ಕಿಚ್ಚ ಸುದೀಪ್ v/s ನಿರ್ಮಾಪಕ ಕುಮಾರ್: ಮೊದಲ ದಿನದ ಸಭೆ ಅಂತ್ಯ, ನಾಳೆಯೂ ಮುಂದುವರೆಯಲಿದೆ ಚರ್ಚೆ

Sudeep vs MN Kumar: ನಟ ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ವಿವಾದ ಬಗೆಹರಿಸಲು ಕರೆಯಲಾಗಿದ್ದ ಸಭೆ ಅಂತ್ಯವಾಗಿದೆ.

ಕಿಚ್ಚ ಸುದೀಪ್ v/s ನಿರ್ಮಾಪಕ ಕುಮಾರ್: ಮೊದಲ ದಿನದ ಸಭೆ ಅಂತ್ಯ, ನಾಳೆಯೂ ಮುಂದುವರೆಯಲಿದೆ ಚರ್ಚೆ
ಎಂಎನ್ ಕುಮಾರ್-ಸುದೀಪ್
Follow us
| Updated By: ಮಂಜುನಾಥ ಸಿ.

Updated on: Jul 21, 2023 | 10:44 PM

ಕಿಚ್ಚ ಸುದೀಪ್ (Sudeep) ಹಾಗೂ ನಿರ್ಮಾಪಕ ಎಂಎನ್ ಕುಮಾರ್ (MN Kumar) ನಡುವಿನ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಲು ನಿಶ್ಚಯಿಸಿ, ರವಿಚಂದ್ರನ್ ನೇತೃತ್ವದಲ್ಲಿ ಇಂದು (ಜುಲೈ 21) ಸಭೆ ನಡೆಸಲಾಯ್ತು. ಮಧ್ಯಾಹ್ನ 3 ಗಂಟೆಗೆ ಆರಂಭವಾದ ಸಭೆ ರಾತ್ರಿ 10ರ ವರೆಗೆ ನಡೆದಿದೆಯಾದರೂ ಇಂದು ಏಕಮತದ ನಿರ್ಣಯಕ್ಕೆ ಬರಲಾಗಿಲ್ಲ. ಆದರೆ ಸಂಧಾನ ಬಹುತೇಕ ಯಶಸ್ವಿಯಾಗುವ ಹಂತದಲ್ಲಿದೆ ಎನ್ನಲಾಗಿದೆ. ಹಾಗಾಗಿ ನಾಳೆಯೂ (ಜುಲೈ 22) ಸಭೆ ಮುಂದುವರೆಯಲಿದ್ದು, ಇಂದು ಭಾಗಿಯಾಗಿದ್ದ ಪ್ರಮುಖರೆಲ್ಲರೂ ನಾಳೆಯೂ ಭಾಗಿಯಾಗಲಿದ್ದಾರೆ.

ಸತತ ಎಳು ಗಂಟೆಗಳ ಕಾಲ ನಡೆದ ಸಂಧಾನ ಸಭೆಯಲ್ಲಿ ಸುದೀಪ್, ಎಂಎನ್ ಕುಮಾರ್ ಅವರುಗಳು ತಮ್ಮ-ತಮ್ಮ ಪರವಾದ ವಾದಗಳನ್ನು ಮಂಡಿಸಿದ್ದಾರೆ. ಸಭೆಯಲ್ಲಿ ಭಾಗಿಯಾಗಿದ್ದ ಪ್ರಮುಖರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಸುದೀಪ್ ಹಾಗೂ ಎಂಎನ್ ಕುಮಾರ್ ಅವರೂ ಪರಸ್ಪರ ಮಾತುಕತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಂಧಾನ ಸಭೆ ಬಹುತೇಕ ಯಶಸ್ವಿಯಾಗಿದೆಯಾದರೂ ಕೆಲವು ನಿರ್ಣಯಗಳನ್ನು ಸಭೆಯ ಮುಖಂಡರು ಮಾಡಬೇಕಾಗಿದೆ. ಹಾಗಾಗಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.

ಜುಲೈ 23 ರಂದು ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಅಂದು ಅಂತಿಮ ತೀರ್ಮಾನವನ್ನು ಸುದೀಪ್ ಹಾಗೂ ಎಂಎನ್ ಕುಮಾರ್ ಅವರ ಮುಂದಿಡಲಾಗುತ್ತದೆ ಎನ್ನಲಾಗಿದೆ. ಸಭೆಯ ಪ್ರಮುಖರ ತೀರ್ಪಿನ ಅನ್ವಯ ಇಬ್ಬರೂ ಸಹ ನಡೆದುಕೊಳ್ಳಬೇಕಾದ ಷರತ್ತು ಸಹ ವಿಧಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿವೆ.

ಇದನ್ನೂ ಓದಿ:ಸುದೀಪ್​ರ ರನ್ನ ಸಿನಿಮಾ ಸಮಯದ 2.50 ಕೋಟಿ ರೂ. ವಿವಾದ ನೆನಪಿಸಿದ ಸಾರಾ ಗೋವಿಂದು

ಇಂದು ರವಿಚಂದ್ರನ್ ಅವರ ಹೊಸಕೇರೆಹಳ್ಳಿ ಮನೆಯಲ್ಲಿ ನಡೆದ ಸಭೆಯಲ್ಲಿ ಸುದೀಪ್, ಎಂಎನ್ ಕುಮಾರ್, ಜಾಕ್ ಮಂಜು, ರಾಕ್ ಲೈನ್, ಭಾ.ಮ.ಹರೀಶ್, ಉಮೇಶ್ ಬಣಕರ್ ಅವರುಗಳು ಸಭೆಯಲ್ಲಿ ಹಾಜರಿದ್ದರು. ಶಿವರಾಜ್ ಕುಮಾರ್ ಅವರು ಹೈದರಾಬಾದ್​ನಲ್ಲಿ ಇದ್ದ ಕಾರಣ ಇಂದಿನ ಸಭೆಗೆ ಆಗಮಿಸಿರಲಿಲ್ಲ.

ಸುದೀಪ್ ಅವರು ತಮ್ಮಿಂದ ಅಡ್ವಾನ್ಸ್ ಹಣ ಪಡೆದು ಅದನ್ನು ಮರಳಿಸಿಲ್ಲ ಅಲ್ಲದೆ ಸಿನಿಮಾಕ್ಕೆ ಡೇಟ್ಸ್ ಸಹ ನೀಡುತ್ತಿಲ್ಲ ಎಂದು ಆರೋಪ ಮಾಡಿದ್ದರು. ಇದು ಮಾತ್ರವೇ ಅಲ್ಲದೆ ನಾನು ನಿರ್ಮಿಸಬೇಕಿದ್ದ ಸಿನಿಮಾ ಸಹ ತಪ್ಪಿಸಿದ್ದಾರೆ ಎಂದು ಸಹ ಕುಮಾರ್ ಆರೋಪ ಮಾಡಿದ್ದರು. ಆರೋಪ ಮಾಡಿದ ಬೆನ್ನಲ್ಲೆ ನಿರ್ಮಾಪಕ ರೆಹಮಾನ್ ಸಹ ಸುದೀಪ್ ವಿರುದ್ಧ ಆರೋಪ ಮಾಡಿದರು.

ಇದಾದ ಬಳಿಕ ನೇರವಾಗಿ ನ್ಯಾಯಾಲಯಕ್ಕೆ ಮೊರೆ ಹೋದ ಸುದೀಪ್, ಆರೋಪ ಮಾಡಿದ ನಿರ್ಮಾಪಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದರು. ನೊಟೀಸ್ ಬಂದ ಬಳಿಕ ಕುಮಾರ್ ಅವರು ತಮಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಫಿಲಂ ಚೇಂಬರ್ ಎದುರು ಧರಣಿ ಕೂತರು. ಕೊನೆಗೆ ರವಿಚಂದ್ರನ್ ಅವರು ತಾವು ಸಂಧಾನ ಸಭೆ ನಡೆಸುವುದಾಗಿ ಒಪ್ಪಿಕೊಂಡ ಬಳಿಕ ಧರಣಿ ನಿಲ್ಲಿಸಿ ರವಿಚಂದ್ರನ್ ಅನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕೊನೆಗೆ ಇಂದು ಮೊದಲ ಹಂತದ ಸಭೆ ಮುಗಿದಿದ್ದು ಮುಂದಿನ ಸಭೆ ನಾಳೆ ಅಥವಾ ನಾಡಿದ್ದು ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ