Kantara: ‘ಕಾಂತಾರ’ ವೇಷ ಧರಿಸಿ ಮೊದಲ ಬಹುಮಾನ ಪಡೆದ ತಹಶೀಲ್ದಾರ್; ಇಲ್ಲಿದೆ ವೈರಲ್ ವಿಡಿಯೋ
Kantara Movie Dance: ‘ಕಾಂತಾರ’ ಚಿತ್ರದ ಹಾಡಿಗೆ ವೇದಿಕೆಯಲ್ಲಿ ತಹಶೀಲ್ದಾರ್ ಪ್ರಸಾದ್ ರಾವ್ ಪರ್ಫಾರ್ಮ್ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳ ನಡುವೆ ನಡೆದ ಈ ಸ್ಪರ್ಧೆಯಲ್ಲಿ ಅವರಿಗೆ ಪ್ರಥಮ ಬಹುಮಾನ ನೀಡಲಾಗಿದೆ.
ಆಂಧ್ರ ಪ್ರದೇಶದ ಸರ್ಕಾರಿ ಅಧಿಕಾರಿಯೊಬ್ಬರು ‘ಕಾಂತಾರ’ (Kantara Movie) ಸಿನಿಮಾದ ರೀತಿ ವೇಷ ಧರಿಸಿ ಗಮನ ಸೆಳೆದಿದ್ದು ಕೆಲವೇ ದಿನಗಳ ಹಿಂದೆ ಸುದ್ದಿ ಆಗಿತ್ತು. ವಿಜಯನಗರಂ ಜಿಲ್ಲೆಯ ತಹಶೀಲ್ದಾರ್ (Tahsildar) ಪ್ರಸಾದ್ ರಾವ್ ಅವರು ‘ಕಾಂತಾರ’ ಸಿನಿಮಾದ ಗೆಟಪ್ನಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಈಗ ವೈರಲ್ ಆಗಿದೆ. ಅಚ್ಚರಿ ಏನೆಂದರೆ, ಈ ರೀತಿ ವೇಷ ಧರಿಸಿದ್ದಕ್ಕಾಗಿ ಅವರಿಗೆ ಮೊದಲ ಬಹುಮಾನ ಸಿಕ್ಕಿದೆ. ವೇದಿಕೆಯ ಮೇಲೆ ಕಾಂತಾರ ಚಿತ್ರದ ಹಾಡಿಗೆ ಅವರು ನೃತ್ಯ ಮಾಡಿದ್ದಾರೆ. ಭೂತಕೋಲದ (Buta Kola) ರೀತಿಯಲ್ಲಿ ಗೆಟಪ್ ಹಾಕಿಕೊಂಡು ಎಲ್ಲರನ್ನೂ ರಂಜಿಸಿದ್ದಾರೆ. ಮೊದಲ ಬಹುಮಾನ ಪಡೆದ ಅವರಿಗೆ ನೆಟ್ಟಿಗರು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಗುಂಟೂರಿನ ನಾಗಾರ್ಜುನ ಯೂನಿವರ್ಸಿಟಿಯಲ್ಲಿ ಆಂಧ್ರ ಪ್ರದೇಶ ತೆರಿಗೆ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದೆ. ಇದರಲ್ಲಿ ಹಲವು ಅಧಿಕಾರಿಗಳು ಭಾಗಿ ಆಗಿದ್ದಾರೆ. ತಹಶೀಲ್ದಾರ್ ಪ್ರಸಾದ್ ರಾವ್ ಅವರು ‘ಕಾಂತಾರ’ ಸಿನಿಮಾದ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಪ್ರಸಾದ್ ರಾವ್ ಅವರಿಗೆ ಕಲೆಯಲ್ಲಿ ಹೆಚ್ಚು ಆಸಕ್ತಿ ಇದೆ. ಈ ಕಾರ್ಯಕ್ರಮಕ್ಕೆ ‘ಕಾಂತಾರ’ ಚಿತ್ರದ ರೀತಿ ವೇಷ ಹಾಕಿಕೊಂಡು ಬಂದಿದ್ದನ್ನು ನೋಡಿ ಜಿಲ್ಲಾಧಿಕಾರಿಗೂ ಅಚ್ಚರಿ ಆಯಿತು. ಅವರು ಕೂಡ ತಹಶೀಲ್ದಾರ್ ಜೊತೆ ಸೆಲ್ಫಿ ತೆಗೆದುಕೊಂಡರು ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ. ವೇದಿಕೆ ಮೇಲೆ ಪರ್ಫಾರ್ಮ್ ಮಾಡಿದ ಪ್ರಸಾದ್ ರಾವ್ ಅವರಿಗೆ ಪ್ರಥಮ ಬಹುಮಾನ ನೀಡಲಾಗಿದೆ.
Loved #Kantara? A tahsildar in #AndhraPradesh recreated the epic dance by @shetty_rishab at a culture fest for revenue dept. Prasad Rao is a tahsildar from Kothavalasa & an avid movie buff. No surprises that he won the 1st prize. #kantaramovie 1/2 pic.twitter.com/E139HHBMsR
— Krishnamurthy (@krishna0302) November 18, 2022
ವಿಶ್ವಾದ್ಯಂತ ‘ಕಾಂತಾರ’ ಸಿನಿಮಾ ಅಬ್ಬರಿಸಿದೆ. ಇದು ತುಳುನಾಡಿನ ಕಥೆ ಆಗಿದ್ದರೂ ಕೂಡ ಎಲ್ಲ ರಾಜ್ಯಗಳ ಜನರಿಗೆ ಇಷ್ಟ ಆಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಗೂ ಡಬ್ ಆಗಿ ಬಿಡುಗಡೆಗೊಂಡು ಭರ್ಜರಿ ಕಲೆಕ್ಷನ್ ಮಾಡಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ಈ ಚಿತ್ರಕ್ಕೆ ಪ್ರೇಕ್ಷಕರ ಮನಸೋತಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶನದ, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ‘ಕಾಂತಾರ’ ಮೂಡಿಬಂದಿದೆ. ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್, ಮಾನಸಿ ಸುಧೀರ್, ಪ್ರಮೋದ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಎಲ್ಲರ ಪಾತ್ರಗಳೂ ಈ ಸಿನಿಮಾದಲ್ಲಿ ಹೈಲೈಟ್ ಆಗಿವೆ. ಅದರಲ್ಲೂ ರಿಷಬ್ ಶೆಟ್ಟಿ ಅವರು ಕ್ಲೈಮ್ಯಾಕ್ಸ್ನಲ್ಲಿ ಅಬ್ಬರಿಸುವ ಮೂಲಕ ಅಭಿಮಾನಿಗಳನ್ನು ಸೆಳೆದುಕೊಂಡಿದ್ದಾರೆ.
ಚಿತ್ರಮಂದಿರದಲ್ಲಿ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಶೀಘ್ರದಲ್ಲೇ ಈ ಚಿತ್ರ ಒಟಿಟಿಗೆ ಕಾಲಿಡಲಿದೆ. ಮನೆಯಲ್ಲಿ ಕುಳಿತು ಚಿತ್ರವನ್ನು ಎಂಜಾಯ್ ಮಾಡಲು ಸಿನಿಪ್ರಿಯರು ಕಾದಿದ್ದಾರೆ. ಒಟಿಟಿ ಪ್ರಸಾರ ದಿನಾಂಕದ ಬಗ್ಗೆ ಸದ್ಯದಲ್ಲೇ ಅನೌನ್ಸ್ ಆಗಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:08 pm, Tue, 22 November 22