AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ​ ಜಾಮೀನು ಕೊಟ್ಟ ಹೈಕೋರ್ಟ್ ಬಗ್ಗೆ ನೇರವಾಗಿ ಅಸಮಾಧಾನ ಹೊರಹಾಕಿದ ಸುಪ್ರೀಂ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಟೀಕಿಸಿದೆ. ಹೈಕೋರ್ಟ್‌ನ ವಿವೇಚನೆಯ ಬಳಕೆ ಮತ್ತು ಪುರಾವೆಗಳನ್ನು ಪರಿಗಣಿಸುವಲ್ಲಿನ ವೈಫಲ್ಯವನ್ನು ಸುಪ್ರೀಂ ಎತ್ತಿ ಹಿಡಿದಿದೆ. ಸರ್ಕಾರದ ವಾದ ಆಲಿಸಿದ ನಂತರ, ಸುಪ್ರೀಂ ತನ್ನ ತೀರ್ಪನ್ನು ಕಾಯ್ದಿರಿಸಿದೆ.

ದರ್ಶನ್​ಗೆ​ ಜಾಮೀನು ಕೊಟ್ಟ ಹೈಕೋರ್ಟ್ ಬಗ್ಗೆ ನೇರವಾಗಿ ಅಸಮಾಧಾನ ಹೊರಹಾಕಿದ ಸುಪ್ರೀಂ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jul 24, 2025 | 2:05 PM

Share

ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ದರ್ಶನ್ (Darshan) ಅವರು ಜಾಮೀನು ಪಡೆದು ಹೊರಗಿದ್ದಾರೆ. ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ. ಈ ಆದೇಶವನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿದೆ. ‘ಜಾಮೀನು ನೀಡುವಲ್ಲಿ ಹೈಕೋರ್ಟ್ ನ್ಯಾಯಾಧೀಶರು ಈ ರೀತಿಯಾದ ಮಿಸ್ಟೇಕ್ ಮಾಡಬಹುದಾ’ ಎಂದು ಸುಪ್ರೀಂಕೋರ್ಟ್ ನೇರವಾಗಿ ಪ್ರಶ್ನೆ ಮಾಡಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್, ಪವಿತ್ರಾ ಮೊದಲಾದವರಿಗೆ ಜಾಮೀನು ನೀಡಿದ್ದನ್ನು ರಾಜ್ಯ ಸರ್ಕಾರ ಪ್ರಶ್ನೆ ಮಾಡಿತ್ತು. ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ , ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆದಿದೆ. ಈ ವೇಳೆ ನ್ಯಾಯಪೀಠ, ಹೈಕೋರ್ಟ್ ಆದೇಶದ ಬಗ್ಗೆ ಅಸಮಾಧಾನ ಹೊರಹಾಕಿದೆ.

‘ಕರ್ನಾಟಕ ಹೈಕೋರ್ಟ್ ಜಾಮೀನು ನೀಡಲು ಹೀಗೂ ಆದೇಶ ಕೊಡಬಹುದೇ? ಎಲ್ಲಾ ಜಾಮೀನು ಪ್ರಕರಣದಲ್ಲಿ ಹೈಕೋರ್ಟ್ ಒಂದೇ ರೀತಿಯ ಆದೇಶ ನೀಡಿದೆ. ಹೈಕೋರ್ಟ್ ತನ್ನ ವಿವೇಚನೆಯನ್ನು ಸರಿಯಾಗಿ ಬಳಸಿದೆಯೇ ಎಂಬುದು ಮುಖ್ಯ. ಘಟನೆ ನಡೆದಿರುವುದು ಸುಳ್ಳೇ? ಟೆಸ್ಟ್ ರಿಪೋರ್ಟ್ ಅನ್ನು ಪರಿಗಣಿಸಬಾರದೇ ಹೇಳಿ’ ಎಂದು ಕೋರ್ಟ್ ದರ್ಶನ್ ಪರ ವಕೀಲರಿಗೆ ಕೇಳಿದೆ.

ಇದನ್ನೂ ಓದಿ: ದರ್ಶನ್ ಕೇಸ್​ನಲ್ಲಿ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

‘ಹೈಕೋರ್ಟ್ ಆರೋಪಿಗಳನ್ನು ದೋಷಮುಕ್ತಗೊಳಿಸುವಂತೆ ಆದೇಶ ನೀಡಿದೆಯಲ್ಲವೇ? ಹೈಕೋರ್ಟ್ ಆದೇಶ ನೀಡಿರುವ ರೀತಿ ನಮಗೆ ನೋವುಂಟುಮಾಡಿದೆ. ಟ್ರಯಲ್ ಕೋರ್ಟ್ ಜಡ್ಜ್ ತಪ್ಪು ಮಾಡುತ್ತಾರೆಂದರೆ ನಂಬಬಹುದು. ಆದರೆ, ಹೈಕೋರ್ಟ್ ಜಡ್ಜ್ ನೀಡಿರುವ ಕಾರಣಗಳನ್ನು ಒಪ್ಪುವುದು ಹೇಗೆ’ ಎಂದು ಕೋರ್ಟ್ ಪ್ರಶ್ನೆ ಮಾಡಿದೆ.

 ಆದೇಶ ಕಾಯ್ದಿರಿಸಿದ ಕೋರ್ಟ್

ಸದ್ಯ ಸುಪ್ರೀಂಕೋರ್ಟ್ ಸರ್ಕಾರಿ ವಕೀಲರು, ದರ್ಶನ್ ಪರ ವಕೀಲರು ಹಾಗೂ ಪವಿತ್ರಾ ಗೌಡ ಪರ ವಕೀಲರ ವಾದವನ್ನು ಆಲಿಸಿದೆ. ಆ ಬಳಿಕ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕ ತೀರ್ಪನ್ನು ನೀಡುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಸದ್ಯ ಕೋರ್ಟ್ ಅಭಿಪ್ರಾಯ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ.

(ವರದಿ: ರಮೇಶ್ ಎಂ)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ