ಒಂದೇ ದಿನ ‘ಸಲಗ’ ಮತ್ತು ‘ಕೋಟಿಗೊಬ್ಬ 3’; ಖಚಿತಪಡಿಸಿದ ನಿರ್ಮಾಪಕ

ಈ ಬಗ್ಗೆ ಮಾತನಾಡಿರುವ ದುನಿಯಾ ವಿಜಯ್​ ‘ನಟ ಸುದೀಪ್​ ಹಾಗೂ ನನ್ನ ನಡುವೆ ಒಳ್ಳೆಯ ಸ್ಪರ್ಧೆ ಇದೆ. ಇದನ್ನು ಸ್ಟಾರ್​ ವಾರ್​ ಎಂದು ಭಾವಿಸುವುದು ಬೇಡ’ ಎಂದು ಮನವಿ ಮಾಡಿದ್ದಾರೆ.

ಒಂದೇ ದಿನ ‘ಸಲಗ’ ಮತ್ತು ‘ಕೋಟಿಗೊಬ್ಬ 3’; ಖಚಿತಪಡಿಸಿದ ನಿರ್ಮಾಪಕ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 26, 2021 | 5:41 PM

ಅಕ್ಟೋಬರ್​ 14ರಂದು ಎರಡು ಸ್ಟಾರ್​ ಸಿನಿಮಾಗಳು ಒಟ್ಟಿಗೆ ರಿಲೀಸ್​ ಆಗುತ್ತಿವೆ. ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಹಾಗೂ ದುನಿಯಾ ವಿಜಯ್​ ‘ಸಲಗ’ ಸಿನಿಮಾ ಒಂದೇ ದಿನ ರಿಲೀಸ್​ ಆಗುವುದು ಬಹುತೇಕ ಖಚಿತವಾಗಿದೆ. ಈ ವಿಚಾರದ ಬಗ್ಗೆ ಸಲಗ ನಿರ್ಮಾಪಕ ಕೆ.ಪಿ. ಶ್ರೀಕಾಂತ್​ ಮಾತನಾಡಿದ್ದಾರೆ.

‘ಇದು ಸ್ಟಾರ್​ವಾರ್ ಅಲ್ಲ. ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬು ಅವರ ನಿರ್ಧಾರ ತಡವಾಗಿದೆ. ಕಳೆದ ಒಂದೂವರೆ ವರ್ಷದಿಂದ ನಾವು ಕಾಯುತ್ತಿದ್ದೆವು. 3 ಸಿನಿಮಾಗಳ ನಿರ್ಮಾಪಕರು ಮಾತುಕತೆ ನಡೆಸಿದ್ದೆವು. ಸರ್ಕಾರ ಅನುಮತಿ ನೀಡಿದ ನಂತರ ಮೊದಲು ‘ಸಲಗ’ ಚಿತ್ರ ಬಿಡುಗಡೆ ಮಾಡುವ ಬಗ್ಗೆ ಚರ್ಚೆಯಾಗಿತ್ತು. ಮೊದಲೇ ಮಾತುಕತೆ ನಡೆಸಿರುವಂತೆ ‘ಸಲಗ’ ಚಿತ್ರ ಬಿಡುಗಡೆ ಆಗುತ್ತಿದೆ. ದಸರಾ ಹಬ್ಬ ಹಿನ್ನೆಲೆಯಲ್ಲಿ ಅಕ್ಟೋಬರ್ 14ರಂದು ಸಲಗ ಚಿತ್ರ ಬಿಡುಗಡೆ ಮಾಡುತ್ತಿದ್ದೇವೆ’ ಎಂದರು ಶ್ರೀಕಾಂತ್​.

‘ನಮ್ಮ ಚಿತ್ರಕ್ಕೆ ನಟ ಸುದೀಪ್ ಟ್ವೀಟ್​ ಮಾಡಿ ಹಾರೈಸಿದ್ದಾರೆ. ನಟ ಸುದೀಪ್​ ಮೊದಲಿನಿಂದಲೂ ‘ಸಲಗ’ ಜೊತೆಗಿದ್ದಾರೆ. ಕನ್ನಡದ 2 ಸಿನಿಮಾಗಳು ಒಟ್ಟಿಗೆ ಬರುತ್ತಿರುವುದರಿಂದ ಸಂತಸ ಇದೆ. ಕನ್ನಡ ಚಿತ್ರರಂಗದ ನಾವೆಲ್ಲರೂ ಒಂದಾಗಿದ್ದೇವೆ. ಒಂದೊಂದು ಊರಿನಲ್ಲಿ 2ಕ್ಕಿಂತಲೂ ಹೆಚ್ಚು ಟಾಕೀಸ್​ಗಳಿವೆ. ಆದ್ದರಿಂದ 2 ಚಿತ್ರಗಳಿಗೆ ಟಾಕೀಸ್​ ಸಮಸ್ಯೆ ಉಂಟಾಗುವುದಿಲ್ಲ’ ಎಂದರು ಅವರು.

ಈ ಬಗ್ಗೆ ಮಾತನಾಡಿರುವ ದುನಿಯಾ ವಿಜಯ್​, ‘ನಟ ಸುದೀಪ್​ ಹಾಗೂ ನನ್ನ ನಡುವೆ ಒಳ್ಳೆಯ ಸ್ಪರ್ಧೆ ಇದೆ. ಇದನ್ನು ಸ್ಟಾರ್​ ವಾರ್​ ಎಂದು ಭಾವಿಸುವುದು ಬೇಡ. ಅಭಿಮಾನಿಗಳು ಯಾರೂ ಆ ರೀತಿ ಭಾವಿಸಬೇಡಿ. ಕಷ್ಟಪಟ್ಟು ನಾನು ಈ ಸಲಗ ಚಿತ್ರವನ್ನು ಮಾಡಿದ್ದೇನೆ. ನಾಳೆ ಮತ್ತೆ ಸಭೆ ಮಾಡಿ ಚರ್ಚೆ ಮಾಡುತ್ತೇವೆ. ಒಬ್ಬ ನಿರ್ಮಾಪಕನನ್ನ ಕಾಪಾಡುವುದು ನಿಮ್ಮ ಜವಾಬ್ದಾರಿ. ನಮ್ಮ ನಿಲುವಿನಲ್ಲಿ ಯಾವುದೇ ರೀತಿ ಬದಲಾವಣೆ ಇಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ ಸಿನಿ ಹಬ್ಬ; ಬಹು ನಿರೀಕ್ಷಿತ ಸ್ಟಾರ್​ ಸಿನಿಮಾಗಳ ರಿಲೀಸ್​ ಡೇಟ್​ ಅನೌನ್ಸ್​

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ