‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಮೂಲಕ ಹಿಟ್ ಕೊಟ್ಟಿರುವ ನಟ ಡಾರ್ಲಿಂಗ್ ಕೃಷ್ಣ (Darling Krishna) ಈಗ ‘ಶುಗರ್ ಫ್ಯಾಕ್ಟರಿ’ ಸಿನಿಮಾ ಮೂಲಕ ಮತ್ತೊಂದು ಗೆಲುವನ್ನು ಖಾತೆಗೆ ತೆಗೆದುಕೊಳ್ಳುವ ಜೋಶ್ನಲ್ಲಿದ್ದಾರೆ. ‘ಶುಗರ್ ಫ್ಯಾಕ್ಟರಿ’ ಸಿನಿಮಾವನ್ನು ವಿದೇಶಿ ಲೊಕೇಶನ್ಗಳು ಸೇರಿದಂತೆ ಹಲವು ಕಡೆಗಳಲ್ಲಿ ಭರ್ಜರಿಯಾಗಿ ಚಿತ್ರೀಕರಣ ಮಾಡಲಾಗಿದೆ. ಸಿನಿಮಾದ ಹಾಡೊಂದು ಇದೀಗ ಬಿಡುಗಡೆ ಆಗಿದ್ದು, ಹಾಡನ್ನು ಕಜಕಿಸ್ತಾನದಲ್ಲಿ ಕಣ್ ಸೆಳೆಯುವಂತೆ ಚಿತ್ರೀಕರಣ ಮಾಡಲಾಗಿದೆ. ಜಯಂತ್ ಕಾಯ್ಕಿಣಿ ಬರೆದಿರುವ ಈ ಮಧುರವಾದ ಹಾಡು ಸಂಗೀತ ಪ್ರೇಮಿಗಳ ಗಮನ ಸೆಳೆಯುತ್ತಿದೆ.
‘ಶುಗರ್ ಫ್ಯಾಕ್ಟರಿ’ ಸಿನಿಮಾವನ್ನು ದೀಪಕ್ ಅರಸ್ ನಿರ್ದೇಶನ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿದ್ದಾರೆ. ಸಿನಿಮಾಕ್ಕಾಗಿ ಖ್ಯಾತ ಗೀತರಚನೆಕಾರ ಜಯಂತ ಕಾಯ್ಕಿಣಿ ಅವರು “ಜಹಾಪನಾ” ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಿಹಾಲ್ ತಾವ್ರೊ ಹಾಗೂ ಅಮೃತಾ ನಾಯಕ್ ಅವರ ಕಂಠಸಿರಿಯಲ್ಲಿ ಈ ಹಾಡು ಮಧುರವಾಗಿ ಮೂಡಿಬಂದಿದೆ. ಧನಂಜಯ್ ಅವರು ನೃತ್ಯ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಸೋನಾಲ್ ಮೊಂತೆರೊ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಕಬೀರ್ ರಫಿ ಈ ಹಾಡಿಗೆ ಸಂಗೀತ ನೀಡಿದ್ದಾರೆ.
ಇದನ್ನೂ ಓದಿ:‘ಲವ್ ಮಾಕ್ಟೇಲ್’ ಮಾಡಿದ್ದ ಬಿಸ್ನೆಸ್ ಎಷ್ಟು? ಡಾರ್ಲಿಂಗ್ ಕೃಷ್ಣ ನೀಡಿದ್ರು ಸಂಪೂರ್ಣ ಲೆಕ್ಕ
ಈಗಾಗಲೇ “ಶುಗರ್ ಫ್ಯಾಕ್ಟರಿ” ಟ್ರೇಲರ್ ಬಿಡುಗಡೆ ಆಗಿದ್ದು ಎಲ್ಲರ ಗಮನ ಸೆಳೆದಿದೆ. ಸಾಮಾಜಿಕ ಜಾಲತಾಣದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ವೀಕ್ಷಣೆ ಆಗುತ್ತಿದೆ. ನವೆಂಬರ್ 24 ರಂದು ಬಹು ನಿರೀಕ್ಷಿತ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಡಾರ್ಲಿಂಗ್ ಕೃಷ್ಣ ಅವರ ಸಿನಿ ಜರ್ನಿಯಲ್ಲೇ ‘ಶುಗರ್ ಫ್ಯಾಕ್ಟರಿ’ ಬಿಗ್ ಬಜೆಟ್ ಚಿತ್ರವೆಂದು ಹೇಳಲಾಗುತ್ತಿದೆ. ಅಭಿಮಾನಿಗಳು ಸಹ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು, ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ. ಆರ್ ಗಿರೀಶ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ.
ಇದೀಗ ಬಿಡುಗಡೆ ಆಗಿರುವ ‘ಜಹಾಪನಾ’ ಹಾಡನ್ನು ಯೂರೋಪ್ನ ಕಜಕಿಸ್ತಾನದ ಬಹಳ ಸುಂದರ ಸ್ಥಳಗಳಲ್ಲಿ ಅಷ್ಟೇ ಸುಂದರವಾಗಿ ಚಿತ್ರೀಕರಣ ಮಾಡಲಾಗಿದೆ. ಹಾಡಿನ ಮಧುರತೆಯಷ್ಟೆ, ದೃಶ್ಯದ ಸುಂದರತೆಯೂ ಹಾಡು ನೋಡುವವರನ್ನು ಸೆಳೆಯುತ್ತಿದೆ. ಸಿನಿಮಾವು ನವೆಂಬರ್ ತಿಂಗಳ 24ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ನಟ ಡಾರ್ಲಂಗ್ ಕೃಷ್ಣ ಇರಿಸಿಕೊಂಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:40 pm, Sat, 14 October 23