
ನಟ ದರ್ಶನ್ ಹಾಗೂ ಸುಮಲತಾ ಸಂಬಂಧ ಹಳಸಿದೆ ಎಂಬ ಮಾತು ಜೋರಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ದರ್ಶನ್ ಅವರು ಸುಮಲತಾ ಸೇರಿದಂತೆ ಎಲ್ಲರನ್ನೂ ಅನ್ಫಾಲೋ ಮಾಡಿದ್ದಾರೆ. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಇದೇ ಸಮಯದಲ್ಲಿ ಸುಮಲತಾ (Sumalatha) ಹಾಕಿರೋ ಮಾರ್ಮಿಕ ಪೋಸ್ಟ್ ಕೂಡ ಗಮನ ಸೆಳೆದಿದೆ. ಈ ಎಲ್ಲಾ ಬೆಳವಣಿಗೆ ಬಗ್ಗೆ ಸುಮಲತಾ ಹಾಗೂ ದರ್ಶನ್ ಆಪ್ತ ಶಶಿಕುಮಾರ್ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ಶೀಘ್ರವೇ ಎಲ್ಲವೂ ಸರಿ ಆಗಲಿದೆ ಎಂದು ಅವರು ಹೇಳಿದ್ದಾರೆ.
‘ ದರ್ಶನ್ ಹಾಗೂ ಸುಮಲತಾ ಅವರದ್ದು ಎಂದಿಗೂ ತಾಯಿ ಮಗನ ಸಂಬಂಧ. ದರ್ಶನ್ ಅವರು ಅಂಬರೀಷ್ ಕುಟುಂಬದಲ್ಲಿ ಒಬ್ಬರು. ದರ್ಶನ್ ಅವರು ತುಂಬ ಕಷ್ಟ ಅನುಭವಿಸಿದ್ದಾರೆ. ಜೈಲಿನಿಂದ ಬಂದ ನಂತರ ಅಷ್ಟಾಗಿ ಕಾಣಿಸಿಕೊಂಡಿಲ್ಲ. ದರ್ಶನ್ ಅವರಿಗೆ ಬೇಸರ ಇರಬಹುದು. ಹೀಗಾಗಿ ಈ ರೀತಿ ಪ್ರತಿಕ್ರಿಯಿಸಿರಬಹುದು. ಆದಾಗ್ಯೂ ಜೈಲಿನಲ್ಲಿ ಇದ್ದಾಗ ದರ್ಶನ್ನ ಅವರು ಭೇಟಿ ಮಾಡಲು ಸಾಧ್ಯವಾಗಿಲ್ಲ. ಮಗನ ಈ ಪರಿಸ್ಥಿತಿಯಲ್ಲಿ ನೋಡಲು ಸಾಧ್ಯವಿಲ್ಲ ಎಂದು ಸುಮಲತಾ ನನ್ನ ಬಳಿ ಹೇಳಿದ್ದರು’ ಎಂದು ಶಶಿಕುಮಾರ್ ಹೇಳಿದ್ದಾರೆ.
ಈ ವಿಚಾರ ಇನ್ನು ಎರಡು ದಿನದಲ್ಲಿ ಸುಖಾಂತ್ಯ ಕಾಣುತ್ತದೆ’ ಎಂದು ಶಶಿಕುಮಾರ್ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಪರಸ್ಪರ ಭೇಟಿ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.
‘ಅತ್ಯುತ್ತಮ ನಟ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತದೆ ಎಂದರೆ.. ಯಾರು ಸತ್ಯವನ್ನ ತಿರುಚುತ್ತಾರೆ, ಪಶ್ಚಾತಾಪ ಇಲ್ಲದೆ ಬೇರೆಯವರಿಗೆ ನೋವು ಮಾಡುತ್ತಾರೆ, ತಪ್ಪನ್ನು ಬೇರೆಯವರ ಮೇಲೆ ಹಾಕುತ್ತಾರೆ. ಆದಾಗ್ಯೂ ಅವರು ತಮ್ಮನ್ನು ತಾವು ಹೀರೋ ಎಂದುಕೊಳ್ಳುತ್ತಾರೆ’ ಎಂದು ಸುಮಲತಾ ಪೋಸ್ಟ್ ಮಾಡಿದ್ದರು. ಈ ಬಗ್ಗೆಯೂ ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: ಸುಮಲತಾ-ದರ್ಶನ್ ಮಧ್ಯೆ ಬಿರುಕು? ಈ ಬೆಳವಣಿಗೆ ನೋಡಿದ್ರೆ ನೀವೂ ಒಪ್ತೀರಿ
‘ಸಾಮಾಜಿಕ ಜಾಲತಾಣದಲ್ಲಿ ಸುಮಲತಾ ಹಾಕಿರೋ ಫೋಸ್ಟ್ಗೂ ಇದಕ್ಕು ಸಂಬಂಧವಿಲ್ಲ. ಕೆಲವೊಂದು ಕಾರಣಗಳಿಂದ ಸುಮಲತಾ ಅವರು ಆ ಪೋಸ್ಟ್ ಮಾಡಿದ್ದಾರೆ. ದರ್ಶನ್ ಅವರು ಸುಮಲತಾನ ಅನ್ಫಾಲೋ ಮಾಡಿರಬಹುದು, ಆದರೆ, ದರ್ಶನ್ ಎಲ್ಲೂ ಹೇಳಿಕೆ ಕೊಟ್ಟಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಆಗುತ್ತದೆ’ ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.