದ್ದಾರೆ.
ಸದ್ಯ ಎನ್ಎಸ್ ರಾಜ್ಕುಮಾರ್ ಅವರು ‘ಸು ಫ್ರಮ್ ಸೋ’ ತಮಿಳು ಹಕ್ಕನ್ನು ಪಡೆದಿದ್ದಾರೆ. ಅವರು ಕನ್ನಡದಲ್ಲಿ ‘ಮೈನಾ’, ‘ಮೈತ್ರಿ’, ‘ಪೃಥ್ವಿ’ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. 60ಕ್ಕೂ ಹೆಚ್ಚು ಚಿತ್ರಗಳನ್ನು ಅವರು ಹಂಚಿಕೆ ಮಾಡಿದ್ದಾರೆ. ಅವರು ದೊಡ್ಡ ಮೊತ್ತಕ್ಕೆ ‘ಸು ಫ್ರಮ್ ಸೋ’ ಹಕ್ಕನ್ನು ಖರೀದಿ ಮಾಡಿದ್ದಾರೆ.
ಇದನ್ನೂ ಓದಿ: 25ನೇ ದಿನಕ್ಕೆ ಲಕ್ಷಕ್ಕೆ ಕುಸಿದ ‘ಸು ಫ್ರಮ್ ಸೋ’ ಕಲೆಕ್ಷನ್; ಒಟ್ಟಾರೆ ಗಳಿಕೆ ಎಷ್ಟು?
‘ಸು ಫ್ರಮ್ ಸೋ’ ಸಿನಿಮಾನ ತಮಿಳಿಗೆ ಡಬ್ ಮಾಡುವ ಬದಲು ಆ ಭಾಷೆಗೆ ರಿಮೇಕ್ ಮಾಡಿದರೆ ಹೆಚ್ಚು ಸೂಕ್ತ ಎಂದು ತಂಡದವರು ನಿರ್ಧರಿಸಿತ್ತು. ಈಗ ಸೂಕ್ತ ಎನಿಸಿದವರಿಗೆ ಹಕ್ಕನ್ನು ಮಾರಲಾಗಿದೆ. ಸಿನಿಮಾದ ಪಾತ್ರವರ್ಗ, ತಾಂತ್ರಿಕ ತಂಡದ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆ. ‘ಸು ಫ್ರಮ್ ಸೋ’ ಸಿನಿಮಾದಲ್ಲಿ ಹಾಸ್ಯದ ಜೊತೆಗೆ ಒಂದು ಸ್ಟ್ರಾಂಗ್ ಮೆಸೇಜ್ ಇದೆ. ಇದು ತಮಿಳು ನಾಡು ಜನತೆಗೂ ಇಷ್ಟ ಆಗಲಿದೆ ಎಂಬ ನಂಬಿಕೆ ರಾಜ್ಕುಮಾರ್ ಅವರದ್ದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 12:00 pm, Tue, 19 August 25