ಅಂಬರೀಷ್​ ಫ್ಯಾನ್ಸ್​ ನಿರ್ಧಾರಕ್ಕೆ ಸುಮಲತಾ ಬೇಸರ; ಪುನೀತ್​ ಮತ್ತು ಪ್ರಶಸ್ತಿ ಬಗ್ಗೆ ಹೇಳಿದ್ದೇನು?

Sumalatha Ambareesh: ‘ಎಲ್ಲಾ ಪ್ರಶಸ್ತಿಗಳನ್ನು ಮೀರಿದಂತಹ ಪ್ರೀತಿ ಮತ್ತು ಅಭಿಮಾನವನ್ನು ನೀವುಗಳು ನಮ್ಮ ಕುಟುಂಬಕ್ಕೆ ನೀಡಿದ್ದೀರಿ. ಅಂಬರೀಷ್ ಅವರು ತಮ್ಮ ಜೀವನದಲ್ಲಿ ಯಾವ ಪ್ರಶಸ್ತಿ, ಹುದ್ದೆ ಅಥವಾ ಸನ್ಮಾನವನ್ನು ಬಯಸಿದವರಲ್ಲ’ ಎಂದು ಸುಮಲತಾ ಅಂಬರೀಷ್​ ಹೇಳಿದ್ದಾರೆ.

ಅಂಬರೀಷ್​ ಫ್ಯಾನ್ಸ್​ ನಿರ್ಧಾರಕ್ಕೆ ಸುಮಲತಾ ಬೇಸರ; ಪುನೀತ್​ ಮತ್ತು ಪ್ರಶಸ್ತಿ ಬಗ್ಗೆ ಹೇಳಿದ್ದೇನು?
ಪುನೀತ್​ ರಾಜ್​ಕುಮಾರ್​, ಅಂಬರೀಷ್​, ಸುಮಲತಾ ಅಂಬರೀಷ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 23, 2021 | 11:50 AM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ನಿಧನದ ಬಳಿಕ ಅವರ ಹೆಸರನ್ನು ಅಮರವಾಗಿಸಲು ಅನೇಕ ಕೆಲಸಗಳು ನಡೆಯುತ್ತಿವೆ. ಕೆಲವು ರಸ್ತೆ, ವೃತ್ತಕ್ಕೆ ಪುನೀತ್​ ಹೆಸರನ್ನು ಇಡಲಾಗಿದೆ. ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಸಹ ಘೋಷಣೆ ಆಗಿದೆ. ಇದು ಅವರ ಅಭಿಮಾನಿಗಳಿಗೆ ಹೆಮ್ಮೆ ತಂದಿರುವ ವಿಚಾರ. ಅದೇ ರೀತಿ ‘ರೆಬೆಲ್​ ಸ್ಟಾರ್​’ ಅಂಬರೀಷ್ (Rebel Star Ambareesh)​ ಅವರಿಗೂ ಇಂಥ ಗೌರವಗಳು ಸಲ್ಲಬೇಕು ಎಂದು ಅಂಬಿ ಪ್ಯಾನ್ಸ್​ ಬೇಡಿಕೆ ಇಡುತ್ತಿದ್ದಾರೆ. ಅದಕ್ಕಾಗಿ ಅವರು ಹೋರಾಟ ಮಾಡುವುದಾಗಿ ಹೇಳಿದ್ದು, ಅದು ಸುಮಲತಾ ಅಂಬರೀಷ್​ (Sumalatha Ambareesh) ಅವರ ಗಮನಕ್ಕೆ ಬಂದಿದೆ. ಆ ಬಗ್ಗೆ ಅವರು ಬಹಿರಂಗವಾಗಿ ಪತ್ರ ಬರೆದಿದ್ದು, ಅಭಿಮಾನಿಗಳ (Ambareesh Fans) ಕೆಲವು ನಿರ್ಧಾರಗಳಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಂಬಿ ಅಭಿಮಾನಿಗಳಿಗೆ ಕೆಲವು ಕಿವಿಮಾತುಗಳನ್ನು ಅವರು ಹೇಳಿದ್ದಾರೆ. ಪ್ರಶಸ್ತಿ ಮತ್ತು ಗೌರವಗಳ ಬಗ್ಗೆ ನಮ್ಮ ಅಭಿಪ್ರಾಯ ಏನು ಎಂಬುದನ್ನು ಅವರು ತಿಳಿಸಿದ್ದಾರೆ. ಸುಮಲತಾ ಬರೆದ ಪತ್ರ ಇಲ್ಲಿದೆ…

ನಮ್ಮ ಪ್ರೀತಿಯ ಡಾ. ಅಂಬರೀಶ್ ಅವರನ್ನು ಆರಾಧ್ಯ ದೈವದಂತೆ ಪ್ರೀತಿಸಿ, ಅವರ ನೆನಪನ್ನು ಚಿರಸ್ಥಾಯಿಯಾಗಿ ಬೆಳಗಿಸುತ್ತಿರುವ ನೆಚ್ಚಿನ ಅಭಿಮಾನಿ ಸಂಘಗಳು ಹಾಗೂ ಇನ್ನಿತರ ಸಂಘಟನೆಗಳು ಇಂದು ಅಂಬರೀಶ್ ಅವರ ಸ್ಮಾರಕ ಅಭಿವೃದ್ಧಿಗೊಳಿಸುವುದು, ಅವರ ಹೆಸರಿನಲ್ಲಿ ರಸ್ತೆಗಳನ್ನು ನಾಮಕರಣ ಮಾಡುವುದು ಮತ್ತು ಇನ್ನಿತರ ಬೇಡಿಕೆಗಳನ್ನು ಒತ್ತಾಯಿಸಿ ಹೋರಾಟ ಮಾಡುವುದಾಗಿ ಹೇಳಿರುವುದು ಸಾಮಾಜಿಕ ಜಾಲತಾಣಗಳ ಮೂಲಕ ನನ್ನ ಗಮನಕ್ಕೆ ಬಂದಿದೆ.

ನಮ್ಮ ಕುಟುಂಬದೊಂದಿಗೆ ಅತಿ ಹೆಚ್ಚು ಒಡನಾಟ ಹೊಂದಿದ್ದ ಹಾಗೂ ನಮ್ಮ ಮನೆ ಮಗನಂತಿದ್ದ ಪುನೀತ್ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವ ಆಘಾತಕಾರಿ ಘಟನೆಯಿಂದ ನನಗಾಗಿರುವ ನೋವನ್ನು ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ.

ಇದರೊಂದಿಗೆ ಚಿತ್ರರಂಗ, ಅಭಿಮಾನಿಗಳು ಹಾಗೂ ಕರ್ನಾಟಕ ರಾಜ್ಯದ ಜನತೆಗೆ ತುಂಬಲಾರದಂತ ನಷ್ಟ ಉಂಟಾಗಿದ್ದು, ಈ ಸಮಯದಲ್ಲಿ ತಾವುಗಳು ಹೋರಾಟ ಮಾಡುವ ನಿರ್ಧಾರ ಮಾಡಿರುವುದು ಎಲ್ಲರ ಹೃದಯದ ಮೇಲೆ ಆಗಿರುವ ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ. ಆದುದರಿಂದ, ಈ ಸಮಯದಲ್ಲಿ ಈ ವಿಷಯ ಪ್ರಸ್ತಾಪಿಸುವುದು ಸಮಂಜಸವಲ್ಲ.

ನಿಮ್ಮ ಭಾವನೆಗಳನ್ನು ನಾನು ಗೌರವಿಸುತ್ತೇನೆ, ಆದರೆ ಪ್ರಸ್ತುತ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದರಿಂದ ಅಂಬರೀಷ್ ಅವರ ಘನತೆ ಹಾಗೂ ಗೌರವಕ್ಕೆ ಧಕ್ಕೆಯಾಗುತ್ತದೆ. ಯಾವುದೇ ಪ್ರಶಸ್ತಿಯಾದರು ಕೇಳಿ ಪಡೆಯುವುದು ಅತಿಶಯೋಕ್ತಿಯಾಗಬಾರದು.

ಎಲ್ಲಾ ಪ್ರಶಸ್ತಿಗಳನ್ನು ಮೀರಿದಂತಹ ಪ್ರೀತಿ ಮತ್ತು ಅಭಿಮಾನವನ್ನು ನೀವುಗಳು ನಮ್ಮ ಕುಟುಂಬಕ್ಕೆ ನೀಡಿದ್ದೀರಿ. ಅಂಬರೀಷ್ ಅವರು ತಮ್ಮ ಜೀವನದಲ್ಲಿ ಯಾವ ಪ್ರಶಸ್ತಿ, ಹುದ್ದೆ ಅಥವಾ ಸನ್ಮಾನವನ್ನು ಬಯಸಿದವರಲ್ಲ. ಹೀಗಾಗಿ ಅಂಬರೀಷ್ ಅವರ ಅಭಿಮಾನಿಗಳಾಗಿ ತಾವುಗಳು ಸಹ ಅವರ ಹಾದಿಯಲ್ಲಿ ನಡೆಯಬೇಕು ಎನ್ನುವುದು ನನ್ನ ಆಶಯ. ಆದುದರಿಂದ, ಈ ಸಮಯದಲ್ಲಿ ಪ್ರಶಸ್ತಿ ಕೋರಿ ಹೋರಾಟ ಅಥವಾ ಪ್ರತಿಭಟನೆ ನಡೆಸುವುದು ಅಂಬರೀಷ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ವಿಷಯವಾಗಿದೆ.

ಆದುದರಿಂದ ತಮ್ಮೆಲ್ಲರ ಅಭಿಮಾನ ಮತ್ತು ಪ್ರೀತಿ-ವಾತ್ಸಲ್ಯಗಳನ್ನು ಗೌರವಿಸುತ್ತ ಹಾಗೂ ನಿಮ್ಮೆಲ್ಲರ ಆಸೆಯನ್ನು ಮುಂದಿನ ದಿನಗಳಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಈಡೇರಿಸುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳ ಮೇಲೆ ಭರವಸೆಯನ್ನು ಇಡುತ್ತಾ, ತಾವು ತೆಗೆದುಕೊಂಡಿರುವ ಈ ಹೋರಾಟದ ನಿರ್ಧಾರವನ್ನು ಹಿಂಪಡೆದು ನವೆಂಬರ್ 24ನೇ ತಾರೀಕಿನಂದು ಅಂಬರೀಷ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯನ್ನು ಶಾಂತಿಯುತವಾಗಿ ನೆರವೇರಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರೋಣ ಎಂದು ತಮ್ಮಲ್ಲಿ ಕಳಕಳಿಯಿಂದ ಪ್ರಾರ್ಥಿಸುತ್ತೇನೆ.

ವಂದನೆಗಳೊಂದಿಗೆ ತಮ್ಮ ವಿಶ್ವಾಸಿ, (ಸುಮಲತಾ ಅಂಬರೀಷ್)

ಇದನ್ನೂ ಓದಿ:

ದೇವರಿಗೆ ಮುಡಿ ಕೊಟ್ಟು, ಪುನೀತ್​ಗಾಗಿ ಹಾಡು ಹೇಳಿದ ನಟಿ ವಿಜಯಲಕ್ಷ್ಮೀ; ಇಲ್ಲಿದೆ ವಿಡಿಯೋ

2 ಮುಖ್ಯ ವಿಚಾರವನ್ನು ಪುಷ್ಕರ್​ ಜತೆ ಚರ್ಚಿಸಿ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದ ಪುನೀತ್​

Published On - 11:44 am, Tue, 23 November 21

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು