ಶಿವಣ್ಣನ ಪುತ್ರಿ ಜತೆ ಕೈ ಜೋಡಿಸಿದ ಸುಧಾರಾಣಿ; ‘ಫೈರ್ ಫ್ಲೈ’ ತಂಡದಿಂದ ಹೊಸ ಸುದ್ದಿ

ಡಾ. ರಾಜ್​ ಕುಟುಂಬದವರು ಮೊದಲಿನಿಂದಲೂ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ, ಅವಕಾಶ ನೀಡುತ್ತಾ ಬಂದಿದ್ದಾರೆ. ಈಗ ಶಿವರಾಜ್​ಕುಮಾರ್ ಅವರ ಪುತ್ರಿ ನಿವೇದಿತಾ ಕೂಡ ಹೊಸಬರಿಗೆ ವೇದಿಕೆ ಒದಗಿಸಿಕೊಟ್ಟಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಸಂಸ್ಥೆ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ. ಈ ಸಂಸ್ಥೆ ನಿರ್ಮಿಸುತ್ತಿರುವ ‘ಫೈರ್ ಫ್ಲೈ’ ಸಿನಿಮಾದಲ್ಲಿ ಹೊಸಬರ ಜೊತೆಗೆ ಹಿರಿಯ ಕಲಾವಿದರೂ ಇದ್ದಾರೆ. ನಟಿ ಸುಧಾರಾಣಿ ಅವರು ಈ ಸಿನಿಮಾಗೆ ಸೇರ್ಪಡೆ ಆಗಿದ್ದಾರೆ.

ಶಿವಣ್ಣನ ಪುತ್ರಿ ಜತೆ ಕೈ ಜೋಡಿಸಿದ ಸುಧಾರಾಣಿ; ‘ಫೈರ್ ಫ್ಲೈ’ ತಂಡದಿಂದ ಹೊಸ ಸುದ್ದಿ
ಸುಧಾರಾಣಿ
Follow us
|

Updated on: Jun 28, 2024 | 6:58 PM

ಪ್ರತಿ ಹಂತದಲ್ಲೂ ಸುದ್ದಿ ಮಾಡುತ್ತಿರುವ ‘ಫೈರ್ ಫ್ಲೈ’ (Fire Fly) ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರ ಪುತ್ರಿ ನಿವೇದಿತಾ (Niveditha Shivarajkumar) ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ. ವಿಶೇಷ ಏನೆಂದರೆ, ಇದೇ ಸಿನಿಮಾದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಸುಧಾರಾಣಿ (Sudha Rani) ಅವರು ಅಭಿನಯಿಸುತ್ತಿದ್ದಾರೆ.

‘ಫೈರ್ ಫ್ಲೈ’ ಸಿನಿಮಾಗೆ ನಿವೇದಿತಾ ಶಿವರಾಜ್​ಕುಮಾರ್ ಅವರು ಬಂಡವಾಳ ಹೂಡಿದ್ದು, ಪಾತ್ರವರ್ಗದ ಮೂಲಕ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ನಟಿ ಶೀತಲ್ ಶೆಟ್ಟಿ, ನಟ ಮೂಗು ಸುರೇಶ್ ಅವರು ಈ ಸಿನಿಮಾಗೆ ಸೇರ್ಪಡೆ ಆಗಿದ್ದರು. ಈಗ ಸುಧಾರಾಣಿ ಅವರ ಸೇರ್ಪಡೆಯಿಂದ ಸಿನಿಮಾದ ತಾರಾಮೆರುಗು ಹೆಚ್ಚಾಗಿದೆ. ಸುಧಾರಾಣಿ ಅವರು ಪದ್ಮಾ ಎಂಬ ಪಾತ್ರವನ್ನು ಈ ಸಿನಿಮಾದಲ್ಲಿ ನಿಭಾಯಿಸುತ್ತಿದ್ದಾರೆ. ನಾಯಕನ ತಾಯಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಶೂಟಿಂಗ್​ ಮುಗಿಸಿರುವ ಅವರು ಡಬ್ಬಿಂಗ್​ ಸಹ ಪೂರ್ಣಗೊಳಿಸಿದ್ದಾರೆ. ‘ಫೈರ್ ಫ್ಲೈ’ ಸಿನಿಮಾದಲ್ಲಿ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ.

ಸುಧಾರಾಣಿ ಅವರು ‘ಫೈರ್ ಫ್ಲೈ’ ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ‘ಡಾ. ರಾಜ್​ಕುಮಾರ್​ ಅವರ ಮನೆಯಿಂದ ಯಾರು ಏನೇ ಮಾಡಿದರೂ ಅದು ನನ್ನ ತವರು ಮನೆ. ಆದ್ದರಿಂದ ಇವತ್ತಿಗೂ ಅವರಲ್ಲಿ ಯಾರಾದ್ರೂ ಬಂದು ಹಿಂದೆ ನಿಂತು ಹೋಗು ಎಂದರೂ ನಾನು ತಯಾರಿದ್ದೇನೆ. ಯಾಕಂದ್ರೆ, ಇದು ನನ್ನ ಮನೆ. ನಿವಿ ನನ್ನ ಕಣ್ಣ ಮುಂದೆ ಹುಟ್ಟಿ ಬೆಳೆದ ಮಗು. ಈಗ ಅವಳು ಒಂದು ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ್ದಾಳೆ. ಆಕೆ ನಿರ್ಮಾಪಕಿ ಆಗಿದ್ದಾಳೆ. ಈ ಬಗ್ಗೆ ನನಗೆ ಬಹಳ ಖುಷಿ ಇದೆ’ ಎಂದು ಸುಧಾರಾಣಿ ಹೇಳಿದ್ದಾರೆ.

ಇದನ್ನೂ ಓದಿ: ಮಗಳ ಜೊತೆ ಮಸ್ತ್ ಡ್ಯಾನ್ಸ್ ಮಾಡಿದ ಸುಧಾರಾಣಿ

‘ಕಥೆಯಿಂದ ಪ್ರೊಡಕ್ಷನ್ ತನಕ ಈ ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ. ನಮ್ಮ ಕನ್ನಡದ ಪ್ರೇಕ್ಷಕರು ಈ ಸಿನಿಮಾಗೆ ಬೆಂಬಲ ನೀಡಬೇಕು. ಇಷ್ಟು ಚಿಕ್ಕ ಪಾತ್ರಕ್ಕಾಗಿ ನನ್ನನ್ನು ಕೇಳಬೇಕಾ ಅಂತ ನಿರ್ದೇಶಕರಿಗೆ ಸ್ವಲ್ಪ ಮುಜುಗರ ಇತ್ತು. ಆದರೆ ಚೊಚ್ಚಲ ನಿರ್ದೇಶಕರಾಗಿ ಅವರಲ್ಲಿ ಇರುವ ಹುಮ್ಮಸ್ಸು, ಆಸಕ್ತಿ ನನಗೆ ಇಷ್ಟವಾಯ್ತು. ನಿರ್ದೇಶನದ ಜೊತೆಗೆ ನಟನೆಯನ್ನೂ ಮಾಡುತ್ತಿದ್ದಾರೆ. ಈ ರೀತಿ ಇರುವಾಗ ಎಲ್ಲರಿಗೂ ಅವರ ಮೊದಲ ಸಿನಿಮಾ ಮಲ್ಟಿಸ್ಟಾರರ್​, ದೊಡ್ಡ ಬಜೆಟ್, ಆ್ಯಕ್ಷನ್ ಸಿನಿಮಾ ಆಗಿರಬೇಕು ಎಂಬ ಆಲೋಚನೆ ಇರುತ್ತದೆ. ಆದರೆ ಈ ವಿಚಾರದಲ್ಲಿ ವಂಶಿ ಡಿಫರೆಂಟ್​. ಸಂಬಂಧಗಳ ಕುರಿತು ಅವರು ಫೋಕಸ್ ಮಾಡಿದ್ದಾರೆ. ಇಡೀ ಕುಟುಂಬ ಕುಳಿತು ನೋಡುವಂತಹ ಸಿನಿಮಾ ಮಾಡಿದ್ದಾರೆ’ ಎಂಬುದು ಸುಧಾರಾಣಿ ಅವರ ಮಾತುಗಳು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ