AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರ ಮುಗಿಸಿ ಬಂದ ಸುದೀಪ್, ಜೊತೆಯಾದ ಎಲ್ಲರಿಗೂ ಧನ್ಯವಾದ ಅರ್ಪಣೆ, ಅಭಿಮಾನಿಗಳಿಗೆ ವಿಶೇಷ ಪ್ರೀತಿ

Kichcha Sudeep: ಬಿಜೆಪಿ ಪರ ಪ್ರಚಾರ ಯಾತ್ರೆ ಮಾಡಿರುವ ನಟ ಸುದೀಪ್, ಪ್ರಚಾರದಲ್ಲಿ ಜೊತೆಯಾದವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಕ್ಷಮೆಯನ್ನೂ ಕೇಳಿದ್ದಾರೆ.

ಪ್ರಚಾರ ಮುಗಿಸಿ ಬಂದ ಸುದೀಪ್, ಜೊತೆಯಾದ ಎಲ್ಲರಿಗೂ ಧನ್ಯವಾದ ಅರ್ಪಣೆ, ಅಭಿಮಾನಿಗಳಿಗೆ ವಿಶೇಷ ಪ್ರೀತಿ
ಸುದೀಪ್
ಮಂಜುನಾಥ ಸಿ.
|

Updated on: May 10, 2023 | 7:00 AM

Share

ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election 2023) ಬಹಿರಂಗ ಪ್ರಚಾರ ಮೇ 08 ರಂದು ಅಂತ್ಯವಾಗಿದ್ದು ಇಂದು (ಮೇ 10) ಮತದಾನ ನಡೆಯಲಿದೆ. ನಟ ಸುದೀಪ್ (Sudeep) ಈ ಬಾರಿ ಬಿಜೆಪಿ (BJP) ಪರವಾಗಿ ಬಹಿರಂಗ ಬೆಂಬಲ ಘೋಷಿಸಿದ್ದಲ್ಲದೆ ರಾಜ್ಯದಾದ್ಯಂತ ಸಂಚರಿಸಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ಮಾಡಿದರು. ಬಹಿರಂಗ ಪ್ರಚಾರ ಅಂತ್ಯವಾಗುತ್ತಿದ್ದಂತೆ ಬೆಂಗಳೂರಿಗೆ ವಾಪಸ್ಸಾಗಿರುವ ನಟ ಸುದೀಪ್ (Sudeep), ಮತದಾನ ಇನ್ನು ಕೆಲವೇ ಗಂಟೆಗಳಿರುವಂತೆ, ಪ್ರಚಾರದಲ್ಲಿ ಜೊತೆಯಾಗಿ ಎಲ್ಲರಿಗೂ ಧನ್ಯವಾದ ಹೇಳಿರುವ ಜೊತೆಗೆ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹಾಗೂ ಕ್ಷಮೆಯನ್ನೂ ಕೋರಿದ್ದಾರೆ.

ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಭಾವುಕ ಪದ್ಯವೊಂದನ್ನು ಹಂಚಿಕೊಂಡಿದ್ದು, ”ನಿಮ್ಮ ಕಣ್ಣಲ್ಲಿ ಕಂಡ ಅಪಾರ ಪ್ರೀತಿ, ನನ್ನ ಬದುಕಿನ ರೀತಿ, ನಿಮ್ಮ ನಿರಂತರ ರಣಕೇಕೆ, ಸಾಕಿಷ್ಟು ಈ ಜನುಮಕೆ. ಹಣತೆ ಹೊತ್ತಿರಿ ಆರತಿ ಎತ್ತಿದಿರಿ, ದಾರಿಯುದ್ದಕ್ಕೂ ಹೂವು ಚೆಲ್ಲಿದಿರಿ. ನಿಮ್ಮ ಎದೆಯ ಮೇಲಿನ ಹಚ್ಚೆಯಂತೆ ಸದಾ ಜೊತೆಗಿರುವೆ” ಎಂದಿದ್ದಾರೆ ನಟ ಸುದೀಪ್.

”ಜನಸಾಗರದ ನೂಕು ನುಗ್ಗಲಲ್ಲಿ ಕೆಲವರಿಗೆ ಬಿದ್ದ ಲಾಠಿ ಏಟಿಕೆ ಕ್ಷಮೆ ಇರಲಿ. ಸ್ನೇಹಿತರೆ ನಿಮ್ಮ ಪ್ರತಿ ಮನದಲ್ಲಿ ಈ ಪ್ರೀತಿ ಹೀಗೆಯೇ ಇರಲಿ. ಕರುನಾಡಲ್ಲಿ ನಡೆದ ಈ ಮೆರವಣಿಗೆಯುದ್ದಕ್ಕೂ ಜೊತೆಯಾಗಿ ಸಾಗಿದ ಮಾಧ್ಯಮ ಮಿತ್ರರಿಗೆ. ಕಾಳಜಿಯಿಂದ ಕಾವಲಿಟ್ಟ ಪೊಲೀಸರಿಗೆ ಮಿಲಿಟರಿ ಕಮಾಂಡೊ ಸಿಬ್ಬಂದಿಗೆ. ಲಕ್ಷಾಂತರ ಕಾರ್ಯಕರ್ತರಿಗೆ ಹೃದಯಗೀತೆಯಾದ ನನ್ನ ಸ್ನೇಹಿತರಿಗೆ ಚಿರರುಣಿ” ಎಂದು ಬರೆದಿದ್ದಾರೆ ನಟ ಸುದೀಪ್. ಕೊನೆಯಲ್ಲಿ ಪ್ರೀತಿಯಿಂದ ನಿಮ್ಮ ಕಿಚ್ಚ, ಲವ್ ಯೂ ಆಲ್ ಎಂಬ ಕಿರುಸಾಲು ಸಹ ಸೇರಿಸಿದ್ದಾರೆ.

ಮೇ 8 ರಂದು ಬಹಿರಂಗ ಪ್ರಚಾರ ಅಂತ್ಯವಾಗಿ ಬೆಂಗಳೂರಿಗೆ ವಾಪಸ್ಸಾಗುತ್ತಲೇ ಸುದೀಪ್ ಟ್ವೀಟ್ ಒಂದನ್ನು ಮಾಡಿದ್ದರು. ಸುದೀರ್ಘ ಪ್ರಚಾರದ ಬಳಿಕ ಬೆಂಗಳೂರಿಗೆ ವಾಪಸ್ಸಾಗಿದ್ದೇನೆ. ಇದು ಒಂದು ರೀತಿಯಲ್ಲಿ ಕಲಿಕೆಯಹ ಅನುಭವ ಸಹ. ಈ ನನ್ನ ಪಯಣದಲ್ಲಿ ಪ್ರಾರಂಭದಿಂದಲೂ ನನ್ನ ಜೊತೆಗಿದ್ದು ನನಗೆ ಸಹಕಾರ ನೀಡಿದ ಚಕ್ರವರ್ತಿ ಚಂದ್ರಚೂಡ್​ಗೆ ಧನ್ಯವಾದ. ಎಲ್ಲ ಅಭ್ಯರ್ಥಿಗಳಿಗೂ ಶುಭವಾಗಲಿ” ಎಂದು ಬರೆದುಕೊಂಡಿದ್ದರು. ಚಕ್ರವರ್ತಿ ಚಂದ್ರಚೂಡ್ ಅವರೊಟ್ಟಿಗೆ ಚಿತ್ರವನ್ನು ಸುದೀಪ್ ಹಂಚಿಕೊಂಡಿದ್ದರು.

ಇದನ್ನೂ ಓದಿ:ಇಂದಿನ ಬಿಜೆಪಿ ನಾಯಕರ ರಾಜ್ಯ ಪ್ರವಾಸ; ಮೋದಿ, ಯೋಗಿ, ಶಾ, ಕಿಚ್ಚ ಸುದೀಪ್ ಸೇರಿ ಘಟಾನುಘಟಿ ನಾಯಕರು ಎಲ್ಲೆಲ್ಲಿ ಪ್ರಚಾರ ನಡೆಸಲಿದ್ದಾರೆ ಗೊತ್ತಾ?

ಚುನಾವಣೆ ಘೋಷಣೆ ಸಮಯದಲ್ಲಿ ವಿಶೇಷ ಸುದ್ದಿಗೋಷ್ಠಿ ಕರೆದಿದ್ದ ನಟ ಸುದೀಪ್, ತಾವು ಈ ಬಾರಿ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ಘೋಷಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಅದ್ಭುತವಾದ ವ್ಯಕ್ತಿ, ಅಂಥಹಾ ವ್ಯಕ್ತಿಗೆ ಮತ್ತೊಂದು ಅವಕಾಶ ಸಿಗಬೇಕು ಹಾಗಾಗಿಯೇ ತಾವು ಪ್ರಚಾರ ಮಾಡುತ್ತಿರುವುದಾಗಿ ಹೇಳಿದರು. ಬಸವರಾಜ ಬೊಮ್ಮಾಯಿ ಅವರು ಯಾರನ್ನು ಸೂಚಿಸುತ್ತಾರೆಯೋ ಅವರ ಪರವಾಗಿ ಪ್ರಚಾರ ಮಾಡುವುದಾಗಿ ಸುದೀಪ್ ಹೇಳಿದ್ದರು. ಅಂತೆಯೇ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರದಿಂದಲೇ ಆರಂಭಿಸಿ ಕರ್ನಾಟಕದ ಹಲವಾರು ಕ್ಷೇತ್ರಗಳನ್ನು ಸುದೀಪ್ ಪರ್ಯಟನೆ ಮಾಡಿದರು. ಉತ್ತರ ಕರ್ನಾಟಕದಿಂದ ಆರಂಭಿಸಿ ಹಲವು ಕ್ಷೇತ್ರಗಳನ್ನು ಸುದೀಪ್ ಪರ್ಯಟನೆ ಮಾಡಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ