ಭಜರಂಗಿ 2 ಸಿನಿಮಾ ಸೆಟ್​ಗೆ ಬೆಂಕಿ ಅವಘಡ ಬೆನ್ನಲ್ಲೇ ಸ್ಟುಡಿಯೋಗೆ ಬೀಗಮುದ್ರೆ!

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್​ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ. ಸುಮಾರು 1 […]

ಭಜರಂಗಿ 2 ಸಿನಿಮಾ ಸೆಟ್​ಗೆ ಬೆಂಕಿ ಅವಘಡ ಬೆನ್ನಲ್ಲೇ ಸ್ಟುಡಿಯೋಗೆ ಬೀಗಮುದ್ರೆ!
Follow us
ಸಾಧು ಶ್ರೀನಾಥ್​
|

Updated on:Jan 20, 2020 | 3:06 PM

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ.

ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್​ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ.

ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ಸೆಟ್ ಹಾಕಲಾಗಿತ್ತು. 200 ಜನ ತಾಂತ್ರಿಕ ವರ್ಗ ಹಾಗೂ ಚಿತ್ರತಂಡ ಶೂಟಿಂಗ್ ಮಾಡುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಭಜರಂಗಿ-2 ಸಿನಿಮಾ ಸೆಟ್​ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇಂದು ಅದೇ ಸೆಟ್ ಮರುನಿರ್ಮಾಣ ಕಾರ್ಯದಲ್ಲಿ ಚಿತ್ರತಂಡ ತೊಡಗಿತ್ತು. ಅನುಮತಿ ಇಲ್ಲದೆ ಸ್ಟುಡಿಯೋದ ಬೀಗಮುದ್ರೆ ಓಪನ್ ಮಾಡದಂತೆ ಪೊಲೀಸರಿಗೆ ತಹಶೀಲ್ದಾರ್ ಶ್ರೀನಿವಾಸಯ್ಯ ಸೂಚಿಸಿದ್ದಾರೆ.

Published On - 3:05 pm, Mon, 20 January 20

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ