AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ನಟ ಸುದೀಪ್ ತಾಯಿ ಸರೋಜಾ ನಿಧನ

ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Breaking: ನಟ ಸುದೀಪ್ ತಾಯಿ ಸರೋಜಾ ನಿಧನ
ಮಂಜುನಾಥ ಸಿ.
|

Updated on:Oct 20, 2024 | 9:26 AM

Share

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ಜಯನಗರದ ಅಪೋಲೊ ಆಸ್ಪತ್ರೆಗೆ ಸುದೀಪ್ ಅವರ ತಾಯಿಯನ್ನು ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 07:04 ಕ್ಕೆ ಸುದೀಪ್​ರ ತಾಯಿ ನಿಧನ ರಾಗಿದ್ದಾರೆ. ತಾಯಿಯ ಅನಾರೋಗ್ಯದ ಕಾರಣಕ್ಕೆ ನಿನ್ನೆ ಬಿಗ್​ಬಾಸ್ ಶೂಟಿಂಗ್ ಅನ್ನು ಬೇಗನೆ ಮುಗಿಸಿ ಹೋಗಿದ್ದಾರೆ ಸುದೀಪ್. ನಿನ್ನೆಯ ವಾರದ ಪಂಚಾಯಿತಿ, ಸಾಮಾನ್ಯಕ್ಕಿಂತಲೂ ಕಡಿಮೆ ಅವಧಿಗೆ ಪ್ರಸಾರವಾಗಿತ್ತು.

ಇತ್ತೀಚೆಗಷ್ಟೆ ಬಿಗ್​ಬಾಸ್ ವೇದಿಕೆ ಮೇಲೆ ಸುದೀಪ್ ಅವರು ಅವರ ತಾಯಿಯನ್ನು ನೆನಪಿಸಿಕೊಂಡಿದ್ದರು. ಈ ಸೀಸನ್​ನ ಮೊದಲ ವೀಕೆಂಡ್ ಪಂಚಾಯಿತಿಗೆ ಬಂದಿದ್ದ ಸುದೀಪ್ ಶೇರವಾನಿ ಹಾಕಿಕೊಂಡು ಬರಿಗಾಲಲ್ಲಿ ವೇದಿಕೆಗೆ ಹತ್ತಿದ್ದರು. ನವರಾತ್ರಿ ಇದ್ದ ಕಾರಣ ತಾವು ಹೀಗೆ ಡ್ರೆಸ್ ಮಾಡಿಕೊಂಡು ಬಂದಿದ್ದಾಗಿ ಹೇಳಿದ ಸುದೀಪ್, ಕ್ಯಾಮೆರಾ ನೋಡಿಕೊಂಡು ‘ಅಮ್ಮ ನೋಡಿ, ಬರಿಗಾಲಲ್ಲಿ ಬಂದಿದ್ದೀನಿ, ಹಬ್ಬಕ್ಕೆ ತಕ್ಕಂತೆ ಡ್ರೆಸ್ ಮಾಡಿಕೊಂಡಿದ್ದೀನಿ’ ಎಂದಿದ್ದರು.

ಇದನ್ನೂ ಓದಿ: ‘ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’; ಸುದೀಪ್ ಸ್ಪಷ್ಟನೆ

ಸುದೀಪ್​ ಅವರ ತಾಯಿ ಮಂಗಳೂರು ಮೂಲದವರು, ವಿಕ್ರಾಂತ್ ರೋಣ ಸಮಯದಲ್ಲಿ ಈ ಬಗ್ಗೆ ಮಾತನಾಡಿದ್ದ ಸುದೀಪ್, ‘ನನ್ನ ತಾಯಿ ಮಂಗಳೂರು ಮೂಲದವರು, ಅವರ ಮಾತೃಭಾಷೆ ತುಳು. ನನಗೆ ಆ ಭಾಷೆ ಬಹಳ ಇಷ್ಟ. ನಾನು ಸಾಕಷ್ಟು ಕೇಳಿಸಿಕೊಂಡಿದ್ದೇನೆ ಆದರೆ ನನಗೆ ಮಾತನಾಡಲು ಬರುವುದಿಲ್ಲ ಎಂದಿದ್ದರು’.

ಸುದೀಪ್​ರ ತಾಯಿ ಸರೋಜಾ ಆಗಾಗ್ಗೆ ಕೆಲವು ಸಿನಿಮಾ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದರು. ಸುದೀಪ್​ರ ಸಹೋದರಿ ಮಗನ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದ ಸರೋಜಾ ಅವರು ವೇದಿಕೆ ಮೇಲೆ ಮಗ, ಮೊಗನನ್ನು ಕಂಡು ತುಸು ಭಾವುಕರಾಗಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:06 am, Sun, 20 October 24

Follow Us
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್