AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಸೆ ಈಡೇರಿತು’; ರೂಪೇಶ್ ಶೆಟ್ಟಿ ಜೊತೆ ತುಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಸುನೀಲ್ ಶೆಟ್ಟಿ

ಸುನೀಲ್ ಶೆಟ್ಟಿ ಅವರು ರೂಪೇಶ್ ಶೆಟ್ಟಿ ನಿರ್ದೇಶನದ ‘ಜೈ’ ಹೆಸರಿನ ಚಿತ್ರದ ಮೂಲಕ ತುಳು ಚಿತ್ರರಂಗಕ್ಕೆ ಬಂದಿದ್ದಾರೆ. ತುಳು ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಅವರ ಆಳವಾದ ಗೌರವ ಇದೆ. ಬಾಲಿವುಡ್​ನಲ್ಲಿ ಯಶಸ್ವಿಯಾಗಿರುವ ಸುನೀಲ್ ಶೆಟ್ಟಿ ಅವರು ತುಳು ಚಿತ್ರರಂಗದ ಬೆಳವಣಿಗೆಗೆ ಹೊಸ ಆಯಾಮವನ್ನು ತರುವ ನಿರೀಕ್ಷೆಯಿದೆ.

‘ಆಸೆ ಈಡೇರಿತು’; ರೂಪೇಶ್ ಶೆಟ್ಟಿ ಜೊತೆ ತುಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಸುನೀಲ್ ಶೆಟ್ಟಿ
ಸುನೀಲ್​-ರೂಪೇಶ್
ರಾಜೇಶ್ ದುಗ್ಗುಮನೆ
|

Updated on: Jan 15, 2025 | 8:56 AM

Share

ಸುನೀಲ್ ಶೆಟ್ಟಿ ಮಂಗಳೂರು ಮೂಲದವರು. ಅವರಿಗೆ ತುಳು ಭಾಷೆ ಸ್ಪಷ್ಟವಾಗಿ ಮಾತನಾಡಲು ಬರುತ್ತದೆ. ಅವರಿಗೆ ತುಳು ನಾಡಿನ ಬಗ್ಗೆ ವಿಶೇಷ ಗೌರವ ಇದೆ. ಅವರು ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಈಗ ಅವರು ತುಳು ಸಿನಿಮಾ ಮಾಡುತ್ತಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ಇದಕ್ಕಾಗಿ ಕೈ ಜೋಡಿಸಿದ್ದಾರೆ. ಅವರಿಗೆ ತುಳು ಸಿನಿಮಾ ಮಾಡಬೇಕು ಎಂಬ ಆಸೆ ಮೊದಲಿನಿಂದಲೂ ಇತ್ತಂತೆ. ಈಗ ಅವರು ತಮ್ಮ ಆಸೆಯನ್ನು ಈಡೇರಿಸಿಕೊಂಡಿದ್ದಾರೆ.

ರೂಪೇಶ್ ಶೆಟ್ಟಿ ಅವರು ಇತ್ತೀಚೆಗೆ ‘ಜೈ’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದಾರೆ. ಇದನ್ನು ರೂಪೇಶ್ ಶೆಟ್ಟಿ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಇದರಲ್ಲಿ ಅವರೇ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಇದು ಪಕ್ಕಾ ತುಳು ಸಿನಿಮಾ. ಇದಕ್ಕೆ ಬಾಲಿವುಡ್ ಹೀರೋನ ಆಗಮನ ಆಗಿದೆ ಎಂಬುದು ವಿಶೇಷ. ರೂಪೇಶ್ ಶೆಟ್ಟಿ ಅವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದಾರೆ.

ಸಿನಿಮಾ ಬಗ್ಗೆ ಹೆಮ್ಮೆ ಹೊರಹಾಕಿರುವ ರೂಪೇಶ್ ಶೆಟ್ಟಿ, ‘ಮೊದಲಿನಿಂದಲೂ ತುಳು ಸಿನಿಮಾ ಮಾಡಬೇಕು ಎಂಬ ಆಸೆ ಇತ್ತು. ತುಳು ಚಿತ್ರರಂಗ ತುಂಬಾನೇ ಅಭಿವೃದ್ಧಿ ಕಂಡಿದೆ. ರೂಪೇಶ್ ಶೆಟ್ಟಿ ಅವರು ಬಂದು ಕಥೆ ಹೇಳಿದಾಗ ಇದನ್ನು ಮಾಡಬೇಕು ಎಂದು ಅನಿಸಿತು. ಸಬ್ಜೆಕ್ಟ್ ನನಗೆ ಇಷ್ಟ ಆಯಿತು. ಇಲ್ಲಿನ ಜನರು ನನಗೆ ಯಾವಾಗಲೂ ನನಗೆ ಬೆಂಬಲ ನೀಡುತ್ತಾರೆ. ಸುಬ್ರಮಣ್ಯ, ಧರ್ಮಸ್ಥಳ ಮೊದಲಾದ ಪುಣ್ಯಸ್ಥಳಗಳಿಗೆ ಬರುತ್ತಾ ಇರುತ್ತೇನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬೇರೆಯವರ ಯಶಸ್ಸನ್ನು ನೋಡಿ ವಿಡಿಯೋ ಮಾಡಿದ ರೂಪೇಶ್ ಶೆಟ್ಟಿ

‘ಈ ಬಾರಿ ತುಳು ಸಿನಿಮಾ ಮಾಡುತ್ತಿದ್ದೇನೆ. ಇದು ಖುಷಿಯ ದಿನ. ಇದು ಹೆಮ್ಮೆ ಕೂಡ ಹೌದು. ಚಿಕ್ಕ ಜಾಗ ಆದರೂ ಸಾಕಷ್ಟು ಚೆನ್ನಾಗಿ ಸಿನಿಮಾ ಮಾಡುತ್ತಿದ್ದಾರೆ. ತುಳು ಜನರ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಇಲ್ಲಿಂದ ಹೋಗಿ ಹೆಸರು ಮಾಡಿದವರು ತುಂಬಾ ಜನ ಇದ್ದಾರೆ. ನಾನು ರೂಪೇಶ್​ಗೆ ಧನ್ಯವಾದ ಹೇಳುತ್ತೇನೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು