ಸುಪ್ರೀಂ ಕೋರ್ಟ್‌ನಲ್ಲಿ ಜುಲೈ 17ಕ್ಕೆ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ
‘ದಿ ಡೆವಿಲ್’ ಸಿನಿಮಾದ ಶೂಟಿಂಗ್ ಸಲುವಾಗಿ ದರ್ಶನ್ ಅವರು ಇತ್ತೀಚೆಗೆ ವಿದೇಶಕ್ಕೆ ತೆರಳಿದರು. ಆದರೆ ಅವರಿಗೆ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ ಜು.17ರಂದು ಇದರ ವಿಚಾರಣೆ ನಡೆಯಲಿದೆ. ಕೋರ್ಟ್ ನೀಡುವ ಆದೇಶದ ಮೇಲೆ ದರ್ಶನ್ ಮತ್ತು ಇತರೆ ಆರೋಪಿಗಳ ಭವಿಷ್ಯ ನಿಂತಿದೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ (Darshan Thoogudeepa) ಮತ್ತು ಸಹಚರರ ಜಾಮೀನು ಭವಿಷ್ಯ ಗುರುವಾರ (ಜುಲೈ 17) ಸುಪ್ರೀಂ ಕೋರ್ಟ್‌ನಲ್ಲಿ ನಿರ್ಧಾರ ಆಗಲಿದೆ. 2024ರ ಡಿಸೆಂಬರ್‌ನಲ್ಲಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು (Bail) ನೀಡಿತ್ತು. ಆದರೆ ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಕೋರಿದೆ. ಅದಕ್ಕೆ ಸಂಬಂಧಿಸಿದಂತೆ ಜುಲೈ 17ರಂದು ವಿಚಾರಣೆ ನಡೆಯಲಿದೆ.
2024ರ ಜೂನ್ನಲ್ಲಿ ರೇಣುಕಾಸ್ವಾಮಿ ಶವ ಪತ್ತೆ ಆದ ನಂತರ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರಿಂದ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳಿಸಲಾಗಿತ್ತು. ಕಡೆಗೂ 2024ರ ಡಿಸೆಂಬರ್‌ನಲ್ಲಿ ದರ್ಶನ್ ಜಾಮೀನು ಪಡೆದುಕೊಂಡಿದ್ದರು.
ದರ್ಶನ್ ಪ್ರಭಾವಿ ವ್ಯಕ್ತಿ ಆದ ಕಾರಣ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬ ಕಾರಣದಿಂದ ಅವರಿಗೆ ನೀಡಿರುವ ಜಾಮೀನನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ. ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ ಯಾವ ಆದೇಶ ನೀಡಲಿದೆ ಎಂಬುದರ ಮೇಲೆ ದರ್ಶನ್ ಮತ್ತು ಇತರ ಆರೋಪಿಗಳ ಭವಿಷ್ಯ ನಿರ್ಧಾರ ಆಗಲಿದೆ.
ಅರೆಸ್ಟ್ ಆಗುವುದಕ್ಕೂ ಮುನ್ನ ದರ್ಶನ್ ಅವರು ‘ದಿ ಡೆವಿಲ್’ ಸಿನಿಮಾದ ಶೂಟಿಂಗ್ನಲ್ಲಿ ಭಾಗಿ ಆಗಿದ್ದರು. ಆದರೆ ಅವರ ಬಂಧನದ ಬಳಿಕ ಚಿತ್ರೀಕರಣಕ್ಕೆ ಬ್ರೇಕ್ ಬಿತ್ತು. ಜಾಮೀನು ಸಿಕ್ಕರೂ ಕೂಡ ದರ್ಶನ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದ ಕಾರಣ ಚಿತ್ರೀಕರಣ ಪುನಃ ಶುರುವಾಗಲು ವಿಳಂಬ ಆಯಿತು. ಚೇತರಿಸಿಕೊಂಡ ಬಳಿಕ ಅವರು ಚಿತ್ರೀಕರಣದಲ್ಲಿ ಭಾಗಿಯಾದರು.
ಇದನ್ನೂ ಓದಿ: ದರ್ಶನ್ಗೆ ಸಂಕಷ್ಟ? ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷಿ ಜೊತೆಯೇ ಸಿನಿಮಾ ವೀಕ್ಷಿಸಿದ ದಾಸ
‘ದಿ ಡೆವಿಲ್’ ಸಿನಿಮಾದ ಶೂಟಿಂಗ್ ಸಲುವಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡಬೇಕು ಎಂದು ಕೋರಿ ದರ್ಶನ್ ಅವರು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ನ್ಯಾಯಾಲಯ ಇತ್ತೀಚೆಗೆ ಅನುಮತಿ ನೀಡಿತ್ತು. ದರ್ಶನ್ ಅವರು ‘ದಿ ಡೆವಿಲ್’ ಸಿನಿಮಾ ತಂಡದ ಜೊತೆ ವಿದೇಶಕ್ಕೆ ತೆರಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.








