AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ ಸೆಟ್​​ನಲ್ಲಿ ಸುದೀಪ್, ಅತಿಥಿ ಪಾತ್ರದಲ್ಲಿ ಕಿಚ್ಚ?

Kichcha Sudeep-Dhruva Sarja: ಧ್ರುವ ಸರ್ಜಾ ನಟಿಸಿ ಪ್ರೇಮ್ ನಿರ್ದೇಶನ ಮಾಡುತ್ತಿರುವ ‘ಕೆಡಿ’ ಸಿನಿಮಾದ ಚಿತ್ರೀಕರಣ ಹೈದರಾಬಾದ್​​ನ ರಾಮೋಜಿ ಫಿಲಂ ಸಿಟಿಯಲ್ಲಿ ನಡೆಯುತ್ತಿದೆ. ಸಿನಿಮಾ ಚಿತ್ರೀಕರಣಕ್ಕಾಗಿ ಅದ್ಧೂರಿ ಸೆಟ್ ನಿರ್ಮಾಣ ಮಾಡಲಾಗಿದೆ. ಸಿನಿಮಾ ಸೆಟ್​ಗೆ ನಟ ಸುದೀಪ್ ಭೇಟಿ ನೀಡಿದ್ದಾರೆ. ‘ಕೆಡಿ’ ಸಿನಿಮಾ ಬಹುತಾರಾಗಣದ ಸಿನಿಮಾ ಆಗಿದ್ದು, ಸುದೀಪ್ ಅವರು ‘ಕೆಡಿ’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಅನುಮಾನ ಮೂಡಿದೆ.

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ ಸೆಟ್​​ನಲ್ಲಿ ಸುದೀಪ್, ಅತಿಥಿ ಪಾತ್ರದಲ್ಲಿ ಕಿಚ್ಚ?
Dhruva Sarja
ಮಂಜುನಾಥ ಸಿ.
|

Updated on: Sep 13, 2025 | 2:41 PM

Share

ಧ್ರುವ ಸರ್ಜಾ ನಟಿಸಿ, ಪ್ರೇಮ್ ನಿರ್ದೇಶನ ಮಾಡುತ್ತಿರುವ ಬಹುತಾರಾಗಣದ ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ’ ಶೂಟಿಂಗ್ ಭರದಿಂದ ಸಾಗಿದೆ. ಭರ್ಜರಿ ಆಕ್ಷನ್ ಸಿನಿಮಾ ಅನ್ನು ಪ್ರೇಮ್ ತೆರೆಗೆ ತರುವ ಪ್ರಯತ್ನದಲ್ಲಿದ್ದು, ಈಗಾಗಲೇ ಬಿಡುಗಡೆ ಆಗಿರುವ ಟೀಸರ್​​​ನಲ್ಲಿ ರಕ್ತದ ಓಕುಳಿಯನ್ನೇ ಹರಿಸಿದ್ದಾರೆ. ಧ್ರುವ ಸರ್ಜಾ ನಾಯಕರಾಗಿರುವ ಈ ಸಿನಿಮಾದಲ್ಲಿ ಹಲವು ದೊಡ್ಡ ಸ್ಟಾರ್​​ಗಳನ್ನು ಅತಿಥಿ ಪಾತ್ರಗಳಿಗೆ ಹಾಕಿಕೊಂಡಿದ್ದು, ಇದೀಗ ಮತ್ತೊಬ್ಬ ಪ್ಯಾನ್ ಇಂಡಿಯಾ ಸ್ಟಾರ್ ಸುದೀಪ್ ಅವರು ಸಹ ‘ಕೆಡಿ’ಗೆ ಕೈಜೋಡಿಸಿದಂತಿದೆ.

ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದ ಚಿತ್ರೀಕರಣ ಹೈದರಾಬಾದ್​​ನ ರಾಮೋಜಿ ಫಿಲಂ ಸಿಟಿ ಸ್ಟುಡಿಯೋನಲ್ಲಿ ನಡೆಯುತ್ತಿದೆ. ಸಿನಿಮಾ ಚಿತ್ರೀಕರಣಕ್ಕಾಗಿ ದೊಡ್ಡ ರೈಲಿನ ಸೆಟ್ ಹಾಕಿ ಆಕ್ಷನ್ ದೃಶ್ಯದ ಚಿತ್ರೀಕರಣವನ್ನು ಮಾಡಲಾಗುತ್ತಿದೆ. ಸಿನಿಮಾ ಸೆಟ್​​ಗೆ ಕಿಚ್ಚ ಸುದೀಪ್ ಭೇಟಿ ನೀಡಿದ್ದು, ಸಿನಿಮಾದ ಅತಿಥಿ ಪಾತ್ರದಲ್ಲಿ ಕಿಚ್ಚ ನಟಿಸಲಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

ಸುದೀಪ್ ಅವರು ಈ ಹಿಂದೆ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಸಿನಿಮಾನಲ್ಲಿ ನಟಿಸಿದ್ದಾರೆ. ಆದರೆ ಆ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರನ್ನು ತಲುಪಿರಲಿಲ್ಲ. ಇದೀಗ ಹಲವು ಸ್ಟಾರ್ ನಟ-ನಟಿಯರನ್ನು ಗುಡ್ಡೆ ಹಾಕಿಕೊಂಡು ಪ್ರೇಮ್ ಅವರು ‘ಕೆಡಿ’ ಸಿನಿಮಾ ಮಾಡುತ್ತಿದ್ದು, ಧ್ರುವ ಸರ್ಜಾ ಪಾಲಿಗೆ ಇದು ಮಹತ್ವದ ಸಿನಿಮಾ ಆಗಿದೆ. ಧ್ರುವ ಸರ್ಜಾ, ಸುದೀಪ್ ಅವರ ಆಪ್ತ ನಟ ಆಗಿರುವ ಕಾರಣ, ಇದೀಗ ಸುದೀಪ್ ‘ಕೆಡಿ’ ಸಿನಿಮಾನಲ್ಲಿ ಮಹತ್ವದ ಅತಿಥಿ ಪಾತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೆ ಚಿತ್ರತಂಡದಿಂದ ಹೊರಬೀಳಬೇಕಿದೆ.

ಇದನ್ನೂ ಓದಿ:ಎಷ್ಟೇ ನೆಗೆಟಿವ್ ಕಮೆಂಟ್ ಬಂದರೂ ತಲೆ ಕೆಡಿಸಿಕೊಂಡಿಲ್ಲ ಅನ್ವೇಶಿ ಜೈನ್

‘ಕೆಡಿ’ ಸಿನಿಮಾ 80ರ ದಶಕದ ರೌಡಿಸಂ ಕತೆಯನ್ನು ಒಳಗೊಂಡಿದ್ದು, ಸಿನಿಮಾನಲ್ಲಿ ಬಾಲಿವುಡ್ ಸ್ಟಾರ್ ನಟ, ‘ಕೆಜಿಎಫ್’ ಅಧೀರ ಖ್ಯಾತಿಯ ಸಂಜಯ್ ದತ್ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನು ಸಿನಿಮಾನಲ್ಲಿ ಬಾಲಿವುಡ್ ಬೆಡಗಿ, ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತರಾಗಿರುವ ಶಿಲ್ಪಾ ಶೆಟ್ಟಿ ಸಹ ನಟಿಸುತ್ತಿದ್ದಾರೆ. ರೇಷ್ಮಾ ನಾಣಯ್ಯ ಸಿನಿಮಾದ ನಾಯಕಿ. ರವಿಚಂದ್ರನ್, ರಮೇಶ್ ಅರವಿಂದ್ ಹಾಗೂ ಅಭಿಜಿತ್ ಅವರುಗಳು ಹಿಂದೆಂದೂ ಕಾಣದಿದ್ದ ರೀತಿಯ ರಫ್ ಪಾತ್ರದಲ್ಲಿ ಈ ಸಿನಿಮಾನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾನಲ್ಲಿ ಮೋಹನ್​​ಲಾಲ್ ಸಹ ಇದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಐಟಂ ಹಾಡಿಗೆ ನೋರಾ ಫತೇಹಿ ಸೊಂಟ ಕುಣಿಸಿದ್ದಾರೆ. ಸಿನಿಮಾ ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್