AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾರಾ ನಟನೆಯ ‘ಸೈನೈಡ್’ ಸಿನಿಮಾ ಮರು ಬಿಡುಗಡೆ; 20 ವರ್ಷಗಳ ಬಳಿಕ ಮತ್ತೆ ತೆರೆಗೆ

‘ಸೈನೈಡ್’ ಸಿನಿಮಾ 2006ರಲ್ಲಿ ಬಿಡುಗಡೆ ಆಗಿತ್ತು. ಈಗ ಆ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಚಿತ್ರಕ್ಕೆ ಪ್ರೀಕ್ವೆಲ್ ಸಹ ಬರಲಿದೆ ಎಂದು ನಿರ್ದೇಶಕ ಎಎಂಆರ್ ರಮೇಶ್ ಅವರು ಹೇಳಿದ್ದಾರೆ. ಮರುಬಿಡುಗಡೆ ಕುರಿತು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಭಾಗಿಯಾಗಿದ್ದರು.

ತಾರಾ ನಟನೆಯ ‘ಸೈನೈಡ್’ ಸಿನಿಮಾ ಮರು ಬಿಡುಗಡೆ; 20 ವರ್ಷಗಳ ಬಳಿಕ ಮತ್ತೆ ತೆರೆಗೆ
Cyanide Movie, Tara Anuradha
ಮದನ್​ ಕುಮಾರ್​
|

Updated on: May 07, 2025 | 10:47 PM

Share

ಹಲವು ಸಿನಿಮಾಗಳು ಮರು ಬಿಡುಗಡೆಯಾಗಿ ಗಮನ ಸೆಳೆಯುತ್ತಿವೆ. ಅಂತಹ ಸಿನಿಮಾಗಳ ಸಾಲಿಗೆ ‘ಸೈನೈಡ್’ (Cyanide) ಕೂಡ ಸೇರ್ಪಡೆ ಆಗಲಿದೆ. ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಹತ್ಯೆಯ ನಂತರ ನಡೆದ ಘಟನೆಗಳನ್ನು ಆಧರಿಸಿ ‘ಸೈನೈಡ್’ ಸಿನಿಮಾ (Cyanide Kannada Movie) ಮೂಡಿಬಂದಿತ್ತು. ಕೆಂಚಪ್ಪ ಗೌಡ ಮತ್ತು ಎಸ್. ಇಂದುಮತಿ ಅವರು ‘ಅಕ್ಷಯ್ ಕ್ರಿಯೇಷನ್ಸ್’ ಮೂಲಕ ನಿರ್ಮಾಣ ಮಾಡಿದ್ದ ಈ ಸಿನಿಮಾವನ್ನು ಎಎಂಆರ್ ರಮೇಶ್ ಅವರು ನಿರ್ದೇಶಿಸಿದ್ದರು. ತಾರಾ (Tara Anuradha), ರವಿಕಾಳೆ, ರಂಗಾಯಣ ರಘು, ಮಾಳವಿಕಾ, ಉಷಾ ಭಂಡಾರಿ, ಅವಿನಾಶ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮೇ 23ಕ್ಕೆ ‘ಸೈನೈಡ್’ ಸಿನಿಮಾ ಮರು ಬಿಡುಗಡೆ ಆಗಲಿದೆ.

‘ಸೈನೈಡ್’ ಸಿನಿಮಾ 2006ರಲ್ಲಿ ಬಿಡುಗಡೆ ಆಗಿತ್ತು. ಈಗ 20 ವರ್ಷಗಳ ನಂತರ ಕೂಡ ಈ ಸಿನಿಮಾದ ವಿಷಯ ಪ್ರಸ್ತುತವಾಗಿದೆ. ಹಾಗಾಗಿ ಮರು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಈ ಕುರಿತು ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಲಾಯಿತು. ಶಾಸಕ ಹ್ಯಾರಿಸ್ ಅವರು ಮುಖ್ಯ ಅತಿಥಿಗಳಾಗಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಈ ಸಿನಿಮಾದಲ್ಲಿನ ನಟನೆಗೆ ನಟಿ ತಾರಾ ಅವರಿಗೆ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಅವರು ಕೂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನಿರ್ದೇಶಕ ಎಎಂಆರ್ ರಮೇಶ್ ಮಾತನಾಡಿ, ‘ಇದು ಸೂಕ್ಷ್ಮವಾದ ವಿಷಯ ಹೊಂದಿರುವ ಸಿನಿಮಾ ಆದ್ದರಿಂದ 2006ರಲ್ಲಿ ಬಿಡುಗಡೆ ಮಾಡುವಾಗ ಆತಂಕ ಇತ್ತು. ಆದರೆ ರಿಲೀಸ್ ಬಳಿಕ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ತಾರಾ ಅವರ ಪಾತ್ರಕ್ಕೆ ರಾಜ್ಯ ಪ್ರಶಸ್ತಿ ಬಂತು. ಈಗ ಮತ್ತೆ ಹೊಸ ತಂತ್ರಜ್ಞಾನ ಅಳವಡಿಸಿ‌, 10 ನಿಮಿಷ ಅವಧಿಯನ್ನು ಹೆಚ್ಚಿಸಿ ಮರು ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಹೇಳಿದರು.

ಇದನ್ನೂ ಓದಿ
Image
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕಲಾವಿದ ನಿಧನ; ಚಿತ್ರತಂಡಕ್ಕೆ ಸಂಕಷ್ಟ
Image
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸೇರಿಕೊಂಡ ನಟಿ ರಾಗಿಣಿ; ಚಿತ್ರೀಕರಣ ಶುರು
Image
ಸೋನು ನಿಗಂ ಹಾಡು ತೆಗೆದು ಹಾಕಿದ ಸಿನಿಮಾ ತಂಡ
Image
ರಮೇಶ್ ಅರವಿಂದ್-ದಿಗಂತ್ ಈಗ ಅಣ್ಣ-ತಮ್ಮ; ‘ದೈಜಿ’ ಚಿತ್ರದಲ್ಲಿ ಒಟ್ಟಾಗಿ ನಟನೆ

‘ಸೈನೈಡ್’ ಸಿನಿಮಾಗೆ ಪ್ರೀಕ್ವೆಲ್ ಕೂಡ ಬರಲಿದೆ. ಅದರ ಕಾರ್ಯ ಪ್ರಗತಿಯಲ್ಲಿದೆ ಎಂದು ಎಎಂಆರ್ ರಮೇಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಟೆರರಿಸ್ಟ್ ಪಾತ್ರ ಮಾಡಿದ್ದನ್ನು ಉಷಾ ಭಂಡಾರಿ ನೆನಪಿಕೊಂಡರು. ನಿರ್ಮಾಪಕರಾದ ಕೆಂಚಪ್ಪ ಗೌಡ ಮತ್ತು ಎಸ್. ಇಂದುಮತಿ ಕೂಡ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ

ನಟಿ ತಾರಾ ಕೂಡ ಆ ದಿನಗಳನ್ನು ನೆನಪಿಸಿಕೊಂಡರು. ‘ನಾನು ಈ ಸಿನಿಮಾದಲ್ಲಿ ಮೃದುಲಾ ಎಂಬ ಮುಗ್ಧ ಹೆಣ್ಣು ಮಗಳ ಪಾತ್ರ ಮಾಡಿದ್ದೆ. 20 ವರ್ಷಗಳ ಹಿಂದೆ ಶೂಟಿಂಗ್ ಮಾಡುವಾಗ ಮೃದುಲಾ ಅವರನ್ನು ಭೇಟಿ ಮಾಡಲು ಪ್ರಯತ್ನ ಪಟ್ಟಿದ್ದೆ. ಆದರೆ ಆಗಲಿಲ್ಲ. ಅವರ ಪತಿ ರಂಗನಾಥ್ ಶೂಟಿಂಗ್ ಸ್ಥಳಕ್ಕೆ ಬರುತ್ತಿದ್ದರು. ಅವರಿಂದ ಮೃದುಲಾ ಬಗ್ಗೆ ತಿಳಿದುಕೊಂಡು ಅಭಿನಯಿಸಿದ್ದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಿನಿಮಾದ ತುಣುಕು ನೋಡಿದರು’ ಎಂದು ತಾರಾ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ