AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ತುಳು, ಕನ್ನಡ ಭಾಷೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ ಮಾಡಲಿರುವ ಸುನೀಲ್ ಶೆಟ್ಟಿ

ರೂಪೇಶ್ ಶೆಟ್ಟಿ ನಟನೆಯ ಕನ್ನಡ-ತುಳು ಭಾಷೆಯ ‘ಜೈ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ನವೆಂಬರ್ 7ರಂದು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಟ್ರೇಲರ್ ಬಿಡುಗಡೆ ಮಾಡಲು ಬೆಂಗಳೂರಿಗೆ ಆಗಮಿಸಲಿದ್ದಾರೆ. ‘ಜೈ’ ಸಿನಿಮಾದ ಟೀಸರ್ ಈಗಾಗಲೇ ಗಮನ ಸೆಳೆದಿದೆ. ವಿದೇಶದಲ್ಲಿ ನಡೆದ ಪ್ರೀಮಿಯರ್ ಶೋನಲ್ಲಿ ಜನಮೆಚ್ಚುಗೆ ಸಿಕ್ಕಿದೆ.

ಬೆಂಗಳೂರಲ್ಲಿ ತುಳು, ಕನ್ನಡ ಭಾಷೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ ಮಾಡಲಿರುವ ಸುನೀಲ್ ಶೆಟ್ಟಿ
Suniel Shetty, Roopesh Shetty
ಮದನ್​ ಕುಮಾರ್​
|

Updated on: Nov 05, 2025 | 5:30 PM

Share

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ (Roopesh Shetty) ಅವರು ಕನ್ನಡ ಮತ್ತು ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಅಭಿನಯಿಸಿರುವ ‘ಜೈ’ ಸಿನಿಮಾ (Jai Movie) ಈಗಾಗಲೇ ಕೆಲವು ಕಡೆಗಳಲ್ಲಿ ಪ್ರೀಮಿಯರ್ ಪ್ರದರ್ಶನ ಕಂಡು ಜನಮೆಚ್ಚುಗೆ ಪಡೆದಿದೆ. ನವೆಂಬರ್ 14ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಈಗಾಗಲೇ ಟೀಸರ್ ಗಮನ ಸೆಳೆದಿದೆ. ಈಗ ‘ಜೈ’ ಸಿನಿಮಾದ ಟ್ರೇಲರ್ ನೋಡುವ ಸಮಯ ಹತ್ತಿರ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಆಗಲಿದೆ. ಈ ಕಾರ್ಯಕ್ರಮಕ್ಕೆ ಬಾಲಿವುಡ್ ಸೂಪರ್ ಸ್ಟಾರ್ ಸುನೀಲ್ ಶೆಟ್ಟಿ (Suniel Shetty) ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಈ ಬಗ್ಗೆ ರೂಪೇಶ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಹೌದು, ಬಾಲಿವುಡ್​​ನ ಅಣ್ಣ ನಮ್ಮ ಬೆಂಗಳೂರಿಗೆ ಬರುತ್ತಿದ್ದಾರೆ. ಇಂಡಿಯನ್ ಸೂಪರ್ ಸ್ಟಾರ್ ಸುನೀಲ್ ಶೆಟ್ಟಿ ಅವರು ಜೈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ನವೆಂಬರ್ 7ರಂದು ಬೆಂಗಳೂರು ಮಂತ್ರಿ ಮಾಲ್​ಗೆ ಬರಲಿದ್ದಾರೆ’ ಎಂದು ರೂಪೇಶ್ ಶೆಟ್ಟಿ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ರೂಪೇಶ್ ಶೆಟ್ಟಿ ಅವರೇ ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರು ಜೊತೆಯಲ್ಲಿ ಅದ್ವಿತಿ ಶೆಟ್ಟಿ, ಅರವಿಂದ್ ಬೋಳಾರ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ. ಪಡೀಲ್, ದೇವದಾಸ್ ಕಾಪಿಕಾಡ್ ಮುಂತಾದವರು ನಟಿಸಿದ್ದಾರೆ. ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಕಾರಣದಿಂದ ‘ಜೈ’ ಸಿನಿಮಾ ಮೇಲೆ ನಿರೀಕ್ಷೆ ಜಾಸ್ತಿ ಇದೆ.

ಇತ್ತೀಚೆಗೆ ಮಸ್ಕಟ್​ನಲ್ಲಿ ‘ಜೈ’ ಚಿತ್ರದ ಅಂತಾರಾಷ್ಟ್ರೀಯ ಪ್ರೇಮಿಯರ್ ಶೋ ನಡೆಯಿತು. ಅಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದರು. ಅದರಿಂದಾಗಿ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ಟ್ರೇಲರ್ ಬಿಡುಗಡೆ ಆದ ಬಳಿಕ ಸಿನಿಮಾ ಮೇಲಿನ ಹೈಪ್ ಇನ್ನಷ್ಟು ಹೆಚ್ಚಾಗಲಿದೆ. ಸುನೀಲ್ ಶೆಟ್ಟಿ ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ಬಿಡುಗಡೆಗೂ ಮುನ್ನ ಜನಮೆಚ್ಚುಗೆ ಗಳಿಸಿದ ರೂಪೇಶ್ ಶೆಟ್ಟಿ ಸಿನಿಮಾ ‘ಜೈ’

ಕರ್ನಾಟಕದ ಬಗ್ಗೆ ಸುನೀಲ್ ಶೆಟ್ಟಿ ಅವರಿಗೆ ವಿಶೇಷ ಗೌರವ ಇದೆ. ಮಂಗಳೂರಿನಲ್ಲಿ ಜನಿಸಿದ ಅವರು ಚೆನ್ನಾಗಿ ತುಳು ಮಾತನಾಡುತ್ತಾರೆ. ‘ಜೈ’ ಸಿನಿಮಾ ಕನ್ನಡ ಮತ್ತು ತುಳು ಭಾಷೆಯಲ್ಲಿ ಬಿಡುಗಡೆ ಆಗಲಿದೆ. ‘ಸುನೀಲ್ ಶೆಟ್ಟಿ ಅವರ ಜೊತೆ ಕೆಲಸ ಮಾಡಿದ್ದು ಜೀವನದ ಒಂದು ಅದ್ಭುತ ಅನುಭವ. ಅವರನ್ನು ನಿರ್ದೇಶಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ’ ಎಂದು ರೂಪೇಶ್ ಶೆಟ್ಟಿ ಅವರು ಈ ಮೊದಲು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್