ಪುನೀತ್​ ಅಂತಿಮ ದರ್ಶನ ಪಡೆದ ಸುಮಲತಾ ಅಂಬರೀಶ್​; ಕುಟುಂಬಕ್ಕೆ ಸಂಸದೆಯ ಸಾಂತ್ವನ

‘ದೊಡ್ಮನೆ’ ಹುಡುಗ ಸಿನಿಮಾದಲ್ಲಿ ಸುಮಲತಾ ಹಾಗೂ ಪುನೀತ್​ ಒಟ್ಟಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಪುನೀತ್​ ತಾಯಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಪುನೀತ್​ ಅಂತಿಮ ದರ್ಶನ ಪಡೆದ ಸುಮಲತಾ ಅಂಬರೀಶ್​; ಕುಟುಂಬಕ್ಕೆ ಸಂಸದೆಯ ಸಾಂತ್ವನ
ಸುಮಲತಾ ಅಂಬರೀಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 30, 2021 | 6:52 PM

ನಟ ಪುನೀತ್​ ರಾಜ್​ಕುಮಾರ್​ ಮೃತಪಟ್ಟಿದ್ದು ಅವರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಇಡೀ ಕುಟುಂಬ ದುಃಖದ ಅಲೆಯಲ್ಲಿ ತೇಲುತ್ತಿದೆ. ಒಬ್ಬರಾದ ಮೇಲೆ ಒಬ್ಬರಂತೆ ಬಂದು ಸೆಲೆಬ್ರಿಟಿಗಳು ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ. ಈಗ ಸಂಸದೆ, ನಟಿ ಸುಮಲತಾ ಅಂಬರೀಶ್​ ಅವರು ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಅಲ್ಲದೆ, ಪುನೀತ್​ ಕುಟಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಇಂದು (ಅಕ್ಟೋಬರ್​ 30) ಸಂಜೆ 6:30ರ ಸುಮಾರಿಗೆ ಸುಮಲತಾ ಅವರು ಆಗಮಿಸಿದರು. ಪುನೀತ್​ ಅಂತಿಮ ದರ್ಶನ ಪಡೆದ ಅವರು, ಪುನೀತ್​ ಪತ್ನಿ ಅಶ್ವಿನಿ ಹಾಗೂ ಮಕ್ಕಳಿಗೆ ಸಾಂತ್ವನ ಹೇಳಿದರು. ಈ ವೇಳೆ ಸುಮಲತಾ ತುಂಬಾನೇ ಭಾವುಕರಾಗಿದ್ದರು. ನಂತರ ಅವರು ಅಲ್ಲಿಂದ ತೆರಳಿದರು.

‘ದೊಡ್ಮನೆ ಹುಡುಗ’ ಸಿನಿಮಾದಲ್ಲಿ ಸುಮಲತಾ ಹಾಗೂ ಪುನೀತ್​ ಒಟ್ಟಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಪುನೀತ್​ ತಾಯಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು. ಈ ಕಾರಣದಿಂದಲೂ ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಸಾಕಷ್ಟು ಕಾರ್ಯಕ್ರಮಗಳಲ್ಲಿ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

ಇಂದು ಸಾಕಷ್ಟು ಸೆಲೆಬ್ರಿಟಿಗಳು ಹಾಗೂ ಲಕ್ಷಾಂತರ ಅಭಿಮಾನಿಗಳು ಪುನೀತ್​ ಅಂತಿಮ ದರ್ಶನ ಪಡೆದಿದ್ದಾರೆ. ಜ್ಯೂ.ಎನ್​ಟಿಆರ್​, ಚಿರಂಜೀವಿ, ನಂದಮೂರಿ ಬಾಲಕೃಷ್ಣ ಮೊದಲಾದವರು ಪುನೀತ್​ ಅಂತಿಮ ದರ್ಶನ ಪಡೆದಿದ್ದಾರೆ. ಸ್ಯಾಂಡಲ್​ವುಡ್​ನ ಬಹುತೇಕರು ಕಂಠೀರವ ಸ್ಟೇಡಿಯಂಗೆ ಭೇಟಿ ನೀಡಿದ್ದಾರೆ.

ಅಪ್ಪನ ದರ್ಶನ ಪಡೆದ ಧೃತಿ:

ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಧೃತಿಗೆ ತಂದೆ ಪುನೀತ್​ ರಾಜ್​ಕುಮಾರ್​ ಮೃತಪಟ್ಟಿರುವ ವಿಚಾರ ನಿಜಕ್ಕೂ ಶಾಕಿಂಗ್​ ಆಗಿದೆ. ತಂದೆ ಮೃತಪಟ್ಟ ಸುದ್ದಿ ಕೇಳುತ್ತಲೇ ಅವರು ವಿಮಾನ ಏರಿ ಬೆಂಗಳೂರಿಗೆ ಬಂದಿದ್ದಾರೆ. 24 ಗಂಟೆಗೂ ಅಧಿಕ ಕಾಲ ಪ್ರಯಾಣ ಬೆಳೆಸಿ ಬೆಂಗಳೂರು ತಲುಪಿದ್ದಾರೆ. ವಿಮಾನ ನಿಲ್ದಾಣದಿಂದ ಅವರು ನೇರವಾಗಿ ಕಂಠೀರವ ಸ್ಟೇಡಿಯಂ ತಲುಪಿದರು. ಅಪ್ಪನ ತಲೆ ಸವರಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ದೊಡ್ಡಪ್ಪ ಶಿವರಾಜ್​ಕುಮಾರ್​ ಅವರು ಧೃತಿಯನ್ನು ಸಂತೈಸುವ ಪ್ರಯತ್ನ ಮಾಡಿದರು.

ಇದನ್ನೂ ಓದಿ: ‘ತುಂಬ ಸಂಕಟ ಆಗ್ತಿದೆ, ಕೈ ನಡುಗುತ್ತಿದೆ’; ಪುನೀತ್​ ಬಗ್ಗೆ ಮಾತಾಡುತ್ತ ಮೌನ ತಾಳಿದ ರಚಿತಾ ರಾಮ್​

ಅಪ್ಪನ ಅಂತಿಮ ದರ್ಶನ ಪಡೆದ ಧೃತಿ; ಪುನೀತ್​ ತಲೆ ಸವರಿ ಬಿಕ್ಕಿಬಿಕ್ಕಿ ಅತ್ತ ಮಗಳು

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ