AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ್ಟು ಬೋಲ್ಟ್ ವಿಚಾರಕ್ಕೆ ಸುದೀಪ್ ಖಡಕ್ ತಿರುಗೇಟು; ‘ಕಾಲವೇ ಉತ್ತರ ಕೊಡುತ್ತೆ’ ಎಂದ ಡಿಕೆ ಶಿವಕುಮಾರ್  

ಡಿಕೆಶಿ ಅವರ ‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ’ ಎಂಬ ಹೇಳಿಕೆಯನ್ನು ಸುದೀಪ್ ಖಂಡಿಸಿದ್ದಾರೆ. ಚಿತ್ರರಂಗದವರನ್ನು ಗೌರವಿಸುವಂತೆ ಅವರು ಡಿಕೆಶಿಯವರನ್ನು ಕೋರಿದ್ದಾರೆ. ಡಿಕೆಶಿ ಅವರು ಈ ವಿಷಯದ ಬಗ್ಗೆ "ಕಾಲವೇ ಉತ್ತರ ಕೊಡುತ್ತದೆ" ಎಂದು ಪ್ರತಿಕ್ರಿಯಿಸಿದ್ದಾರೆ. ಈ ವಿವಾದವು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ನಟ್ಟು ಬೋಲ್ಟ್ ವಿಚಾರಕ್ಕೆ ಸುದೀಪ್ ಖಡಕ್ ತಿರುಗೇಟು; ‘ಕಾಲವೇ ಉತ್ತರ ಕೊಡುತ್ತೆ’ ಎಂದ ಡಿಕೆ ಶಿವಕುಮಾರ್  
ಡಿಕೆಶಿ-ಸುದೀಪ್
ರಾಜೇಶ್ ದುಗ್ಗುಮನೆ
|

Updated on:Jun 21, 2025 | 12:58 PM

Share

ಡಿಸಿಎಂ ಡಿಕೆ ಶಿವಕುಮಾರ್ ಕೆಲ ತಿಂಗಳ ಹಿಂದೆ ನೀಡಿದ್ದ ‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ’ ಎಂಬ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಹೇಳಿಕೆ ಬಗ್ಗೆ ಯಾರೊಬ್ಬರೂ ಪ್ರತಿಕ್ರಿಯಿಸಲು ಹೋಗಿರಲಿಲ್ಲ. ಈಗ ಸುದೀಪ್ (Kichcha Sudeep) ಅವರು ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಡಿಕೆಶಿ ಅವರು ಆ ರೀತಿಯಲ್ಲಿ ಹೇಳಿಕೆ ನೀಡಬಾರದಿತ್ತು ಎಂದು ನೇರವಾಗಿ ಹೇಳಿದ್ದಾರೆ. ಸುದೀಪ್ ಹೇಳಿಕೆಗೆ ಡಿಕೆಶಿ ಕೂಡ ಪ್ರತಿಕ್ರಿಯಿಸಿದ್ದು, ‘ಕಾಲವೇ ಉತ್ತರ ಕೊಡುತ್ತೆ’ ಎಂದಿದ್ದಾರೆ. ಈ ಘಟನೆ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.

ಡಿಕೆಶಿ ಹೇಳಿಕೆ..

ಬೆಂಗಳೂರು ಸಿನಿಮೋತ್ಸವ ಉದ್ಘಾಟನೆ ವೇಳೆ ಯಾವುದೇ ದೊಡ್ಡ ಸಿನಿಮಾ ಸೆಲೆಬ್ರಿಟಿಗಳು ಹಾಜರಿ ಹಾಕಿರಲಿಲ್ಲ. ಇದಕ್ಕೆ ಬೇಸರ ಮಾಡಿಕೊಂಡಿದ್ದ ಡಿಕೆಶಿ, ‘ವಾರ್ನಿಂಗ್​ ಅಂತಾದ್ರೂ ಅಂದ್ಕೊಳ್ಳಿ, ಕೋರಿಕೆ ಅಂತಾದ್ರೂ ಅಂದ್ಕೊಳ್ಳಿ, ಚಿತ್ರರಂಗದವರ ನಟ್ಟು ಬೋಲ್ಟ್ ಹೇಗೆ ಟೈಟ್ ಮಾಡಬೇಕು ಅಂತ ಗೊತ್ತು’ ಎಂದಿದ್ದರು. ಈ ಹೇಳಿಕೆ ಚರ್ಚೆ ಹುಟ್ಟುಹಾಕಿತ್ತು. ಡಿಕೆಶಿ ಚಿತ್ರರಂಗದವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಅನೇಕರು ಭಾವಿಸಿದರು.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ನಿರೂಪಣೆ ಬಗ್ಗೆ ನಿಲುವು ತಿಳಿಸಿದ ಸುದೀಪ್

ಇದನ್ನೂ ಓದಿ
Image
ಯೋಗದ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ಮೋದಿಗೆ ಸಲ್ಲುತ್ತೆ; ಪವನ್
Image
ನಿಜವಾದ ವಿಷಕಾರಿ ಜಂತುಗಳ ಜೊತೆ ರಾಜ್​ಕುಮಾರ್ ಶೂಟ್; ಇದಕ್ಕೆ ಗುಂಡಿಗೆ ಬೇಕು
Image
ಸೆಲೆಬ್ರಿಟಿಗಳು ಎಷ್ಟು ಗಂಟೆಗೆ ಕೊನೆಯ ಊಟ ಮಾಡುತ್ತಾರೆ? ಇಲ್ಲಿದೆ ಮಾಹಿತಿ
Image
ರುಕ್ಮಿಣಿ ವಸಂತ್ ಶರ್ಟ್​ ಮೇಲೆ ಟೈಗರ್ ಚಿತ್ರ; ಇದರ ಹಿಂದಿದೆ ದೊಡ್ಡ ರಹಸ್ಯ

ಸುದೀಪ್ ತಿರುಗೇಟು

ಇತ್ತೀಚೆಗೆ ಮಾಧ್ಯಮ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಸುದೀಪ್​ಗೆ ಈ ಬಗ್ಗೆ ಪ್ರಶ್ನೆ ಮಾಡಲಾಗಿದೆ. ಅವರು ತಮ್ಮದೇ ಸ್ಟೈಲ್​ನಲ್ಲಿ ಇದಕ್ಕೆ ಉತ್ತರಿಸಿದ್ದಾರೆ. ‘ನಾವು ಓಡಾಡೋ ಕಾರುಗಳ ನಟ್ಟು-ಬೋಲ್ಟ್ ಕೂಡ ಟೈಟ್ ಇರಬೇಕು. ಅದನ್ನು ಮಾಡೋಕೆ ನಾನು ಹೋದರೆ ಸರಿ ಇರೋದಿಲ್ಲ. ಮೆಕ್ಯಾನಿಕ್ ಬಳಿಯೇ ಹೋಗಬೇಕು. ಕಾರಿನ ವಿಚಾರ ಅವರಿಗೆ ಮಾತ್ರ ಗೊತ್ತಿರುತ್ತದೆ. ಚಿತ್ರರಂಗದ ವಿಚಾರ ಚಿತ್ರರಂಗದವರಿಗೆ ಮಾತ್ರ ಗೊತ್ತು. ಅವರ ಬಗ್ಗೆ ಗೌರವ ಇದೆ. ಕೆಲವು ಸತ್ಯವನ್ನು ತಿಳಿದುಕೊಂಡು ಮಾತನಾಡಬೇಕು’ ಎಂದು ಸುದೀಪ್ ಹೇಳಿದ್ದರು.

ಡಿಕೆಶಿ ಪ್ರತಿಕ್ರಿಯೆ

ಮಾಧ್ಯಮಗಳ ಎದುರು ಡಿಕೆಶಿ ಅವರಿಗೆ ಸುದೀಪ್ ಪ್ರತಿಕ್ರಿಯೆ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನನಗೆ ಯಾರಿಗೂ ಉತ್ತರ ಕೊಡೋಕೆ ಇಷ್ಟ ಇಲ್ಲ. ಫಿಲ್ಮ್ ಚೇಂಬರ್​ಗೆ ಹೋಗಿ ನಾನು ಏನು ಮಾಡಿದ್ದೇನೆ ಎಂಬುದರ ಹಿಸ್ಟರಿ ತೆಗೆದುಕೊಂಡು ಬರಲಿ. ಅವರೆಲ್ಲರಿಗೂ ಉತ್ತರಿಸಬೇಕಿಲ್ಲ. ಕಾಲ ಉತ್ತರ ಕೊಡುತ್ತದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:49 pm, Sat, 21 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ