ಅಂಬರೀಷ್​ ಜನ್ಮದಿನದಂದು ಯಾವುದೇ ಸಂಭ್ರಮಾಚರಣೆ ಬೇಡ; ಅಭಿಮಾನಿಗಳಿಗೆ ಸುಮಲತಾ ಮನವಿ

ಎಲ್ಲವೂ ಸುಸ್ಥಿತಿಯಲ್ಲಿದ್ದರೆ ಅಂಬಿ ಜನ್ಮದಿನವನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುತ್ತಿದ್ದರು. ಅನೇಕ ಕಡೆಗಳಲ್ಲಿ ಅನ್ನಸಂತರ್ಪಣೆ ನಡೆಯುತ್ತಿತ್ತು. ಕೆಲವು ಕಡೆಗಳಲ್ಲಿ ಅಂಬಿ ಕಟೌಟ್​ ಹಾಕಿ ಹಾಲಿನ ಅಭಿಷೇಕ ಮಾಡಲಾಗುತ್ತಿತ್ತು.

ಅಂಬರೀಷ್​ ಜನ್ಮದಿನದಂದು ಯಾವುದೇ ಸಂಭ್ರಮಾಚರಣೆ ಬೇಡ; ಅಭಿಮಾನಿಗಳಿಗೆ ಸುಮಲತಾ ಮನವಿ
ಸುಮಲತಾ ಅಂಬರೀಷ್
Follow us
ರಾಜೇಶ್ ದುಗ್ಗುಮನೆ
|

Updated on:May 28, 2021 | 10:19 PM

ಅಂಬರೀಷ್​ ಬದುಕಿದ್ದರೆ ಇಂದು 69ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದರು. ಅಂಬಿ ಮೃತಪಟ್ಟ ನಂತರವೂ ಪ್ರತೀ ಮೇ 29ರಂದು ಅಭಿಮಾನಿಗಳು ಅವರ ಹುಟ್ಟುಹಬ್ಬ ಆಚರಿಸಿದ್ದಾರೆ. ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದ್ದಾರೆ. ಆದರೆ, ಈಗ ಪರಿಸ್ಥಿತಿ ಹದಗೆಟ್ಟಿದೆ. ಕೊವಿಡ್ ಕಾರಣದಿಂದ ಜನರು ತತ್ತರಿಸಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಸಂಭ್ರಮಾಚರಣೆ ಬೇಡ ಎಂದು ಅಭಿಮಾನಿಗಳ ಬಳಿ ಅಂಬರೀಷ್​ ಪತ್ನಿ, ನಟಿ, ಸಂಸದೆ ಸುಮಲತಾ ಅಂಬರೀಷ್​ ಮನವಿ ಮಾಡಿದ್ದಾರೆ.

ಎಲ್ಲವೂ ಸುಸ್ಥಿತಿಯಲ್ಲಿದ್ದರೆ ಅಂಬಿ ಜನ್ಮದಿನವನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುತ್ತಿದ್ದರು. ಅನೇಕ ಕಡೆಗಳಲ್ಲಿ ಅನ್ನಸಂತರ್ಪಣೆ ನಡೆಯುತ್ತಿತ್ತು. ಕೆಲವು ಕಡೆಗಳಲ್ಲಿ ಅಂಬಿ ಕಟೌಟ್​ ಹಾಕಿ ಹಾಲಿನ ಅಭಿಷೇಕ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಸರ್ಕಾರ ಕೊವಿಡ್​ ನಿಯಂತ್ರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಿದೆ. ಯಾರೊಬ್ಬರೂ ಮನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಯಾರೂ ಅಂಬರೀಷ್​ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸುಮಲತಾ ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಸುಮಲತಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ‘ನಾಳೆ ನಮ್ಮೆಲ್ಲರ ಪ್ರೀತಿಯ ಅಂಬರೀಷ್ ಅವರ 69ನೇ ಜನ್ಮ ಜಯಂತಿ ಸಂಭ್ರಮದಿಂದ ಆಚರಿಸಲು ನೀವೆಲ್ಲರೂ ಕಾಯುತ್ತಿರುತ್ತೀರಿ. ಆದರೆ ಕರೊನಾ ತಡೆಯಲು ದೇಶವೆಲ್ಲ ಶ್ರಮಿಸುತ್ತಿರುವಾಗ ನಾವು ಯಾವುದೇ ಸಾರ್ವಜನಿಕ ಆಚರಣೆ ಅಥವಾ ಸಮಾರಂಭ ಮಾಡುವುದು ಬೇಡವೆಂದು ನನ್ನ ವಿನಮ್ರ ಮನವಿ. ಈ ವರ್ಷ ಅವರನ್ನು ನಮ್ಮ ಮನಸ್ಸು ಮನೆಗಳಲ್ಲೇ ಆಚರಿಸೋಣ. #staysafe’ ಎಂದು ಬರೆದುಕೊಂಡಿದ್ದಾರೆ.

ಇನ್ನು, ಅಂಬರೀಷ್​ ಜನ್ಮದಿನದ ಅಂಗವಾಗಿ ಸುಮಲತಾ ಸಾಕಷ್ಟು ಜನಪರ ಕೆಲಸ ಮಾಡುತ್ತಿದ್ದಾರೆ. ಮೊದಲು ಅವರು ಕಂಠೀರವ ಸ್ಟುಡಿಯೋಗೆ ತೆರಳಿ ಅಂಬರೀಷ್​ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ನಂತರ ಅಂಬರೀಷ್​ ಹುಟ್ಟೂರು ಮಂಡ್ಯಕ್ಕೆ ತೆರಳಲಿದ್ದು, ಅಲ್ಲಿ ಕೆಲವು ಜನಪರ ಕೆಲಸ ಮಾಡಲಿದ್ದಾರೆ.

ಇದನ್ನೂ ಓದಿ: ಅಂಬರೀಷ್​ ಜನ್ಮದಿನ; ಸಂಸದೆ ಸುಮಲತಾ ಅಂಬರೀಷ್ ಮಾಡುವ ಕೆಲಸಗಳೇನು?

ಅಂಬರೀಷ್​ ಇಲ್ಲದೆ ಅನುಭವಿಸಿದ ನೋವು ನನಗೆ ಮಾತ್ರ ಗೊತ್ತು; ಭಾವುಕರಾದ ಸುಮಲತಾ ಅಂಬರೀಷ್​

Published On - 9:20 pm, Fri, 28 May 21