‘ಕೆಜಿಎಫ್ 2’ ಸಿನಿಮಾ ನೋಡಿ ಭೇಷ್ ಎಂದ ಅಲ್ಲು ಅರ್ಜುನ್; ಯಶ್ ಪರ್ಫಾರ್ಮೆನ್ಸ್​​ಗೆ ಸ್ಟೈಲಿಶ್ ಸ್ಟಾರ್ ಫಿದಾ

ಅಲ್ಲು ಅರ್ಜುನ್ ಅವರು ‘ಕೆಜಿಎಫ್ 2’ ಸಿನಿಮಾ ವೀಕ್ಷಿಸಿದ್ದಾರೆ. ಈ ಸಿನಿಮಾಗೆ ಅವರು ಭೇಷ್ ಎಂದಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

‘ಕೆಜಿಎಫ್ 2’ ಸಿನಿಮಾ ನೋಡಿ ಭೇಷ್ ಎಂದ ಅಲ್ಲು ಅರ್ಜುನ್; ಯಶ್ ಪರ್ಫಾರ್ಮೆನ್ಸ್​​ಗೆ ಸ್ಟೈಲಿಶ್ ಸ್ಟಾರ್ ಫಿದಾ
ಅಲ್ಲು ಅರ್ಜುನ್-ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Apr 22, 2022 | 2:16 PM

‘ಕೆಜಿಎಫ್ 2’ ಸಿನಿಮಾ (KGF Chapter 2) ಬಗ್ಗೆ ಇಡೀ ವಿಶ್ವ ಮಾತನಾಡುತ್ತಿದೆ. ಭಾರತ ಮಾತ್ರವಲ್ಲದೆ, ವಿದೇಶದಲ್ಲೂ ಈ ಸಿನಿಮಾ ಹವಾ ಸೃಷ್ಟಿ ಮಾಡಿದೆ. ಚಿತ್ರದ ಕಲೆಕ್ಷನ್ ಸದ್ಯದಮಟ್ಟಿಗಂತೂ ತಗ್ಗುವ ಸೂಚನೆ ಸಿಗುತ್ತಿಲ್ಲ. ಆ ಮಟ್ಟಿಗೆ ಜನರು ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ. ‘ಕೆಜಿಎಫ್ 2’ ಚಿತ್ರವನ್ನು ನೋಡಿದ ಪರಭಾಷೆಯ ಸ್ಟಾರ್​​ಗಳು ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈಗ ನಟ ಅಲ್ಲು ಅರ್ಜುನ್ ಅವರು (Allu Arjun) ‘ಕೆಜಿಎಫ್ 2’ಗೆ ಭೇಷ್ ಎಂದಿದ್ದಾರೆ. ಯಶ್ (Yash) ಪರ್ಫಾರ್ಮೆನ್ಸ್ ನೋಡಿ ಫಿದಾ ಆಗಿದ್ದಾರೆ.

ಅಲ್ಲು ಅರ್ಜುನ್ ಅವರು ಮೊದಲಿನಿಂದಲೂ ಒಂದು ಪದ್ದತಿಯನ್ನು ರೂಢಿಸಿಕೊಂಡು ಬಂದಿದ್ದಾರೆ. ಒಂದೊಳ್ಳೆಯ ಸಿನಿಮಾ ನೋಡಿದರೆ ಅವರು ಆ ಬಗ್ಗೆ ಮೆಚ್ಚುಗೆ ಸೂಚಿಸುತ್ತಾರೆ. ಚಿತ್ರತಂಡಕ್ಕೆ ಬೆಂಬಲ ನೀಡುತ್ತಾರೆ. ಈ ಬಾರಿ ಅವರು ‘ಕೆಜಿಎಫ್ 2’ ಸಿನಿಮಾ ವೀಕ್ಷಿಸಿದ್ದಾರೆ. ಈ ಸಿನಿಮಾಗೆ ಅವರು ಭೇಷ್ ಎಂದಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಅಲ್ಲು ಅರ್ಜುನ್ ಅವರು ಬರೆದುಕೊಂಡಿದ್ದಾರೆ.

‘ಕೆಜಿಎಫ್ 2’ ತಂಡಕ್ಕೆ ಶುಭಾಶಯ. ಯಶ್ ಅವರ ಪರ್ಫಾರ್ಮೆನ್ಸ್​ ಅದ್ಭುತವಾಗಿದೆ. ಸಂಜಯ್ ದತ್,​ ರವೀನಾ ಟಂಡನ್​, ಶ್ರೀನಿಧಿ ಶೆಟ್ಟಿ ಹಾಗೂ ಎಲ್ಲಾ ಕಲಾವಿದರ ನಟನೆ ಉತ್ತಮವಾಗಿದೆ. ರವಿ ಬಸ್ರೂರು ಅವರ ಹಿನ್ನೆಲೆ ಸಂಗೀತ, ಭುವನ್ ಗೌಡ ಅವರ ಛಾಯಾಗ್ರಹಣ ಔಟ್​ಸ್ಟ್ಯಾಂಡಿಂಗ್. ಎಲ್ಲಾ ತಂತ್ರಜ್ಞರಿಗೆ ನನ್ನ ಗೌರವ’ ಎಂದು ಬರೆದುಕೊಂಡಿದ್ದಾರೆ ಅಲ್ಲು ಅರ್ಜುನ್.

ಪ್ರಶಾಂತ್ ನೀಲ್ ಅವರ ನಿರ್ದೇಶನ ‘ಕೆಜಿಎಫ್ 2’ನ ಹೈಲೈಟ್. ಈ ಬಗ್ಗೆಯೂ ಬರೆದುಕೊಂಡಿದ್ದಾರೆ ಅಲ್ಲು ಅರ್ಜುನ್. ‘ಪ್ರಶಾಂತ್ ನೀಲ್ ಅವರದ್ದು ಅದ್ಭುತ ಪ್ರದರ್ಶನ. ಅವರ ಆಲೋಚನೆಗೆ ನನ್ನದೊಂದು ಗೌರವ. ಭಾರತದ ಚಿತ್ರರಂಗವನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ದಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು’ ಎಂದಿದ್ದಾರೆ ಅಲ್ಲು ಅರ್ಜುನ್. ಈ ಟ್ವೀಟ್​ಗೆ ಸಾಕಷ್ಟು ಲೈಕ್ಸ್​ ಬರುತ್ತಿವೆ.

ಇದನ್ನೂ ಓದಿ: ‘ಕೆಜಿಎಫ್​: ಚಾಪ್ಟರ್​ 2’ ಬಗ್ಗೆ ಉಪೇಂದ್ರ ಮೆಚ್ಚುಗೆ; ಇನ್ನುಳಿದವರ ಮೌನಕ್ಕೆ ಯಶ್​ ಫ್ಯಾನ್ಸ್​ ತಕರಾರು​

ಒಂದೇ ವಾರಕ್ಕೆ 700 ಕೋಟಿ ರೂಪಾಯಿ ಕಲೆಕ್ಷನ್; ‘RRR​’ ಕಲೆಕ್ಷನ್​ ಹಿಂದಿಕ್ಕಲಿದೆ ‘ಕೆಜಿಎಫ್ 2’?

Published On - 1:58 pm, Fri, 22 April 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ