AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧೂರ ಆಪರೇಷನ್​ಗೆ ಕಿಚ್ಚನ ಮೆಚ್ಚುಗೆ; ‘ನ್ಯಾಯ ಸಿಕ್ಕಿದೆ’ ಎಂದ ಸುದೀಪ್

ಮೇ 7ರಂದು ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರಕ್ಕೆ ನಟ ಕಿಚ್ಚ ಸುದೀಪ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಸೇನೆಯ ಕ್ರಮವನ್ನು ಅವರು ಮೆಚ್ಚಿಕೊಂಡಿದ್ದಾರೆ. ಭಾರತದ ಧೈರ್ಯ ಮತ್ತು ಸೇನೆಯ ಶೌರ್ಯವನ್ನು ಅವರು ತಮ್ಮ ಟ್ವೀಟ್‌ನಲ್ಲಿ ಪ್ರಶಂಸಿಸಿದ್ದಾರೆ.

ಸಿಂಧೂರ ಆಪರೇಷನ್​ಗೆ ಕಿಚ್ಚನ ಮೆಚ್ಚುಗೆ; ‘ನ್ಯಾಯ ಸಿಕ್ಕಿದೆ’ ಎಂದ ಸುದೀಪ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on:May 07, 2025 | 12:46 PM

Share

ಇಂದು (ಮೇ 7) ಪ್ರತಿಯೊಬ್ಬರ ಭಾರತೀಯನ ಪಾಲಿಗೆ ವಿಶೇಷ ದಿನವಾಗಿತ್ತು. ಏಕೆಂದರೆ, ಪಹಲ್ಗಾಮ್ ದಾಳಿಗೆ (Pahalgam Attack) ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರರ ಅಡಗು ತಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ. ಇದಕ್ಕೆ ಕಿಚ್ಚ ಸುದೀಪ್ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಸೇನೆಯ ಕ್ರಮದ ಬಗ್ಗೆ ಅವರು ಶ್ಲಾಘನೆ ಹೊರಹಾಕಿದ್ದಾರೆ. ಈ ಮೊದಲು ‘ಪಹಲ್ಗಾಮ್’ ದಾಳಿ ಆದಾಗ ಸುದೀಪ್ ಸಂತಾಪ ಸೂಚಿಸಿದ್ದರು.

ಸಿಂಧೂರ ಆಪರೇಷನ್ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್, ‘ಓರ್ವ ಭಾರತೀಯನಾಗಿ, ಈ ಪವಿತ್ರ ಭೂಮಿಯ ಮಗನಾಗಿ ಹಲ್ಗಾಮ್‌ನಲ್ಲಿ ನಡೆದ ಘಟನೆ ನನಗೆ ನೋವನ್ನು ತಂದಿತ್ತು. ಇಂದು ನನಗೆ ನ್ಯಾಯ ಸಿಕ್ಕಂತೆ ಅನಿಸುತ್ತಿದೆ. ಆಪರೇಷನ್ ಸಿಂಧೂರ: ಕೇವಲ ಒಂದು ಧ್ಯೇಯವಲ್ಲ, ಬದಲಾಗಿ ಒಂದು ಪವಿತ್ರ ಪ್ರತಿಜ್ಞೆ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ
Image
ಆ ಒಂದು ಘಟನೆಯಿಂದ ಅಂಬಿಗೆ ಅಣ್ಣಾವ್ರ ಮೇಲಿನ ಗೌರವ ಹೆಚ್ಚಿತ್ತು
Image
‘ಎಲ್ಲರಿಗೂ ಒಂದೇ ರೀತಿಯ ಸಂಭಾವನೆ’; ಸಮಂತಾ ಹೊಸ ನಿಯಮ
Image
ಪಾಕ್ ಉಗ್ರ ನೆಲೆಗಳ ಮೇಲೆ ಭಾರತದ ಸರ್ಜಿಕಲ್ ಸ್ಟ್ರೈಕ್; ಉಘೇ ಎಂದ ಬಾಲಿವುಡ್
Image
ರಣಬೀರ್-ರಣವೀರ್​ನ ತಂದೆ ತಾಯಿಗೆ ಹೋಲಿಸಿದ್ದ ದೀಪಿಕಾ ಪಡುಕೋಣೆ

ಇದನ್ನೂ ಓದಿ: ಸೆಟ್ಟೇರಿತು ಕಿಚ್ಚ ಸುದೀಪ್ ನಟನೆಯ ‘ಬಿಲ್ಲ ರಂಗ ಬಾಷ’; BRB ಫಸ್ಟ್ ಲುಕ್ ರಿವೀಲ್

‘ಭಾರತದ ಸಿಂಧೂರ ಮತ್ತೆ ನಮಗೆ ಸಿಕ್ಕಿದೆ. ನಮ್ಮ ಧೈರ್ಯಶಾಲಿಗಳು (ಯೋಧರು) ಸಿಂಧೂರದ ಗೌರವವನ್ನು ಬೆಂಕಿ ಮತ್ತು ನಿಖರತೆಯೊಂದಿಗೆ ಮತ್ತೆ ತಂದಿದ್ದಾರೆ. ನಮ್ಮ ಸಶಸ್ತ್ರ ಪಡೆಗಳಿಗೆ ಅನಂತ ವಂದನೆಗಳು. ದೃಢವಾಗಿ ಮತ್ತು ನಿರ್ಭೀತವಾಗಿ ನಿಂತ ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ಇಲಾಖೆಗೆ ಧನ್ಯವಾದ. ಭಾರತ ಮರೆಯುವುದಿಲ್ಲ, ಭಾರತ ಕ್ಷಮಿಸುವುದಿಲ್ಲ’ ಎಂದು ಸುದೀಪ್ ಹೇಳಿದ್ದಾರೆ.

ಪಹಲ್ಗಾಮ್‌ನಲ್ಲಿ ಮುಗ್ಧರ ಮೇಲೆ ನಡೆದ ದಾಳಿಯನ್ನು ನೋಡಿ ಸುದೀಪ್ ಮರುಗಿದ್ದರು. ‘ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿ’ ಎಂದಿದ್ದ ಸುದೀಪ್, ಇದಕ್ಕೆ ಪ್ರತೀಕಾರ ಬೇಕು ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:39 pm, Wed, 7 May 25

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್