AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಆಗುತ್ತೆ’; ಸುಮಲತಾ-ದರ್ಶನ್ ಸಂಬಂಧ ಹಳಸಿದ ಬಗ್ಗೆ ಆಪ್ತನ ಮಾತು

ದರ್ಶನ್ ಅವರು ಇನ್ಸ್ಟಾಗ್ರಾಮ್ ನಲ್ಲಿ ಸುಮಲತಾ ಅವರನ್ನು ಫಾಲೋ ಮಾಡುವುದನ್ನು ನಿಲ್ಲಿಸಿದ್ದಾರೆ. ಇದರಿಂದ ಅವರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ದರ್ಶನ್ ಅವರ ಆಪ್ತರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ತಾತ್ಕಾಲಿಕ ಎಂದೂ, ಶೀಘ್ರದಲ್ಲೇ ಎಲ್ಲವೂ ಸರಿಹೋಗಲಿದೆ ಎಂದೂ ಹೇಳಿದ್ದಾರೆ.

‘ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಆಗುತ್ತೆ’; ಸುಮಲತಾ-ದರ್ಶನ್ ಸಂಬಂಧ ಹಳಸಿದ ಬಗ್ಗೆ ಆಪ್ತನ ಮಾತು
ದರ್ಶನ್-ಸುಮಲತಾ
ರಾಜೇಶ್ ದುಗ್ಗುಮನೆ
|

Updated on: Mar 12, 2025 | 12:05 PM

Share

ನಟ ದರ್ಶನ್ ಹಾಗೂ ಸುಮಲತಾ ಸಂಬಂಧ ಹಳಸಿದೆ ಎಂಬ ಮಾತು ಜೋರಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್ ಅವರು ಸುಮಲತಾ ಸೇರಿದಂತೆ ಎಲ್ಲರನ್ನೂ ಅನ್​ಫಾಲೋ ಮಾಡಿದ್ದಾರೆ. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಇದೇ ಸಮಯದಲ್ಲಿ ಸುಮಲತಾ (Sumalatha) ಹಾಕಿರೋ ಮಾರ್ಮಿಕ ಪೋಸ್ಟ್ ಕೂಡ ಗಮನ ಸೆಳೆದಿದೆ. ಈ ಎಲ್ಲಾ ಬೆಳವಣಿಗೆ ಬಗ್ಗೆ ಸುಮಲತಾ ಹಾಗೂ ದರ್ಶನ್ ಆಪ್ತ ಶಶಿಕುಮಾರ್ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ಶೀಘ್ರವೇ ಎಲ್ಲವೂ ಸರಿ ಆಗಲಿದೆ ಎಂದು ಅವರು ಹೇಳಿದ್ದಾರೆ.

‘ ದರ್ಶನ್ ಹಾಗೂ ಸುಮಲತಾ ಅವರದ್ದು ಎಂದಿಗೂ ತಾಯಿ ಮಗನ ಸಂಬಂಧ. ದರ್ಶನ್ ಅವರು ಅಂಬರೀಷ್ ಕುಟುಂಬದಲ್ಲಿ ಒಬ್ಬರು. ದರ್ಶನ್ ಅವರು ತುಂಬ ಕಷ್ಟ ಅನುಭವಿಸಿದ್ದಾರೆ. ಜೈಲಿನಿಂದ ಬಂದ ನಂತರ ಅಷ್ಟಾಗಿ ಕಾಣಿಸಿಕೊಂಡಿಲ್ಲ. ದರ್ಶನ್ ಅವರಿಗೆ ಬೇಸರ ಇರಬಹುದು. ಹೀಗಾಗಿ ಈ ರೀತಿ ಪ್ರತಿಕ್ರಿಯಿಸಿರಬಹುದು. ಆದಾಗ್ಯೂ ಜೈಲಿನಲ್ಲಿ ಇದ್ದಾಗ ದರ್ಶನ್​ನ ಅವರು ಭೇಟಿ ಮಾಡಲು ಸಾಧ್ಯವಾಗಿಲ್ಲ. ಮಗನ ಈ ಪರಿಸ್ಥಿತಿಯಲ್ಲಿ ನೋಡಲು ಸಾಧ್ಯವಿಲ್ಲ ಎಂದು ಸುಮಲತಾ ನನ್ನ ಬಳಿ ಹೇಳಿದ್ದರು’ ಎಂದು ಶಶಿಕುಮಾರ್ ಹೇಳಿದ್ದಾರೆ.

ಈ ವಿಚಾರ ಇನ್ನು ಎರಡು ದಿನದಲ್ಲಿ ಸುಖಾಂತ್ಯ ಕಾಣುತ್ತದೆ’ ಎಂದು ಶಶಿಕುಮಾರ್ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಪರಸ್ಪರ ಭೇಟಿ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
ಸುಮಲತಾ-ದರ್ಶನ್ ಮಧ್ಯೆ ಬಿರುಕು? ಈ ಬೆಳವಣಿಗೆ ನೋಡಿದ್ರೆ ನೀವೂ ಒಪ್ತೀರಿ
Image
ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದರ್ಶನ್; ಕಾರಣ ನೀಡಿದ ನಟ
Image
ಚಂದನ್ ಶೆಟ್ಟಿ ಜೊತೆ ಮತ್ತೆ ಬಾಳುತ್ತೀರಾ? ನೇರವಾಗಿ ಉತ್ತರ ನೀಡಿದ ನಿವೇದಿತಾ
Image
ಮತ್ತೆ ಚಂದನ್ ಶೆಟ್ಟಿ ತಬ್ಬಿಕೊಂಡು ಕಣ್ಣೀರು ಹಾಕಿದ ನಿವೇದಿತಾ ಗೌಡ

ಸುಮಲತಾ ಪೋಸ್ಟ್ ಹಿಂದಿನ ಮರ್ಮವೇನು?

‘ಅತ್ಯುತ್ತಮ ನಟ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತದೆ ಎಂದರೆ.. ಯಾರು ಸತ್ಯವನ್ನ ತಿರುಚುತ್ತಾರೆ, ಪಶ್ಚಾತಾಪ ಇಲ್ಲದೆ ಬೇರೆಯವರಿಗೆ ನೋವು ಮಾಡುತ್ತಾರೆ, ತಪ್ಪನ್ನು ಬೇರೆಯವರ ಮೇಲೆ ಹಾಕುತ್ತಾರೆ. ಆದಾಗ್ಯೂ ಅವರು ತಮ್ಮನ್ನು ತಾವು ಹೀರೋ ಎಂದುಕೊಳ್ಳುತ್ತಾರೆ’ ಎಂದು ಸುಮಲತಾ ಪೋಸ್ಟ್ ಮಾಡಿದ್ದರು. ಈ ಬಗ್ಗೆಯೂ ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಸುಮಲತಾ-ದರ್ಶನ್ ಮಧ್ಯೆ ಬಿರುಕು? ಈ ಬೆಳವಣಿಗೆ ನೋಡಿದ್ರೆ ನೀವೂ ಒಪ್ತೀರಿ

‘ಸಾಮಾಜಿಕ ಜಾಲತಾಣದಲ್ಲಿ ಸುಮಲತಾ ಹಾಕಿರೋ ಫೋಸ್ಟ್​ಗೂ ಇದಕ್ಕು ಸಂಬಂಧವಿಲ್ಲ. ಕೆಲವೊಂದು ಕಾರಣಗಳಿಂದ ಸುಮಲತಾ ಅವರು ಆ ಪೋಸ್ಟ್ ಮಾಡಿದ್ದಾರೆ. ದರ್ಶನ್ ಅವರು ಸುಮಲತಾನ ಅನ್​ಫಾಲೋ ಮಾಡಿರಬಹುದು, ಆದರೆ, ದರ್ಶನ್ ಎಲ್ಲೂ ಹೇಳಿಕೆ ಕೊಟ್ಟಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಆಗುತ್ತದೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ