ಆಕಾಶದಲ್ಲಿನ ನಕ್ಷತ್ರಕ್ಕೆ ಕಿಚ್ಚ ಸುದೀಪ್​ ಹೆಸರು; ಹುಟ್ಟುಹಬ್ಬದ ಹೊಸ್ತಿಲಲ್ಲಿ ಹೀಗೊಂದು ಗೌರವ

ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಬಾರಿಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಈ ಖುಷಿಯನ್ನು ಇನ್ನಷ್ಟು ಹೆಚ್ಚಿಸುವ ಸುದ್ದಿಯೊಂದು ಸಿಕ್ಕಿದೆ. ಆಕಾಶದಲ್ಲಿನ ನಕ್ಷತ್ರವೊಂದಕ್ಕೆ ಕಿಚ್ಚ ಸುದೀಪ ಎಂದು ನಾಮಕರಣ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಆಕಾಶದಲ್ಲಿನ ನಕ್ಷತ್ರಕ್ಕೆ ಕಿಚ್ಚ ಸುದೀಪ್​ ಹೆಸರು; ಹುಟ್ಟುಹಬ್ಬದ ಹೊಸ್ತಿಲಲ್ಲಿ ಹೀಗೊಂದು ಗೌರವ
ಹರೀಶ್​ ಅರಸು, ಕಿಚ್ಚ ಸುದೀಪ್​
Follow us
ಮದನ್​ ಕುಮಾರ್​
|

Updated on: Aug 31, 2023 | 6:39 PM

ನಟ ಕಿಚ್ಚ ಸುದೀಪ್​ (Kichcha Sudeepa) ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಕಾದಿದ್ದಾರೆ. ಸೆಪ್ಟೆಂಬರ್ 2ರಂದು ಅವರ ಜನ್ಮದಿನಕ್ಕೆ (Sudeep Birthday) ಹಲವು ಬಗೆಯ ಉಡುಗೊರೆ ಸಿಗಲಿದೆ. ವಿವಿಧ ಚಿತ್ರತಂಡಗಳು ಹೊಸ ಹೊಸ ಪೋಸ್ಟರ್​ ಬಿಡುಗಡೆ ಮಾಡಲಿವೆ. ಅದಕ್ಕಿಂತಲೂ ಸ್ಪೆಷಲ್​ ಏನೆಂದರೆ, ಆಕಾಶದಲ್ಲಿನ ನಕ್ಷತ್ರವೊಂದಕ್ಕೆ ಕಿಚ್ಚ ಸುದೀಪ್​ ಅವರ ಹೆಸರನ್ನು ಇಡಲಾಗಿದೆ. ಅವರ ಬರ್ತ್​ಡೇ ಸಮೀಪಿಸಿರುವ ಸಂದರ್ಭದಲ್ಲಿ ಹೀಗೊಂದು ವಿಶೇಷವಾದ ಗೌರವವನ್ನು ಸಲ್ಲಿಸಲಾಗಿದೆ. ‘ಅರಸು ಕ್ರಿಯೇಷನ್ಸ್​’ ಮೂಲಕ ಈ ಕೆಲಸ ಮಾಡಲಾಗಿದೆ. ಇದು ಅಭಿಮಾನಿಗಳಿಗೆ (Kichcha Sudeep Fans) ಖುಷಿ ನೀಡಿದೆ. ಸಿನಿಮಾ ಪ್ರಚಾರಕರ್ತರಾಗಿ ಕೆಲಸ ಮಾಡುತ್ತಿರುವ ಹರೀಶ್ ಅರಸು ಅವರು ತಮ್ಮ ‘ಅರಸು ಕ್ರಿಯೇಷನ್ಸ್​’ ಸಂಸ್ಥೆಯ ಮೂಲಕ ಈ ಉಡುಗೊರೆ ನೀಡುತ್ತಿದ್ದಾರೆ.

ಅಭಿಮಾನಿಗಳಿಂದ ಪ್ರೀತಿಯಿಂದ ‘ಅಭಿನಯ ಚಕ್ರವರ್ತಿ’ ಎಂದು ಕರೆಸಿಕೊಳ್ಳುವ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಬಾರಿಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಈ ವರ್ಷ ನಂದಿ ಲಿಂಕ್ಸ್ ಗ್ರೌಂಡ್​ನಲ್ಲಿ ಫ್ಯಾನ್ಸ್​ ಜೊತೆ ಸುದೀಪ್​ ಅವರು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ. ತಮ್ಮ ನೆಚ್ಚಿನ ನಟನ ಜನ್ಮದಿನದ ಪ್ರಯುಕ್ತ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಗಿದೆ. ಸುದೀಪ್​ ಅವರ ಗುಣಗಾನ ಮಾಡುವಂತಹ ವಿಶೇಷ ಹಾಡುಗಳು ಕೂಡ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗಲಿವೆ. ಇದೆಲ್ಲದರ ನಡುವೆ ‘ಅರಸು ಕ್ರಿಯೇಷನ್ಸ್’ ಮೂಲಕ ನಕ್ಷತ್ರವೊಂದಕ್ಕೆ ಸುದೀಪ್​ ಹೆಸರು ಇಟ್ಟಿರುವುದು ವಿಶೇಷ ಎನಿಸಿಕೊಂಡಿದೆ.

ಹರೀಶ್ ಅರಸು ಟ್ವೀಟ್​:

‘ಈ ಜಗತ್ತಿನಲ್ಲಿ ಇರುವ ರತ್ನಗಳಲ್ಲಿ ನೀವೇ ಅತ್ಯಮೂಲ್ಯ. ಇಂದು ನಕ್ಷತ್ರ ಹುಟ್ಟಿದ ದಿನವನ್ನು ನಾವು ಆಚರಿಸುತ್ತೇವೆ. ಆದರೆ ಆಕಾಶದಲ್ಲಿ ಅಲ್ಲ, ಭೂಮಿಯಲ್ಲಿ’ ಎಂಬ ಅರ್ಥಪೂರ್ಣ ಸಂದೇಶದ ಮೂಲಕ ಸುದೀಪ್ ಅವರಿಗೆ ಈ ಸಂಸ್ಥೆಯ ಮೂಲಕ ಶುಭಾಶಯ ತಿಳಿಸಲಾಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ. ಸುದೀಪ್​ ಅಭಿಮಾನಿಗಳ ವಲಯದಲ್ಲಿ ಇದು ವೈರಲ್​ ಆಗಿದೆ.

Exclusive: ತಮಿಳುನಾಡಲ್ಲಿ ಕನ್ನಡದ ಕಂಪು ಹರಡಿದ ಸುದೀಪ್: ಮಹಾಬಲಿಪುರಂ ಶೂಟಿಂಗ್ ಸೆಟ್‌ನಲ್ಲಿ ಕನ್ನಡಿಗರ ದರ್ಬಾರು

ಕಿಚ್ಚ ಸುದೀಪ್ ಅವರು ಈಗ 46ನೇ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಆ ಸಿನಿಮಾದ ಶೀರ್ಷಿಕೆ ಅನಾವರಣ ಆಗಲಿದೆ. ಮಧ್ಯರಾತ್ರಿ 12ಕ್ಕೆ ಟೈಟಲ್​ ಘೋಷಣೆ ಆಗಲಿದೆ. ಈ ಮೊದಲು ನಂದಿ ಲಿಂಕ್ಸ್ ಗ್ರೌಂಡ್​ನಲ್ಲಿ ಮಾತ್ರ ಸುದೀಪ್​ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ ಮತ್ತು ಮನೆ ಬಳಿ ಯಾವುದೇ ಸಂಭ್ರಮಾಚರಣೆ ಇರುವುದಿಲ್ಲ ಎನ್ನಲಾಗಿತ್ತು. ಆದರೆ ಈಗ ಸುದೀಪ್ ಅವರ ಜೆಪಿ ನಗರದ ನಿವಾಸದ ಬಳಿಯೂ ಕಿಚ್ಚೋತ್ಸವ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ