AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಓದಿಸುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದ ತಮಿಳು ನಟ ವಿಶಾಲ್; ಶಹಬ್ಬಾಸ್​ ಎಂದರು ಕನ್ನಡಿಗರು!

Actor Vishal: ಪುನೀತ್ ರಾಜ್​ಕುಮಾರ್​ 1800 ಮಕ್ಕಳನ್ನು ಓದಿಸುತ್ತಿದ್ದರು. ಇದೀಗ ಪುನೀತ್​ ನಿರ್ವಹಿಸುತ್ತಿದ್ದ ಜವಾಬ್ದಾರಿ ಹೊರುವುದಾಗಿ ವಿಶಾಲ್ ಹೇಳಿಕೆ ನೀಡಿದ್ದಾರೆ. ಇನ್ಮುಂದೆ ಮಕ್ಕಳ ಶಿಕ್ಷಣದ ಜವಾಬ್ದಾರಿ ನನ್ನದು ಎಂದು ಅವರು ಘೋಷಣೆ ಮಾಡಿದ್ದಾರೆ.

ಪುನೀತ್ ಓದಿಸುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದ ತಮಿಳು ನಟ ವಿಶಾಲ್; ಶಹಬ್ಬಾಸ್​ ಎಂದರು ಕನ್ನಡಿಗರು!
ಪುನೀತ್ ರಾಜ್​ಕುಮಾರ್, ನಟ ವಿಶಾಲ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 01, 2021 | 1:03 AM

ಬೆಂಗಳೂರು: ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್​ ಇಂದು (ಅಕ್ಟೋಬರ್ 31) ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ತಿಳಿಸಿದ್ದಾರೆ. ಹೃದಯಾಘಾತದಿಂದ ಪುನೀತ್ ರಾಜ್​ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ತಾನು ಹೊರುವುದಾಗಿ ತಮಿಳು ನಟ ಹೇಳಿದ್ದಾರೆ.

ಪುನೀತ್ ರಾಜ್​ಕುಮಾರ್​ 1800 ಮಕ್ಕಳನ್ನು ಓದಿಸುತ್ತಿದ್ದರು. ಇದೀಗ ಪುನೀತ್​ ನಿರ್ವಹಿಸುತ್ತಿದ್ದ ಜವಾಬ್ದಾರಿ ಹೊರುವುದಾಗಿ ವಿಶಾಲ್ ಹೇಳಿಕೆ ನೀಡಿದ್ದಾರೆ. ಇನ್ಮುಂದೆ ಮಕ್ಕಳ ಶಿಕ್ಷಣದ ಜವಾಬ್ದಾರಿ ನನ್ನದು ಎಂದು ಅವರು ಘೋಷಣೆ ಮಾಡಿದ್ದಾರೆ. ಪುನೀತ್ ರಾಜ್​ಕುಮಾರ್ ಸದ್ದಿಲ್ಲದೆ ಸಾಕಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಕೂಡ ತೊಡಗಿಕೊಂಡಿದ್ದರು ಎಂಬ ವಿಚಾರ ಅವರ ನಿಧನಾನಂತರ ಹೆಚ್ಚು ಹೆಚ್ಚು ಬಯಲಾಗುತ್ತಿದೆ. ಈ ಬಗ್ಗೆ ಪುನೀತ್​ ಬಗ್ಗೆ ಅಭಿಮಾನದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಹೃದಯತುಂಬಿ ಶಹಬ್ಬಾಸ್ Vishal​ ಎಂದರು ಕನ್ನಡಿಗರು: ಈ ಮಧ್ಯೆ, ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಾ ಮೂಲತಃ ಬೆಂಗಳೂರಿನವರಾದ, ತಮಿಳು ನಟ ವಿಶಾಲ್ ಅವರು ಅಪ್ಪು ಮೇಲಿನ ಅಭಿಮಾನದೊಂದಿಗೆ ತಾವು ತೆಗೆದುಕೊಂಡಿರುವ ನಿರ್ಣಯವನ್ನು ಅತ್ಯಂತ ವಿನಮ್ರವಾಗಿ ಪ್ರಕಟಿಸಿದ್ದಾರೆ. ವಿಶಾಲ್​ ಅವರ ಈ ಸಹೃದಯೀ ನಿರ್ಧಾರದ ಬಗ್ಗೆ ಕನ್ನಡಿಗರು ಅಭಿಮಾನದ ಹೊಳೆ ಹರಿಸಿದ್ದಾರೆ. ಹೃದಯತುಂಬಿ ಬಂದು ಶಹಬ್ಬಾಸ್ ವಿಶಾಲ್​​ ಎಂದು ಕನ್ನಡಿಗರು ಆತನನ್ನು ಹರಿಸಿದ್ದಾರೆ. ಅಲ್ಲೇ ಡ್ರಾ ಅಲ್ಲೇ ಬಹುಮಾನ ಎಂಬಂತೆ ವಿಶಾಲ ಹೃದಯದ ನಟ ವಿಶಾಲ್​​ರನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೊಂಡಾಡಿದ್ದಾರೆ. ವಿಶಾಲ್ ನಿಮ್ಮದು ಅದ್ಭುತ ಸ್ಪಂದನೆ ಎಂದಿರುವ ಕನ್ನಡಿಗರು, ಇದೇ ವೇಳೆ​ ಬೇರೆ ಯಾವೊಬ್ಬ ನಟ, ರಾಜಕಾರಣಿಗೂ ಇಂತಹ ಸದಾಲೋಚನೆ ಬರಲಿಲ್ಲವಲ್ಲಾ ಎಂದೂ ವ್ಯಥೆಪಟ್ಟಿದ್ದಾರೆ. ಈ ಬೆಳವಣಿಗೆಯ ಸಮ್ಮುಖದಲ್ಲಿ, ಕನ್ನಡ ಪ್ರೇಮಿ ವಿಶಾಲ್ ಬಗ್ಗೆ ಕನ್ನಡಿಗರು ಇನ್ನಷ್ಟು ಅಭಿಮಾನ ಹೆಚ್ಚಿಸಿಕೊಂಡಿದ್ದಾರೆ.

ಪುನೀತ್ ರಾಜ್​ಕುಮಾರ್ ನಿಧನಕ್ಕೆ ಕಣ್ಣೀರಿಟ್ಟ ರೈತ ಮಹಿಳೆ ನಟ ಪುನೀತ್ ರಾಜ್​ಕುಮಾರ್ ನಿಧನಕ್ಕೆ ಶ್ರೀರಂಗಪಟ್ಟಣ ತಾಲ್ಲೂಕು ಸಬ್ಬನಕುಪ್ಪೆ ಗ್ರಾಮದ ರೈತ ಮಹಿಳೆ ಭಾರತಿ ಕಣ್ಣೀರಿಟ್ಟರು. ಭಾರತಿ ಕುಟುಂಬಕ್ಕೆ ಪುನೀತ್ ಆರ್ಥಿಕ ನೆರವು ನೀಡಿದ್ದರು. ಭಾರತಿ ಅವರ ಪತಿ, ಕುಮಾರ್ 2015ರ ಜು.22ರಂದು ಆತ್ಮಹತ್ಯೆಗೆ ಶರಣಾಗಿದ್ದರು.

2015ರಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ರೈತರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ಶೂಟಿಂಗ್ ನಂತರ ಪುನೀತ್ ರಾಜ್​ಕುಮಾರ್ ಜನರ ಕಷ್ಟಸುಖ ಕೇಳುತ್ತಿದ್ದರು. ‘ದೊಡ್ಮನೆ ಹುಡುಗ’ ಶೂಟಿಂಗ್ ವೇಳೆ ಆತ್ಮಹತ್ಯೆಗೆ ಶರಣಾಗಿದ್ದ ರೈತರ ಕುಟುಂಬಗಳಿಗೆ ಪುನೀತ್​ ಆರ್ಥಿಕ ನೆರವು ನೀಡಿದ್ದರು. ಈ ವೇಳೆ ಭಾರತಿ ಅವರಿಗೂ ಪುನೀತ್ ಅವರಿಂದ ನೆರವು ಸಿಕ್ಕಿತ್ತು.

‘ಅಪ್ಪು ಇದ್ದಿದ್ರೆ ನಮ್ಮಂತಹ ಬಡ ಕುಟುಂಬಗಳಿಗೆ ನೆರವು ಸಿಗ್ತಿತ್ತು. ದೇವರು ಇಷ್ಟು ಬೇಗ ಅವರನ್ನು ಕರೆಸಿಕೊಂಡ’ ಎಂದು ಆತ್ಮಹತ್ಯೆಗೆ ಶರಣಾಗಿದ್ದ ರೈತ ಕುಮಾರ್ ಅವರ​ ಪತ್ನಿ ಭಾರತಿ ಕಣ್ಣೀರು ಹಾಕಿದರು.

ಆರ್ಥಿಕ ಸಮಸ್ಯೆ ಇದ್ದವರಿಗೆ ಚಿಕಿತ್ಸೆಗೆ ಸಹಾಯ ನಟನೆಯ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಪುನೀತ್ ರಾಜ್‌ಕುಮಾರ್ ಅವರು ಚನ್ನಗಿರಿ ತಾಲ್ಲೂಕಿನ ಕಣಸಾಲು ಬಡಾವಣೆಗೆಯ ಬಾಲಕಿ ಪ್ರೀತಿ ಅವರಿಗೆ ಸಹಾಯ ಮಾಡಿದ್ದರು ಎಂಬ ಸಂಗತಿ ಗೊತ್ತಾಗಿದೆ. ಕುಮಾರ್ ಹಾಗೂ ಮಂಜುಳಾ ದಂಪತಿಯ ಪುತ್ರಿಯಾದ ಪ್ರೀತಿ 2017ರಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.

ಆಗ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಈ ದಂಪತಿ ಮಾಧ್ಯಮಗಳ ಮೂಲಕ ಸಹಾಯ ಯಾಚಿಸಿದ್ದರು. ಆ ವೇಳೆ ಪುನೀತ್ ಅವರು ನೆರವು ನೀಡಿದ್ದರು. ‘ಆ ವೇಳೆ ಭೇಟಿ ನೀಡಿದ ಪುನೀತ್ ರಾಜ್‌ಕುಮಾರ್ ಆ ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೇ, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ಪೂರ್ತಿ ಬಿಲ್ 12.50 ಲಕ್ಷವನ್ನು ಭರಿಸಿದ್ದರು’ ಪ್ರೀತಿ ಅವರ ಮಾವ ಹನುಮಂತಪ್ಪ ಗೆ ತಿಳಿಸಿದರು.

ಇದನ್ನೂ ಓದಿ: ಲೋಹಿತಾಶ್ವ ಎಂದರೆ ಅಲ್ಪಾಯುಶಿ; ಪುನೀತ್​ ಹೆಸರು ಬದಲಾವಣೆಗೆ ಕಾರಣವಾಗಿತ್ತು ಈ ವಿಚಾರ

ಇದನ್ನೂ ಓದಿ: ಬರಿದಾಯ್ತು ‘ರಾಜಕುಮಾರ’ ನಿವಾಸ; ಪುನೀತ್​ ಮನೆಯ ಫೋಟೋ ವೈರಲ್​

Published On - 10:49 pm, Sun, 31 October 21

ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ