ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ.
ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ.
ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ಸೆಟ್ ಹಾಕಲಾಗಿತ್ತು. 200 ಜನ ತಾಂತ್ರಿಕ ವರ್ಗ ಹಾಗೂ ಚಿತ್ರತಂಡ ಶೂಟಿಂಗ್ ಮಾಡುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಭಜರಂಗಿ-2 ಸಿನಿಮಾ ಸೆಟ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇಂದು ಅದೇ ಸೆಟ್ ಮರುನಿರ್ಮಾಣ ಕಾರ್ಯದಲ್ಲಿ ಚಿತ್ರತಂಡ ತೊಡಗಿತ್ತು. ಅನುಮತಿ ಇಲ್ಲದೆ ಸ್ಟುಡಿಯೋದ ಬೀಗಮುದ್ರೆ ಓಪನ್ ಮಾಡದಂತೆ ಪೊಲೀಸರಿಗೆ ತಹಶೀಲ್ದಾರ್ ಶ್ರೀನಿವಾಸಯ್ಯ ಸೂಚಿಸಿದ್ದಾರೆ.
Published On - 3:05 pm, Mon, 20 January 20