
ಕನ್ನಡ ಚಿತ್ರರಂಗದಲ್ಲಿ ಸ್ಟಾರ್‌ಗಳ ಮಧ್ಯೆ ಯಾವುದೂ ಸರಿ ಇಲ್ಲ, ಒಬ್ಬರಿಗೊಬ್ಬರು ಬೆಂಬಲ ಕೊಡೋದಿಲ್ಲ ಎಂಬಿತ್ಯಾದಿ ಮಾತುಗಳು ಆಗಾಗ ಕೇಳಿ ಬರುತ್ತಾ ಇರುತ್ತವೆ. ಈಗ ಕನ್ನಡ ಚಿತ್ರರಂಗದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ (Toxic Teaser) ನೋಡಿದ ಸುದೀಪ್ ಅವರು ಯಶ್ಗೆ ವಿಶ್ ಮಾಡಿದ್ದಾರೆ. ‘ಟಾಕ್ಸಿಕ್’ ಟೀಸರ್ ಬೋಲ್ಡ್ ಎಂದವರಿಗೂ ಅವರ ಬಳಿ ಉತ್ತರವಿದೆ. ಈ ಬೆಳವಣಿಗೆ ಸ್ಯಾಂಡಲ್ವುಡ್ ಪಾಲಿಗೆ ಪಾಸಿಟಿವ್ ಎಂಬ ಮಾತುಗಳು ಕೇಳಿ ಬಂದಿವೆ.
ಇಂದು (ಜನವರಿ 8) ಯಶ್ ಜನ್ಮದಿನ. ಈ ವಿಶೇಷ ದಿನದಂದು ‘ಟಾಕ್ಸಿಕ್’ ಚಿತ್ರದ ಟೀಸರ್ ರಿಲೀಸ್ ಆಗಿದೆ.ಈ ಟೀಸರ್ ಬಗ್ಗೆ ಮಾಹಿತಿ ನೀಡಲು ಯಶ್ ಟ್ವೀಟ್ ಮಾಡಿದ್ದರು. ರಾಯ ಅನ್ನೋದು ಯಶ್ ಮಾಡುತ್ತಿರುವ ಪಾತ್ರದ ಹೆಸರು. ಪಾತ್ರವನ್ನು ಪರಿಚಯಿಸುವ ರೀತಿಯಲ್ಲಿ ಈ ಟೀಸರ್ ಇದೆ. ಈ ಟೀಸರ್ ಬಗ್ಗೆ ಯಶ್ ಮಾಡಿದ ಟ್ವೀಟ್ನ ಸುದೀಪ್ ರೀಟ್ವೀಟ್ ಮಾಡಿಕೊಂಡಿದ್ದಾರೆ.
‘ಯಶ್ಗೆ ಶುಭಾಶಯಗಳು. ಅಲೆಗಳ ವಿರುದ್ಧ ಸಾಗಲು ಯಾವಾಗಲೂ ಸಮಯ ಬೇಕಾಗುತ್ತದೆ.ಈ ಹೊಸ ಹೆಜ್ಜೆ ನಿಮ್ಮನ್ನು ಅದೃಷ್ಟದ ಬಳಿ ಕೊಂಡೊಯ್ಯಲಿ. ನೀವು ನಿಮ್ಮ ಗುರಿಯನ್ನು ನಿರ್ಧರಿಸಿದ್ದೀರಿ’ ಎಂದು ಸುದೀಪ್ ಹೇಳಿದ್ದಾರೆ. ಈ ಟ್ವೀಟ್ ಸಾಕಷ್ಟು ವೈರಲ್ ಆಗುತ್ತಿದೆ. ಫ್ಯಾನ್ಸ್ ಅಚ್ಚರಿ ಹೊರಹಾಕಿದ್ದಾರೆ.
Bestest wshs… @TheNameIsYash
It always takes a lot to go against the tide.
May this new step take u closer to the destiny ,, u have set ua eyes upon.
Cheers ♥️— Kichcha Sudeepa (@KicchaSudeep) January 8, 2026
‘ಟಾಕ್ಸಿಕ್’ ಟೀಸರ್ ತುಂಬಾನೇ ಬೋಲ್ಡ್ ಆಗಿದೆ. ಇದನ್ನು ಅನೇಕರು ಟೀಕಿಸಿದ್ದಾರೆ. ಈ ಟೀಕೆಗಳು ಕೇಳಿ ಬಂದಿದ್ದರಿಂದಲೇ ‘ಅಲೆಗಳ ವಿರುದ್ಧ ಹೋಗಲು ಸಾಕಷ್ಟು ಸಮಯ ಬೇಕು’ ಎಂದು ಯಶ್ ಟ್ವೀಟ್ ಮಾಡಿರಬಹುದು ಎಂದು ಹೇಳಲಾಗುತ್ತಾ ಇದೆ.
ಯಶ್ ಅವರಿಗೆ ಸುದೀಪ್ ವಿಶ್ ಮಾಡಿದ್ದು ಅನೇಕರಿಗೆ ಅಚ್ಚರಿ ತಂದಿದೆ. ‘ಇದನ್ನು ನಾವು ನಿರೀಕ್ಷಿಸಿರಲಿಲ್ಲ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು, ‘ಇದು ನಮ್ಮ ಕಿಚ್ಚ ಸುದೀಪ್. ಯಶ್ ಹಾಗೂ ಸುದೀಪ್ ಮಧ್ಯೆ ಇರುವ ಬಾಂಡ್ನ ಅಭಿಮಾನಿಗಳೇ ಹಾಳು ಮಾಡಿದರು’ ಎಂದು ಕೆಲವರು ಹೇಳಿದ್ದಾರೆ.
ಇದನ್ನೂ ಓದಿ: ಹಾಲಿವುಡ್ ರೇಂಜ್ನಲ್ಲಿದೆ ‘ಟಾಕ್ಸಿಕ್’ ಟೀಸರ್; ಎಲ್ಲರಿಗೂ ವಾರ್ನಿಂಗ್ ಕೊಟ್ಟ ‘ರಾಯ’
ಯಶ್ ಅವರು ‘ಕೆಜಿಎಫ್ 2’ ಬಳಿಕ ಒಪ್ಪಿಕೊಂಡ ಸಿನಿಮಾ ‘ಟಾಕ್ಸಿಕ್’. ಈ ಚಿತ್ರದ ಟೀಸರ್ ನೋಡಿದ ಫ್ಯಾನ್ಸ್ ಮೆಚ್ಚಿಕೊಳ್ಳುತ್ತಿದ್ದಾರೆ. ಕೆಲವರು ಟೀಸರ್ ಸಖತ್ ಬೋಲ್ಡ್ ಎನ್ನುತ್ತಿದ್ದಾರೆ. ಸಿನಿಮಾನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.