Puneeth Rajkumar: ಅಶ್ಲೀಲ ಪದಗಳಿಂದ ಪುನೀತ್​ಗೆ ಅವಮಾನ; ಜನರಿಗೆ ಮನುಷ್ಯತ್ವ ಇಲ್ವಾ? ಸುದೀಪ್​ ಪುತ್ರಿ ಸಾನ್ವಿ ಗರಂ

Saanvi Sudeep: ಪುನೀತ್​ ರಾಜ್​ಕುಮಾರ್​ ನಿಧನದ ಬಳಿಕ ಲಿಕ್ಕರ್​ ಸಿಗದೇ ಇರುವುದಕ್ಕೆ ಕೆಲವರಿಗೆ ಕಿರಿಕಿರಿ ಆಗಿದೆ. ಹಾಗಾಗಿ ಕೀಳು ಮನಸ್ಥಿತಿ ಪ್ರದರ್ಶಿಸುತ್ತಿದ್ದಾರೆ. ಅಂಥವರಿಗೆ ಸುದೀಪ್​ ಮಗಳು ಸಾನ್ವಿ ಛೀಮಾರಿ ಹಾಕಿದ್ದಾರೆ.

Puneeth Rajkumar: ಅಶ್ಲೀಲ ಪದಗಳಿಂದ ಪುನೀತ್​ಗೆ ಅವಮಾನ; ಜನರಿಗೆ ಮನುಷ್ಯತ್ವ ಇಲ್ವಾ? ಸುದೀಪ್​ ಪುತ್ರಿ ಸಾನ್ವಿ ಗರಂ
(ಅಶ್ಲೀಲ ಪದಗಳಿಂದ ಪುನೀತ್​ಗೆ ಅವಮಾನ)
Follow us
TV9 Web
| Updated By: ಮದನ್​ ಕುಮಾರ್​

Updated on:Nov 01, 2021 | 9:08 AM

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಕನ್ನಡ ನಾಡು ಬರಡಾಗಿದೆ. ಅವರು ನಿಧನರಾಗಿ ನಾಲ್ಕು ದಿನ ಕಳೆದಿದ್ದರೂ ಅಭಿಮಾನಿಗಳ ಮನದಲ್ಲಿನ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ. ಆದರೆ ಇಂಥ ಸಂದರ್ಭದಲ್ಲೂ ಕೆಲವರು ಕೀಳು ಮನಸ್ಥಿತಿಯನ್ನು ಪ್ರದರ್ಶಿಸುತ್ತಿದ್ದಾರೆ. ಪುನೀತ್​ ರಾಜ್​ಕುಮಾರ್​​ಗೆ ಅಗೌರವ ತೋರುವಂತಹ ಪೋಸ್ಟ್​ಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಪರ ರಾಜ್ಯದಿಂದ ಬಂದು, ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಕಿಂಚಿತ್ತೂ ಗೌರವ ಇಲ್ಲದಂತೆ ನಡೆದುಕೊಳ್ಳುತ್ತಿರುವ ಇಂಥ ಜನರ ಬಗ್ಗೆ ನಟ ಕಿಚ್ಚ ಸುದೀಪ್​ ಪುತ್ರಿ ಸಾನ್ವಿ ಗರಂ ಆಗಿದ್ದಾರೆ.

ಅಪ್ಪು ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿತ್ತು. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೇ ಇರಲಿ ಎಂಬುದು ಈ ಆದೇಶದ ಹಿಂದಿನ ಉದ್ದೇಶ ಆಗಿತ್ತು. ಕುಡಿದ ಅಮಲಿನಲ್ಲಿ ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಬಹುದು. ಅದನ್ನು ತಪ್ಪಿಸಲು ಮದ್ಯ ಮಾರಾಟಕ್ಕೆ ಬ್ರೇಕ್​ ಹಾಕಲಾಗಿತ್ತು. ಆದರೆ ಈ ಆದೇಶದಿಂದ ಲಿಕ್ಕರ್​ ಸಿಗದೇ ಇರುವುದಕ್ಕೆ ಕೆಲವರಿಗೆ ಕಿರಿಕಿರಿ ಆಗಿದೆ. ಅದರಲ್ಲೂ ಉತ್ತರ ಭಾರತದಿಂದ ಬಂದು ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವವರು ಎಣ್ಣೆ ಸಿಗದಿದ್ದಕ್ಕೆ ಕೀಳು ಮನಸ್ಥಿತಿ ಪ್ರದರ್ಶಿಸುತ್ತಿದ್ದಾರೆ.

ಕೆಲವರ ವರ್ತನೆ ಮಿತಿ ಮೀರಿದೆ. ನಿಷೇಧದ ನಡುವೆಯೂ ಲಿಕ್ಕರ್​ ಕೊಂಡುಕೊಳ್ಳುವಲ್ಲಿ ಯಶಸ್ವಿ ಆಗಿದ್ದಾರೆ. ಬಳಿಕ ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿ, ಅಶ್ಲೀಲ ಪದಗಳಿಂದ ಪುನೀತ್​ ರಾಜ್​ಕುಮಾರ್​ ಅವರನ್ನು ಅವಮಾನಿಸಿದ್ದಾರೆ. ಬಿಯರ್​ ಬಾಟಲಿಯ ಚಿತ್ರ ಹಂಚಿಕೊಂಡು, ‘ರಾಜ್​ಕುಮಾರ್​​ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಆತನನ್ನು ನೆನಪಿಟ್ಟುಕೊಳ್ಳಿ. ಮರೆಯಬೇಡಿ. ಯಾಕೆಂದರೆ, ಇದನ್ನು ಕುಡಿದ ಬಳಿಕ ಅವನ ಸಮಾಧಿ ಮೇಲೆ ನಾವು ಮೂ** ಮಾಡುತ್ತೇವೆ’ ಎಂದು ಕಿಡಿಗೇಡಿಯೊಬ್ಬ ಪೋಸ್ಟ್​ ಮಾಡಿದ್ದಾನೆ. ಇಂಥವರಿಗೆ ಮನುಷ್ಯತ್ವ ಇಲ್ಲವೇ ಎಂದು ಸಾನ್ವಿ ಕೇಳಿದ್ದಾರೆ. ‘ಕೇವಲ ಆಲ್ಕೋಹಾಲ್​ಗಾಗಿ ಪುನೀತ್​ ಬಗ್ಗೆ ಇಂಥ ವರ್ತನೆಯೇ? ಜನರಲ್ಲಿ ಮನುಷ್ಯತ್ವ ಉಳಿದಿಲ್ಲವೇ?’ ಎಂದು ಸಾನ್ವಿ ಛೀಮಾರಿ ಹಾಕಿದ್ದಾರೆ.

Puneeth Rajkumar insult

(ಕಿಡಿಗೇಡಿಯ ಪೋಸ್ಟ್​ಗೆ ಛೀಮಾರಿ ಹಾಕಿದ ಸುದೀಪ್​ ಪುತ್ರಿ ಸಾನ್ವೀ )

‘ಬೆಂಗಳೂರಿನಲ್ಲಿ ಇರುವ ಉತ್ತರ ಭಾರತದ ಸ್ನೇಹಿತರಿಗೆ ಹೇಳೋದೇನೆಂದರೆ, ಕರ್ನಾಟಕ ಸರ್ಕಾರ ಸರಿಯಾದ ಕ್ರಮವನ್ನೇ ಕೈಗೊಂಡಿದೆ. ಇಂಥ ಸಮಯದಲ್ಲಿ ಮದ್ಯ ಮಾರಾಟ ಒಳ್ಳೆಯದಲ್ಲ. ಸ್ವಲ್ಪವಾದರೂ ಪ್ರಜ್ಞಾವಂತಿಕೆ ತೋರಿಸಿ. ಅಗೌರವ ತೋರುವಂತಹ ಮಾತುಗಳನ್ನು ಆಡಬೇಡಿ’ ಎಂದು ವ್ಯಕ್ತಿಯೊಬ್ಬರು ಮಾಡಿದ ಪೋಸ್ಟ್​ ಅನ್ನು ಸಾನ್ವಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಪುನೀತ್ ಅವರ ಸಾಮಾಜಿಕ ಕೆಲಸಗಳು ಎಲ್ಲರಿಗೂ ಮಾದರಿ ಆಗಿವೆ. ಆ ಕಾರಣಕ್ಕಾಗಿಯೇ​ ಅವರನ್ನು ಕೋಟ್ಯಂತರ ಜನರು ಆರಾಧಿಸುತ್ತಾರೆ. ಅವರ ನಿಧನದಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ವಿಚಲಿತರಾಗಿದ್ದಾರೆ. ಅಂಥ ವ್ಯಕ್ತಿ ಬಗ್ಗೆ ಸಾರ್ವಜನಿಕವಾಗಿ ಅವಹೇಳಕಾರಿ ಪದಗಳಲ್ಲಿ ಅವಮಾನ ಮಾಡಿರುವ ಕಿಡಿಗೇಡಿಗಳಿಗೆ ಕಾನೂನಿನ ಮೂಲಕ ಪಾಠ ಕಲಿಸಬೇಕಿದೆ.

ಇದನ್ನೂ ಓದಿ:

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Published On - 8:39 am, Mon, 1 November 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ