AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಕೇಸ್​ನಲ್ಲಿ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರಲಿಲ್ಲ. ಹೀಗಾಗಿ, ಅವರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನೀಡಿ ಎಂದು ಸರ್ಕಾರಿ ಪರ ವಕೀಲರಿಗೆ ನ್ಯಾಯಮೂರ್ತಿಗಳು ಸೂಚಿಸಿದರು. ಆಗ ಸಿದ್ದಾರ್ಥ್ ಲೂತ್ರಾ ಅವರು ಎಲ್ಲವನ್ನೂ ವಿವರವಾಗಿ ಹೇಳಿದರು. ಆ ಬಳಿಕ ದರ್ಶನ್ ಪರ ವಕೀಲರು ಕೂಡ ವಾದ ಮಂಡಿಸಿದರು.

ದರ್ಶನ್ ಕೇಸ್​ನಲ್ಲಿ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jul 24, 2025 | 1:17 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಈ ಪೈಕಿ ದರ್ಶನ್ ಹಾಗೂ ಏಳು ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ  ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ದರ್ಶನ್ (Darshan) ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧಿತರಾದ ದರ್ಶನ್ ಅವರು ಜೈಲಿನಲ್ಲಿ ಮಾಡಿಕೊಂಡ ಅವಾಂತರಗಳು ಒಂದೆರಡಲ್ಲ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಅವರು ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎಂದು ಸಾಬೀತು ಪಡಿಸುವ ಫೋಟೋಗಳು ಹೊರ ಬಂದವು. ಈ ಬೆನ್ನಲ್ಲೇ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಆ ಬಳಿಕ ದರ್ಶನ್ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತು.

ಬೆನ್ನು ನೋವಿನ ಕಾರಣ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್​ನಿಂದ ಸಂಪೂರ್ಣ ಜಾಮೀನು ದೊರೆತಿತ್ತು. ಇದನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಈಗ ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಅಲ್ಲದೆ, ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದ ಬಗ್ಗೆ ಅಸಮಾಧಾನ ಹೊರಹಾಕಿದೆ.

ಇದನ್ನೂ ಓದಿ
Image
ರಾಮಾಚಾರಿ ಪಾತ್ರ ಕೊನೆ; ಕೊಲೆಯಲ್ಲಿ ಅಂತ್ಯವಾಯ್ತು ಕ್ಯಾರೆಕ್ಟರ್
Image
ಗೌತಮ್-ಭೂಮಿಕಾ ಮಗನಿಗೆ ನಾಮಕರಣ ಶಾಸ್ತ್ರ; ಇಟ್ಟ ಹೆಸರೇನು?
Image
‘ವಿಂಟೇಜ್ ಪವನ್ ಕಲ್ಯಾಣ್’; ‘ಹರಿ ಹರ ವೀರ ಮಲ್ಲು’ ವಿಮರ್ಶೆ ಕೊಟ್ಟ ಫ್ಯಾನ್ಸ್
Image
ಆರೇ ದಿನಕ್ಕೆ 150 ಕೋಟಿ ಕಲೆಕ್ಷನ್ ಮಾಡಿದ ‘ಸೈಯಾರಾ’; ಹರಿಯುತ್ತಲೇ ಇದೆ ಹಣ

ಕೋರ್ಟ್​​ನಲ್ಲಿ ಏನೆಲ್ಲ ಆಯ್ತು?

ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್​ಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಆದೇಶ ನೀಡಿತ್ತು. ಈ ಆದೇಶವನ್ನು ಕರ್ನಾಟಕ ಸರ್ಕಾರ  ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ಮೊದಲು ವಾದ ಮಂಡಿಸಿದರು. ‘ಇದು ಭೀಕರ ಕೊಲೆ ಕೇಸ್. ಏಳು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ರದ್ದಾಗಬೇಕು ಎನ್ನುವುದು ನಮ್ಮ ವಾದ. ಅಪಾರ್ಟ್ ಮೆಂಟ್ ಬಳಿ ಡೆಡ್ ಬಾಡಿ ಸಿಕ್ಕಿದೆ’ ಎಂದು ಅವರು ವಾದಿಸಿದರು. ಸದ್ಯ ಏಳು ಆರೋಪಿಗಳ ಜಾಮೀನನ್ನು ಮಾತ್ರ ರದ್ದು ಮಾಡಬೇಕು ಎಂದು ಕೋರಿದರು.

ಇದನ್ನೂ ಓದಿ:  ದರ್ಶನ್ ಜಾಮೀನು ರದ್ದಿಗೆ ಅರ್ಜಿ; ವಿಚಾರಣೆಯ ಲೈವ್ ವಿಡಿಯೋ ಇಲ್ಲಿದೆ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರಲಿಲ್ಲ. ಹೀಗಾಗಿ, ಅವರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನೀಡಿ ಎಂದು ಸರ್ಕಾರಿ ಪರ ವಕೀಲರಿಗೆ ನ್ಯಾಯಮೂರ್ತಿಗಳು ಸೂಚಿಸಿದರು. ಆಗ ಸಿದ್ದಾರ್ಥ್ ಲೂತ್ರಾ ಅವರು ಎಲ್ಲವನ್ನೂ ವಿವರವಾಗಿ ಹೇಳಿದರು.

ದರ್ಶನ್ ಹಾಗೂ ಪವಿತ್ರಾ ಸಂಬಂಧ, ದರ್ಶನ್ ಕೊಲೆಯಲ್ಲಿ ಭಾಗಿ ಆಗಿದ್ದಕ್ಕೆ ಸಿಕ್ಕ ಸಾಕ್ಷಿಗಳು, ಜಾಮೀನು ಸಿಕ್ಕ ಬಳಿಕ ಸಾಕ್ಷಿಗಳ ಜೊತೆ ದರ್ಶನ್ ಕಾಣಿಸಿಕೊಂಡಿದ್ದು ಸೇರಿದಂತೆ ಎಲ್ಲವನ್ನೂ ವಿವರಿಸಿದರು.

ವಿದೇಶದಲ್ಲಿ ದರ್ಶನ್

ದರ್ಶನ್ ಅವರು ಇದೇ ತಿಂಗಳು 15ರಂದು ಥೈಲ್ಯಾಂಡ್​ಗೆ ಪ್ರವಾಸ ಬೆಳೆಸಿದ್ದಾರೆ. ‘ಡೆವಿಲ್’ ಸಿನಿಮಾ ಶೂಟಿಂಗ್​ಗೆ ಅವರು ಅಲ್ಲಿಗೆ ಹೋಗಿದ್ದಾರೆ. ಹಾಡಿನ ಚಿತ್ರೀಕರಣ ಹಾಗೂ ಒಂದು ಫೈಟ್ ದೃಶ್ಯದ ಶೂಟ್ ಬಾಕಿ ಇದೆ. ಜುಲೈ 25ರಂದು ಅವರು ಬೆಂಗಳೂರಿಗೆ ಮರಳಲಿದ್ದಾರೆ.

(ವರದಿ: ರಮೇಶ್)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:04 pm, Thu, 24 July 25