AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀ-ಲುಕ್ ಮೂಲಕ ಗಮನ ಸೆಳೆದ ‘ಸುಬ್ರಹ್ಮಣ್ಯ’: ರವಿಶಂಕರ್​ ಪುತ್ರನ ಪ್ಯಾನ್​ ಇಂಡಿಯಾ ಸಿನಿಮಾ

ರವಿಶಂಕರ್​ ನಿರ್ದೇಶನ ಮಾಡುತ್ತಿರುವ ‘ಸುಬ್ರಹ್ಮಣ್ಯ’ ಸಿನಿಮಾದ ಪ್ರೀ-ಲುಕ್​ ಪೋಸ್ಟರ್ ರಿಲೀಸ್​ ಆಗಿದೆ. ಸದ್ಯದಲ್ಲೇ ಫಸ್ಟ್​ಲುಕ್​ ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಲು ಚಿತ್ರತಂಡ ಪ್ಯ್ಲಾನ್​ ಮಾಡಿಕೊಂಡಿದೆ. ರವಿ ಬಸ್ರೂರ್ ಅವರ ಸಂಗೀತ ನಿರ್ದೇಶಕ ಈ ಸಿನಿಮಾಗೆ ಇರಲಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಪ್ರೀ-ಲುಕ್ ಮೂಲಕ ಗಮನ ಸೆಳೆದ ‘ಸುಬ್ರಹ್ಮಣ್ಯ’: ರವಿಶಂಕರ್​ ಪುತ್ರನ ಪ್ಯಾನ್​ ಇಂಡಿಯಾ ಸಿನಿಮಾ
‘ಸುಬ್ರಹ್ಮಣ್ಯ’ ಸಿನಿಮಾದ ಪ್ರೀ-ಲುಕ್​ ಪೋಸ್ಟರ್​
ಮದನ್​ ಕುಮಾರ್​
|

Updated on: Sep 01, 2024 | 10:50 PM

Share

ಖ್ಯಾತ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವಯ್​ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಸಾಕಷ್ಟು ಕುತೂಹಲ ಸೃಷ್ಟಿಸಿದೆ. ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವುದಕ್ಕೂ ಮುನ್ನವೇ ಚಿತ್ರತಂಡದಿಂದ ಪ್ರೀ-ಲುಕ್ ಅನಾವರಣ ಆಗಿದೆ. ಪಾಳುಬಿದ್ದ ದೇಗುಲದ ಮುಂದೆ ಹೀರೋ ಅದ್ವಯ್​ ಅವರು ಕೈಯಲ್ಲಿ ಪಂಜು ಹಿಡಿದು ಕಾಣಿಸಿಕೊಂಡಿರುವ ಈ ಪೋಸ್ಟರ್​ನಲ್ಲಿ ಅನೇಕ ಅಂಶಗಳು ಹೈಲೈಟ್​ ಆಗುವೆ. ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿಸುವಲ್ಲಿ ಈ ಪೋಸ್ಟರ್​ ಯಶಸ್ವಿ ಆಗಿದೆ. ಈ ಸಿನಿಮಾಗೆ ರವಿಶಂಕರ್​ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಆ ಮೂಲಕ ಬರೋಬ್ಬರಿ 2 ದಶಕದ ಬಳಿಕ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿದ್ದಾರೆ.

‘ಸುಬ್ರಹ್ಮಣ್ಯ’ ಸಿನಿಮಾಗೆ ವಿಘ್ನೇಶ್ ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯ್ ಎಂ. ಕುಮಾರ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ ‘ದುರ್ಗಿ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್​ ಅವರು ಈಗ ಮಗನ ಸಿನಿಮಾಗಾಗಿ ಮತ್ತೆ ನಿರ್ದೇಶನ ಮಾಡುತ್ತಿದ್ದಾರೆ.

ಈ ಸಿನಿಮಾದ ಮೂಲಕ ಅದ್ವಯ್​ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಕಳೆದ ಆಯುಧ ಪೂಜೆಗೆ ಟೈಟಲ್ ಪೋಸ್ಟರ್ ಅನಾವರಣವಾಗಿತ್ತು. ಆ ಬಳಿಕ ಯಾವುದೇ ಅಪ್​ಡೇಟ್​ ಸಿಕ್ಕಿರಲಿಲ್ಲ. ಈಗ ಚಿತ್ರತಂಡದಿಂದ ಒಂದಷ್ಟು ಮಾಹಿತಿ ಸಿಕ್ಕಿದೆ. ‘ಸುಬ್ರಹ್ಮಣ್ಯ’ ಚಿತ್ರದ ಶೇಕಡ 60ರಷ್ಟು ಚಿತ್ರೀಕರಣ ಈಗಾಗಲೇ ಮುಕ್ತಾಯ ಆಗಿದೆ. ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಮುಂಬೈನಲ್ಲಿ ಶಾರುಖ್ ಒಡೆತನದ ‘ರೆಡ್ ಚಿಲ್ಲೀಸ್ ಸ್ಟುಡಿಯೋ’ದಲ್ಲಿ ನಡೆಯುತ್ತಿವೆ ಎಂಬುದು ವಿಶೇಷ.

‘ಸುಬ್ರಹ್ಮಣ್ಯ’ ಚಿತ್ರಕ್ಕಾಗಿ ಬೆಂಗಳೂರು, ಮುಂಬೈ, ಹೈದರಾಬಾದ್ ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ ಗ್ರಾಫಿಕ್ಸ್​ ಕೆಲಸಗಳು ನಡೆಯುತ್ತಿವೆ. ಪ್ರೀಮಿಯಂ ಲಾರ್ಜ್ ಫಾರ್ಮ್ಯಾಟ್ ಹಾಗೂ ಐಮ್ಯಾಕ್ಸ್ ಥಿಯೇಟರ್‌ಗಳಲ್ಲಿ ಭರ್ಜರಿ ಫೀಲ್ ಕೊಡುವ ರೀತಿಯಲ್ಲಿ ಈ ಸಿನಿಮಾವನ್ನು ಕಟ್ಟಿಕೊಡಲಾಗುತ್ತಿದೆ ಎಂದು ಚಿತ್ರತಂಡ ಹೇಳಿದೆ. ‘ಸುಬ್ರಹ್ಮಣ್ಯ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಸದ್ಯದಲ್ಲೇ ಬಿಡುಗಡೆ ಆಗಲಿದೆ.

ದರ್ಶನ್​ಗೆ ಆಸ್ಕರ್​ ಕೊಡಿ; ವೇದಿಕೆಯ ಮೇಲೆ ಬೇಡಿಕೆ ಇಟ್ಟ ರವಿಶಂಕರ್​!

ಸೋಶಿಯೋ-ಫ್ಯಾಂಟಸಿ ಅಡ್ವೆಂಚರ್ಸ್ ಶೈಲಿಯ ಸಿನಿಮಾ ಇದಾಗಲಿದ್ದು, ‘ಎಸ್.ಜಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ರವಿ ಬಸ್ರೂರ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್