AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಶುರುವಾಯ್ತು ‘ಕಾಗೆ ಬಂಗಾರ’; ಪಾತ್ರವರ್ಗದಲ್ಲಿ ಯಾರಿದ್ದಾರೆ?

ದುನಿಯಾ ಸೂರಿ ನಿರ್ದೇಶನದ ಬಹುನಿರೀಕ್ಷಿತ ‘ಕಾಗೆ ಬಂಗಾರ’ ಚಿತ್ರದ ಚಿತ್ರೀಕರಣ ಆರಂಭವಾಗಿದೆ. ಈ ಸಿನಿಮಾಗೆ ಸೂರ್ಯ ಪ್ರಖ್ಯಾತ್ ನಾಯಕನಾಗಿ ಹಾಗೂ ವಿಜಯ್ ಕುಮಾರ್ ಪುತ್ರಿ ರಿತಾನ್ಯಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. 'ಕೆಂಡಸಂಪಿಗೆ' ಹಾಗೂ 'ಪಾಪ್‌ಕಾರ್ನ್ ಮಂಕಿ ಟೈಗರ್' ಸಿನಿಮಾಗಳಿಗೆ ಸಂಪರ್ಕ ಕಲ್ಪಿಸುವ ವಿಶಿಷ್ಟ ಕಥಾಹಂದರ ಈ ಚಿತ್ರಕ್ಕಿರಲಿದೆ.

ಕೊನೆಗೂ ಶುರುವಾಯ್ತು ‘ಕಾಗೆ ಬಂಗಾರ’; ಪಾತ್ರವರ್ಗದಲ್ಲಿ ಯಾರಿದ್ದಾರೆ?
ದುನಿಯಾ ಸೂರಿ
ರಾಜೇಶ್ ದುಗ್ಗುಮನೆ
|

Updated on: Sep 07, 2026 | 2:54 PM

Share

ಮುಖ್ಯಾಂಶಗಳು

  • ಕೊನೆಗೂ ಶುರುವಾಯ್ತು ‘ಕಾಗೆ ಬಂಗಾರ’
  • ಸೂರಿ ಸಿನಿಮಾಗೆ ಸೂರ್ಯ ಪ್ರಖ್ಯಾತ್ ಹೀರೋ
  • ವಿಜಯ್ ಕುಮಾರ್ ಪುತ್ರಿ ರಿತಾನ್ಯಾ ನಾಯಕಿ 

2015ರಲ್ಲಿ ರಿಲೀಸ್ ಆದ ‘ಕೆಂಡ ಸಂಪಿಗೆ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದನ್ನು ನಿರ್ದೇಶನ ಮಾಡಿದ್ದು ಸೂರಿ ಅವರು. ಲವ್ ಸ್ಟೋರಿ ಜೊತೆಗೆ ಕ್ರೈಮ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಈ ಚಿತ್ರದ ಸೀಕ್ವೆಲ್ ‘ಕಾಂಗೆ ಬಂಗಾರ’ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಚಿತ್ರ ಸಿನಿಮಾ ಕೊನೆಗೂ ಟೇಕ್ ಆಫ್ ಆಗಿದೆ. ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಸಾಕಷ್ಟು ಕುತೂಹಲ

ಹಲವು ದಿನಗಳ ವಿಳಂಬ ಮತ್ತು ತಾರಾಗಣದ ಬದಲಾವಣೆ ‘ಕೆಂಡ ಸಂಪಿಗೆ ವಿಳಂಬಕ್ಕೆ ಪ್ರಮುಖ ಕಾರಣ. ಇತ್ತೀಚೆಗೆ ಚಿತ್ರದ ಮುಹೂರ್ತ ನಡೆದಿದೆ. ಈ ಹೊಸ ಪ್ರಾಜೆಕ್ಟ್‌ಗೆ ನಾಯಕ ಮತ್ತು ನಾಯಕಿಯ ಪಾತ್ರಗಳು ಫೈನಲ್ ಆಗಿವೆ. ಸಿನಿಮಾ ತಂಡ ಶೀಘ್ರದಲ್ಲೇ ಈ ವಿಷಯವನ್ನು ಅಧಿಕೃತವಾಗಿ ಹೊರಹಾಕಲಿದೆ.

‘ನಡುವೆ ಅಂತರವಿರಲಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಸೂರ್ಯ ಪ್ರಖ್ಯಾತ್ ಈ ಸಿನಿಮಾಗೆ ನಾಯಕನಾಗಿದ್ದಾರೆ. ಇತ್ತೀಚೆಗೆ ‘ಜೆಸಿ – ದಿ ಯೂನಿವರ್ಸಿಟಿ’ ಚಿತ್ರದಲ್ಲಿ ಇವರು ನಟಿಸಿದ್ದರು. ಈಗ ಸೂರಿ ಅವರ ನಿರ್ದೇಶನದಲ್ಲಿ ಪ್ರಮುಖ ಪಾತ್ರ ಮಾಡಲು ಸೂರ್ಯ ಸಜ್ಜಾಗಿದ್ದಾರೆ. ಇವರ ಎಂಟ್ರಿಯಿಂದ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

ಈ ಚಿತ್ರಕ್ಕೆ ನಟ ವಿಜಯ್ ಕುಮಾರ್ ಅವರ ಪುತ್ರಿ ರಿತಾನ್ಯಾ ವಿಜಯ್ ನಾಯಕಿಯಾಗಿದ್ದಾರೆ. ಜಡೇಶ್ ಕೆ ಹಂಪಿ ನಿರ್ದೇಶನದ ‘ಲ್ಯಾಂಡ್‌ಲಾರ್ಡ್’ ಚಿತ್ರದ ಮೂಲಕ ರಿತಾನ್ಯಾ ಬಣ್ಣದ ಲೋಕಕ್ಕೆ ಬಂದರು. ರಿತಾನ್ಯಾ ಅವರ ನಟನೆಗೆ ಸೂರಿ ಸೂಕ್ತ ವೇದಿಕೆ ಕಲ್ಪಿಸಿದ್ದಾರೆ.

ದುನಿಯಾ ಸೂರಿ ಸಿನಿಮಾ ಅಂದಮೇಲೆ ವಿಭಿನ್ನ ಪಾತ್ರಗಳು ಹಾಗೂ ಕಥಾಹಂದರ ಇರಲೇಬೇಕು. ಈ ಸಿನಿಮಾ ಸೂರಿ ಅವರ ಹಿಂದಿನ ಸೂಪರ್ ಹಿಟ್ ಚಿತ್ರಗಳಾದ ‘ಕೆಂಡಸಂಪಿಗೆ’ ಮತ್ತು ‘ಪಾಪ್‌ಕಾರ್ನ್ ಮಂಕಿ ಟೈಗರ್’ ಜೊತೆ ಲಿಂಕ್ ಹೊಂದಿದೆ. ಈ ಸಿನಿಮಾಗಳನ್ನು ಬೆಸೆಯುವ ಸಿನಿಮಾ ಆಗಿ ‘ಕಾಗೆ ಬಂಗಾರ’ ಮೂಡಿಬರಲಿದೆ. ಈ ಕನೆಕ್ಷನ್ ಪ್ರೇಕ್ಷಕರಿಗೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ರಂಗಾಯಣ ರಘು ಬಗ್ಗೆ ದುನಿಯಾ ಸೂರಿ ಮನದಲ್ಲಿದೆ ಬೆಟ್ಟದಷ್ಟು ಗೌರವ

‘ಕೆಂಡಸಂಪಿಗೆ’ ಚಿತ್ರದಲ್ಲಿ ಗಮನ ಸೆಳೆದಿದ್ದ ಪ್ರಶಾಂತ್ ಸಿದ್ಧಿ ಈ ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿದ್ದಾರೆ. ಅವರ ಪಾತ್ರವೇ ಈ ಸರಣಿಯಲ್ಲಿ ಹೈಲೈಟ್ ಆಗಲಿದೆ. ಹಿಂದಿನ ಎರಡು ಸಿನಿಮಾಗಳಲ್ಲಿದ್ದ ಹಲವು ನಟರು ಕೂಡ ಈ ಚಿತ್ರಕ್ಕೆ ಸೇರ್ಪಡೆಯಾಗಲಿದ್ದಾರೆ. ಸೂರಿ ಕಟ್ಟಿಕೊಡಲಿರುವ ಈ ಚಿತ್ರ ಹೇಗಿರಲಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್