AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಟಾರ್ ಹೀರೋ ಒಂಟಿಯಾಗಿ ಸಿಗೋಕೆ ಹೇಳಿದ್ದ’; ‘ಸೂರ್ಯವಂಶ’ ನಟಿಯ ಗಂಭೀರ ಆರೋಪ  

ಇಶಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1998ರಲ್ಲಿ. ‘ಚಂದ್ರಲೇಖಾ’ ಅವರ ನಟನೆಯ ಮೊದಲ ಸಿನಿಮಾ. ತೆಲುಗಿನ ಈ ಸಿನಿಮಾದಲ್ಲಿ ಲೇಖಾ ಹೆಸರಿನ ಪಾತ್ರ ಮಾಡಿದ್ದರು. ಆ ಬಳಿಕ ಅವರು ಹಲವು ಸಿನಿಮಾ ಮಾಡಿದರು. ‘ಸೂರ್ಯವಂಶ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ. ಅವರಿಗೆ ಕೆಟ್ಟ ಅನುಭವ ಆಗಿತ್ತು.

‘ಸ್ಟಾರ್ ಹೀರೋ ಒಂಟಿಯಾಗಿ ಸಿಗೋಕೆ ಹೇಳಿದ್ದ’; ‘ಸೂರ್ಯವಂಶ’ ನಟಿಯ ಗಂಭೀರ ಆರೋಪ  
ಇಶಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 21, 2024 | 9:19 AM

Share

ಕಾಸ್ಟಿಂಗ್ ಕೌಚ್ ಬಗ್ಗೆ ಆಗಾಗ ಚರ್ಚೆ ಆಗುತ್ತಲೇ ಇರುತ್ತದೆ. ಅನೇಕ ನಟಿಯರು ಮುಂದೆ ಬಂದು ತಮಗಾದ ಕಹಿ ಅನುಭವ ಹೇಳಿಕೊಳ್ಳುತ್ತಿದ್ದಾರೆ. ಬಹುತೇಕರು ತಮಗೆ ಕಿರುಕುಳ ಕೊಟ್ಟವರ ಹೆಸರನ್ನು ಹೇಳಲು ಹಿಂದೇಟು ಹಾಕಿದ್ದಾರೆ. ಕನ್ನಡದ ‘ಸೂರ್ಯವಂಶ’ದಲ್ಲಿ (Suryavamsha ) ವಿಷ್ಣುವರ್ಧನ್ ಜೊತೆ ನಟಿಸಿದ್ದ ಇಶಾ ಕೊಪ್ಪಿಕರ್ ಅವರು ಈಗ ಬಾಲಿವುಡ್ ಹೀರೋನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತಮಗಾದ ಕಹಿ ಅನುಭವ ಬಿಚ್ಚಿಟ್ಟಿದ್ದಾರೆ. ಅಷ್ಟಕ್ಕೂ ಅವರು ಹೇಳಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಇಶಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1998ರಲ್ಲಿ. ‘ಚಂದ್ರಲೇಖಾ’ ಅವರ ನಟನೆಯ ಮೊದಲ ಸಿನಿಮಾ. ತೆಲುಗಿನ ಈ ಸಿನಿಮಾದಲ್ಲಿ ಲೇಖಾ ಹೆಸರಿನ ಪಾತ್ರ ಮಾಡಿದ್ದರು. ಆ ಬಳಿಕ ಅವರು ಹಲವು ಸಿನಿಮಾ ಮಾಡಿದರು. ‘ಸೂರ್ಯವಂಶ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ. ‘ಓ ನನ್ನ ನಲ್ಲೆ’, ‘ಹೂ ಅಂತೀಯಾ ಊಹೂ ಅಂತೀಯಾ’ ಹೆಸರಿನ ಕನ್ನಡ ಚಿತ್ರಗಳಲ್ಲಿ ನಟಿಸಿದರು. ಆ ಬಳಿಕ ಬಾಲಿವುಡ್​ಗೆ ಕಾಲಿಟ್ಟ ಅವರು ದಕ್ಷಿಣದತ್ತ ಅಷ್ಟಾಗಿ ಕೆಲಸ ಮಾಡಿಲ್ಲ. ಅವರು ತಮಗಾದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ.

‘ನೀವು ಏನು ಮಾಡಬಹುದು ಎಂಬುದದನ್ನು ಇಲ್ಲಿ ಯಾರೂ ಕೇಳಲ್ಲ. ಇದೆಲ್ಲವನ್ನು ಹೀರೋಗಳು ನಿರ್ಧರಿಸುತ್ತಿದ್ದರು. ನೀವು MeToo ಬಗ್ಗೆ ಕೇಳಿರುತ್ತೀರಿ. ಮತ್ತು ನೀವು ಮೌಲ್ಯಗಳನ್ನು ಹೊಂದಿದ್ದರೆ ಆ ಪರಿಸ್ಥಿತಿ ತುಂಬಾ ಕಷ್ಟಕರವಾಗುತ್ತದೆ. ನನ್ನ ಕಾಲದಲ್ಲಿ ಅನೇಕ ನಟಿಯರು ಇಂಡಸ್ಟ್ರಿ ತೊರೆದರು. ಒಂದೋ ಹುಡುಗಿಯರು ಒಪ್ಪಿದರು ಇಲ್ಲವೇ ಚಿತ್ರರಂಗ ತೊರೆದರು. ಇನ್ನೂ ಕೆಲವರು ಇಂಡಸ್ಟ್ರಿಯಲ್ಲಿ ಹೋರಾಡುತ್ತಾ ಇರುವ ಕೆಲವೇ ಕೆಲವು ಮಂದಿ ಇದ್ದಾರೆ. ನಾನು ಅವರಲ್ಲಿ ಒಬ್ಬಳು’ ಎಂದಿದ್ದಾರೆ ಅವರು.

‘ನನಗೆ ಆಗ 18 ವರ್ಷ. ಓರ್ವ ಸೆಕ್ರೆಟರಿ ನನಗೆ ಕರೆ ಮಾಡಿದರು. ಹೀರೋಗೆ ನೀವು ಒಂಟಿಯಾಗಿ ಸಿಗಬೇಕು ಎಂಬ ಬೇಡಿಕೆ ಇದೆ ಎಂದು ಹೇಳಿದ್ದರು. ಕೆಲಸ ಸಿಗಬೇಕಾದರೆ ನಟರ ಜೊತೆ ಫ್ರೆಂಡ್ಲಿ ಆಗಬೇಕು ಎಂದು ಅವರು ಹೇಳಿದರು. ನಾನು ತುಂಬಾ ಸ್ನೇಹಜೀವಿ, ಆದರೆ ‘ಫ್ರೆಂಡ್ಲಿ ಎಂದರೆ ಏನು’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಧಮ್ಕಿಗಳಿಗೆ ಬಗ್ಗದೇ ‘ಸೂರ್ಯವಂಶ’ ಧಾರಾವಾಹಿ ಶುರು ಮಾಡಿದ ಅನಿರುದ್ಧ್; ಉದಯ ಟಿವಿಯಲ್ಲಿ ಪ್ರಸಾರ 

‘23ನೇ ವಯಸ್ಸಿನಲ್ಲೂ ಹಾಗೆಯೇ ಆಗಿತ್ತು. ಒಂಟಿಯಾಗಿ ಸಿಗುವಂತೆ ಓರ್ವ ನಟ ಕೇಳಿದ್ದ. ಒಬ್ಬಂಟಿಯಾಗಿ ಕಾರು ಚಲಾಯಿಸಿಕೊಂಡು ಬರುವಂತೆ ಆತ ಹೇಳಿದ್ದ. ಆತನ ಹೆಸರು ಆಗಲೇ ಹಲವು ಹೀರೋಯಿನ್​ಗಳ ಜೊತೆ ತಳುಕು ಹಾಕಿಕೊಂಡಿತ್ತು. ಈ ರೀತಿ ಬೇಡಿಕೆ ಇಟ್ಟಿದ್ದು ಹಿಂದಿಯ ಎ-ಲಿಸ್ಟ್​ನ ನಟ’ ಎಂದಿದ್ದಾರೆ ಇಶಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:10 am, Fri, 21 June 24

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ