AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SC on Darshan Bail: ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು ಮತ್ತೆ ಜೈಲು ಸೇರಬೇಕಿದೆ.

SC on Darshan Bail: ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್
Darshan (3)
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Aug 14, 2025 | 11:27 AM

Share

ನಟ ದರ್ಶನ್​ಗೆ (Darshan) ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ತಕ್ಷಣವೇ ಜೈಲು ಸೇರಬೇಕಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.

‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಜೈಲಿನಲ್ಲಿ ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದು ಸುಪ್ರೀಂಕೋರ್ಟ್ ಹೇಳಿದೆ.

ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11  ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.

ಇದನ್ನೂ ಓದಿ
Image
ಗೌತಮ್ ಕೈಯಲ್ಲಿ ತಾಯಿಯ ಹಿಸ್ಟರಿ; ದುರ್ಗಾಗೆ ಬಂತು ಅಕ್ಕನ ನೆನಪು
Image
20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದ ‘ಸು ಫ್ರಮ್ ಸೋ’
Image
‘ಸತ್ಯ ಎಲ್ಲಕ್ಕಿಂತ ದೊಡ್ಡದು, ನ್ಯಾಯ ಸಿಗುತ್ತದೆ’; ಪವಿತ್ರಾ ಗೌಡ
Image
ಶ್ವಾನಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ ಹೇಳೋದೇನು?

‘ನಾವು ಕಲೆ ಹಾಕಿದ ಸಾಕ್ಷ್ಯವನ್ನು ಸುಪ್ರೀಂ ಒಪ್ಪಿದೆ. ಇದು ಮಹತ್ವದ ತೀರ್ಪು. ಜೈಲಿನಲ್ಲಿ ಮಾಡಿದ ಐಷಾರಾಮಿ ಜೀವನ, ಹೊರ ಬಂದ ಬಳಿಕ ನಡೆದುಕೊಂಡ ರೀತಿಯನ್ನು ನಾವು ಕೋರ್ಟ್​ಗೆ ಮನವಿ ಮಾಡಿದ್ದೆವು’ ಎಂದು ಸರ್ಕಾರದ ಪರ ವಕೀಲರು ಹೇಳಿದ್ದಾರೆ.

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಡಿಸೆಂಬರ್​ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ ಬಳಿ ಪ್ರಶ್ನೆ ಮಾಡಿತ್ತು.

ಇದನ್ನೂ ಓದಿ: ದರ್ಶನ್​​ಗೆ ಮತ್ತೆ ಜೈಲು; ಇಲ್ಲಿದೆ ವಿಚಾರಣೆಯ ಲೈವ್ ವಿಡಿಯೋ

ಹಲವು ದಿನಗಳ ಕಾಲ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತ್ತು. ಅಲ್ಲದೆ, ಕರ್ನಾಟಕ ಹೈಕೋರ್ಟ್ ಜಾಮೀನು ಕೊಡಲು ನೀಡಿದ ಕಾರಣಗಳ ಬಗ್ಗೆ ಬೇಸರ ಹೊರಹಾಕಿತ್ತು. ಈಗ ಸುಪ್ರೀಂ ತೀರ್ಪು ನೀಡಿದೆ. ದರ್ಶನ್ ಅವರಿಗೆ ಜಾಮೀನು ನೀಡಿದ್ದರ ಬಗ್ಗೆ ಈ ಮೊದಲು ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್​ಗೆ ಛೀಮಾರಿ ಹಾಕಿತ್ತು.

ದರ್ಶನ್ ಅವರು ಇಷ್ಟು ದಿನ ಹೊರಗೆ ಹಾಯಾಗಿ ಓಡಾಡಿಕೊಂಡಿದ್ದರು. ಆದರೆ, ಈಗ ಅವರಿಗೆ ತೊಂದರೆ ಎದುರಾಗಿದೆ. ಅವರು ಮತ್ತೆ ಜೈಲು ಸೇರು ಬೇಕಿದೆ. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:43 am, Thu, 14 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ