ಎಸ್​ಪಿ ಬಾಲಸುಬ್ರಹ್ಮಣ್ಯಂ ನಾಲ್ಕನೇ ಪುಣ್ಯತಿಥಿ; ಮುಖ್ಯ ರಸ್ತೆಯೊಂದಕ್ಕೆ ಗಾಯಕನ ಹೆಸರಿಟ್ಟ ಸಿಎಂ

ಎಸ್​​ಪಿ ಬಾಲಸುಬ್ರಹ್ಮಣ್ಯಂ ಅವರು 40 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ. 16 ಭಾಷೆಗಳಲ್ಲಿ ಹಾಡಿಗೆ ಅವರು ಧ್ವನಿ ಆಗಿದ್ದಾರೆ. ಅವರ ಧ್ವನಿಗೆ ಮಾರು ಹೋಗದವರೇ ಇಲ್ಲ. ಒಂದೇ ದಿನ ಹಲವು ಹಾಡುಗಳನ್ನು ರೆಕಾರ್ಡ್​ ಮಾಡಿ ದಾಖಲೆ ಬರೆದಿದ್ದಾರೆ. ಈಗ ಅವರ ಹೆಸರನ್ನು ರಸ್ತೆ ಒಂದಕ್ಕೆ ಇಡಲಾಗಿದೆ.

ಎಸ್​ಪಿ ಬಾಲಸುಬ್ರಹ್ಮಣ್ಯಂ ನಾಲ್ಕನೇ ಪುಣ್ಯತಿಥಿ; ಮುಖ್ಯ ರಸ್ತೆಯೊಂದಕ್ಕೆ ಗಾಯಕನ ಹೆಸರಿಟ್ಟ ಸಿಎಂ
ಎಸ್​ಪಿಬಿ
Follow us
ರಾಜೇಶ್ ದುಗ್ಗುಮನೆ
|

Updated on: Sep 26, 2024 | 7:30 AM

ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರು ಕನ್ನಡ, ಹಿಂದಿ ಸೇರಿದಂತೆ ಅನೇಕ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಅವರು ಇಂದು ನಮ್ಮ ಜೊತೆಗೆ ಇಲ್ಲ. ಆದರೆ, ಅವರು ಹಾಡಿದ ಹಾಡುಗಳು ಎವರ್​ಗ್ರೀನ್ ಆಗಿವೆ. ಈಗ ಅವರಿಗೆ ವಿಶೇಷ ಗೌರವ ಸಲ್ಲಿಕೆ ಆಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಚೆನ್ನೈನ ರಸ್ತೆ ಒಂದಕ್ಕೆ ಎಸ್​ಪಿಬಿ ಅವರ ಹೆಸರನ್ನು ಇಟ್ಟಿದ್ದಾರೆ. ನಾಲ್ಕನೇ ಪುಣ್ಯತಿಥಿ ಸಂದರ್ಭದಲ್ಲಿ ಈ ಘೋಷಣೆ ಮಾಡಿದ್ದಾರೆ. ಐದು ದಶಕಗಳ ಕಾಲ ಎಸ್​ಪಿಬಿ ಅವರು ಚಿತ್ರರಂಗದಲ್ಲಿ ಇದ್ದರು. ಅವರು 40 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ. 16 ಭಾಷೆಗಳ ಹಾಡಿಗೆ ಅವರು ಧ್ವನಿ ಆಗಿದ್ದಾರೆ. ಅವರ ಧ್ವನಿಗೆ ಮಾರು ಹೋಗದವರೇ ಇಲ್ಲ. ಒಂದೇ ದಿನ ಹಲವು ಹಾಡುಗಳನ್ನು ರೆಕಾರ್ಡ್​ ಮಾಡಿ ದಾಖಲೆ ಬರೆದಿದ್ದಾರೆ. ಸೆಪ್ಟೆಂಬರ್ 25ರಂದು ಅವರು ಮೃತಪಟ್ಟು ನಾಲ್ಕು ವರ್ಷ ಕಳೆದಿದೆ. ಹೀಗಾಗಿ ಈ ಘೋಷಣೆ ಮಾಡಲಾಗಿದೆ.

‘ಹಲವು ಭಾಷೆಗಳಲ್ಲಿ ಎಸ್​ಪಿಬಿ ಅವರು 40 ಸಾವಿರ ಹಾಡುಗಳನ್ನು ಹಾಡಿದ್ದಾರೆ. ಅರ್ಧ ಶತಮಾನಗಳ ಕಾಲ ತಮಿಳು ಜನತೆಯನ್ನು ಅವರು ರಂಜಿಸಿದರು. ಹಾಡುವ ಮೂಲಕ, ಸಂಗೀತ ಸಂಯೋಜನೆ ಮಾಡುವ ಮೂಲಕ, ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಗಮನ ಸೆಳೆದರು. 2020ರ ಸೆಪ್ಟೆಂಬರ್ 25ರಂದು ಅವರು ನಮ್ಮನ್ನು ಅಗಲಿದರು. ಅವರು ಇಂದಿಗೂ ನಮ್ಮ ಹೃದಯದಲ್ಲಿ ಇದ್ದಾರೆ. ಹೀಗಾಗಿ, ಎಸ್​ಪಿಬಿ ವಾಸ ಇದ್ದ ನುಂಗಂಬಾಕ್ಕಂ ಕಾಮ್ದಾರ್ ನಗರದ ಮುಖ್ಯರಸ್ತೆಗೆ ಎಸ್​ಪಿ ಬಾಲಸುಬ್ರಹ್ಮಣ್ಯಂ ಸಲಾಯಿ (ರಸ್ತೆ) ಎಂದು ನಾಮಕರಣ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ‘ಕೀಡ ಕೋಲ’ ಚಿತ್ರತಂಡಕ್ಕೆ ನೋಟೀಸ್ ನೀಡಿದ ಎಸ್​ಪಿ ಬಾಲಸುಬ್ರಹ್ಮಣ್ಯಂ ಕುಟುಂಬ

‘ಬಾಲುವಿನ ಲಕ್ಷಾಂತರ ಅಭಿಮಾನಿಗಳಲ್ಲಿ ನಾನೂ ಒಬ್ಬ. ಅವರು ವಾಸವಿದ್ದ ನಗರದ ಮುಖ್ಯ ರಸ್ತೆಗೆ ಅವರದ್ದೇ ಹೆಸರು ಇಡುತ್ತಿರುವುದು ನಿಜಕ್ಕೂ ಖುಷಿಯ ವಿಚಾರ’ ಎಂದು ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಲಂಚ ಕೇಳಿದ ಅಧಿಕಾರಿಯನ್ನು ಟ್ರಾನ್ಸ್​ಫರ್ ಮಾಡೋದೇ ದೊಡ್ಡ ಶಿಕ್ಷೆ!
ಲಂಚ ಕೇಳಿದ ಅಧಿಕಾರಿಯನ್ನು ಟ್ರಾನ್ಸ್​ಫರ್ ಮಾಡೋದೇ ದೊಡ್ಡ ಶಿಕ್ಷೆ!
IND vs AUS: ಆಸ್ಟ್ರೇಲಿಯಾ ಪ್ರಧಾನಿಯನ್ನ ಭೇಟಿಯಾದ ಟೀಮ್ ಇಂಡಿಯಾ
IND vs AUS: ಆಸ್ಟ್ರೇಲಿಯಾ ಪ್ರಧಾನಿಯನ್ನ ಭೇಟಿಯಾದ ಟೀಮ್ ಇಂಡಿಯಾ
ಗುಂಪುಗಾರಿಕೆ 2 ತಿಂಗಳು ಮುಂದುವರಿಯಲಿದೆ, ಪತ್ರ ಚಳುವಳಿ ಅಗತ್ಯವಿಲ್ಲ: ಶಾಸಕ
ಗುಂಪುಗಾರಿಕೆ 2 ತಿಂಗಳು ಮುಂದುವರಿಯಲಿದೆ, ಪತ್ರ ಚಳುವಳಿ ಅಗತ್ಯವಿಲ್ಲ: ಶಾಸಕ
ಯತ್ನಾಳ್ ತಂಡದ ವಿರುದ್ದ 2 ಪತ್ರ ಬರೆದರೂ ವರಿಷ್ಠರಿಂದ ಕ್ರಮವಿಲ್ಲ: ಡಿವಿಎಸ್
ಯತ್ನಾಳ್ ತಂಡದ ವಿರುದ್ದ 2 ಪತ್ರ ಬರೆದರೂ ವರಿಷ್ಠರಿಂದ ಕ್ರಮವಿಲ್ಲ: ಡಿವಿಎಸ್
ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ದೇವೇಗೌಡ
ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ದೇವೇಗೌಡ
ತೆಂಗಿನಕಾಯಿ ವ್ಯಾಪಾರಿಯ ಮದುವೆ ಊಟದ ವ್ಯವಸ್ಥೆ ಕಂಡು ನೆಟ್ಟಿಗರು ಫಿದಾ
ತೆಂಗಿನಕಾಯಿ ವ್ಯಾಪಾರಿಯ ಮದುವೆ ಊಟದ ವ್ಯವಸ್ಥೆ ಕಂಡು ನೆಟ್ಟಿಗರು ಫಿದಾ