AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಿಷಾ ಕುಪ್ಪಂಡ ಜೊತೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್; ನಟಿಯ ನೇರ ಕ್ಲಾಸ್

Tanisha Kuppanda: ನಟಿ ತನಿಷಾ ಕುಪ್ಪಂಡ ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್‌ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮಹಿಳಾ ಕಲಾವಿದರನ್ನು ಗುರಿಯಾಗಿಸಿ ನಡೆಯುವ ಕಿರುಕುಳವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ನಡೆ ಕಿಡಿಗೇಡಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ. ನಟಿಯ ಬೆಂಬಲಕ್ಕೆ ಎಲ್ಲರೂ ನಿಂತಿದ್ದಾರೆ.

ತನಿಷಾ ಕುಪ್ಪಂಡ ಜೊತೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್; ನಟಿಯ ನೇರ ಕ್ಲಾಸ್
ತನಿಷಾ
ರಾಜೇಶ್ ದುಗ್ಗುಮನೆ
|

Updated on: May 23, 2026 | 1:23 PM

Share

‘ಕನ್ನಡ ಬಿಗ್ ಬಾಸ್ ಸೀಸನ್ 10’ರ ಖ್ಯಾತ ಸ್ಪರ್ಧಿ ಹಾಗೂ ನಟಿ ತನಿಷಾ ಕುಪ್ಪಂಡ ಅವರು (Tanisha Kuppanda ) ತಮ್ಮ ಜೊತೆ ಅಸಭ್ಯವಾಗಿ ನಡೆದುಕೊಂಡವರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿತ್ರರಂಗದ ನಟಿಯರನ್ನು ಟಾರ್ಗೆಟ್ ಮಾಡುತ್ತಿರುವ ಕಿಡಿಗೇಡಿಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ವಾರ್ನಿಂಗ್ ನೀಡಿರುವ ತನಿಷಾ, ಯಾರೂ ಕೂಡ ನನ್ನ ತಾಳ್ಮೆಯನ್ನು ಪರೀಕ್ಷಿಸಲು ಬರಬೇಡಿ ಎಂದು ಗುಡುಗಿದ್ದಾರೆ.

ಇತ್ತೀಚೆಗಷ್ಟೇ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ನಕಲಿ ಬಿಕಿನಿ ವಿಡಿಯೋಗಳನ್ನು ಸೃಷ್ಟಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿತ್ತು. ಇದಕ್ಕೆ ರುಕ್ಮಿಣಿ ಎಚ್ಚರಿಕೆ ನೀಡಿದ್ದರು. ಈ ಘಟನೆಯ ಬೆನ್ನಲ್ಲೇ ತನಿಷಾ ಕುಪ್ಪಂಡ ಮಾಡಿರುವ ಇನ್‌ಸ್ಟಾಗ್ರಾಮ್ ಪೋಸ್ಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇಂಟರ್ನೆಟ್ ಲೋಕದಲ್ಲಿ ಸೆಲೆಬ್ರಿಟಿಗಳ, ಅದರಲ್ಲೂ ಮುಖ್ಯವಾಗಿ ಮಹಿಳಾ ನಟಿಯರ ತೇಜೋವಧೆ ಮಾಡುತ್ತಿರುವ ವ್ಯಕ್ತಿ ವಿರುದ್ಧ ತನಿಷಾ ತೀವ್ರವಾಗಿ ಗರಂ ಆಗಿದ್ದಾರೆ.

ತಮ್ಮ ಸ್ಟೇಟಸ್‌ನಲ್ಲಿ ಬರೆದುಕೊಂಡಿರುವ ತನಿಷಾ, ‘ಕೆಲವು ಕೆಟ್ಟ ಫೋಟೋಗ್ರಾಫರ್​​ಗಳು ಬಂದು ಕಲಾವಿದರ ಬಳಿ ನಾನ್​ಸೆನ್ಸ್​ ಮಾತನಾಡುತ್ತಾರೆ. ಫೋಟೋಶೂಟ್ ಮಾಡುವ ಯೋಗ್ಯತೆ ಇಲ್ಲ ಅಂದರೆ ಕೇಳಬಾರದು. ನಿಮ್ಮಂತ 3ರ್​​ಡ್​ ಕ್ಲಾಸ್ ಫೋಟೋಗ್ರಾಫರ್​​ಗಳಿಂದ ಬೇರೆ ಛಾಯಾಗ್ರಹಕರಿಗೆ ಅವಮಾನ’ ಎಂದು ತನಿಷಾ ಹೇಳಿದ್ದಾರೆ. ಅನಿಲ್ ಕುಮಾರ್ ಎಂಬ ಛಾಯಾಗ್ರಾಹಕ ಫೋಟೋಗ್ರಾಫಿ ಹೆಸರಲ್ಲಿ ಡೇಟ್​​ಗೆ ಕರೆದಿದ್ದಾರೆ.

ಇದನ್ನೂ ಓದಿ:  ‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಚಿತ್ರ ಹಾಡಿ ಹೊಗಳಿದ ತನಿಷಾ

ಬಿಗ್ ಬಾಸ್ ಮನೆಯಲ್ಲೂ ತಮ್ಮ ನೇರ ನಡೆ ಹಾಗೂ ಬೋಲ್ಡ್ ಸ್ವಭಾವದಿಂದಲೇ ಗುರುತಿಸಿಕೊಂಡಿದ್ದ ತನಿಷಾ, ಈಗ ಸೋಶಿಯಲ್ ಮೀಡಿಯಾ ಕಿರುಕುಳದ ವಿರುದ್ಧವೂ ಧ್ವನಿ ಎತ್ತಿರುವುದಕ್ಕೆ ಅಭಿಮಾನಿಗಳಿಂದ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಈ ಜಾಲಕ್ಕೆ ಬ್ರೇಕ್ ಬೀಳಲೇಬೇಕು ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಕಿಡಿಗೇಡಿಗಳಿಗೆ ತನಿಷಾ ನೀಡಿರುವ ಈ ಖಡಕ್ ಸಂದೇಶ ಸದ್ಯ ಗಾಂಧಿನಗರದ ವಲಯದಲ್ಲಿ ಭಾರಿ ವೈರಲ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್