AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾ ಬೆಲೆ ಏರಿಕೆಗೆ ತೆಲಂಗಾಣದಲ್ಲಿ ಅವಕಾಶ; ಕೊಡಬೇಕು 1 ಕೋಟಿ ರೂಪಾಯಿ

Toxic Movie: ಆಗಸ್ಟ್ 26ರಂದು ಬಿಡುಗಡೆಯಾಗಲಿರುವ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಟಿಕೆಟ್ ದರ ಏರಿಕೆಗೆ ತೆಲಂಗಾಣ ಸರ್ಕಾರ ಅಧಿಕೃತ ಅನುಮತಿ ನೀಡಿದೆ. ಜೊತೆಗೆ ನಿರ್ಮಾಣ ಸಂಸ್ಥೆಗೆ 1 ಕೋಟಿ ರೂಪಾಯಿಯನ್ನು ತೆಲುಗು ಚಿತ್ರರಂಗದ ಕಾರ್ಮಿಕರ ಕಲ್ಯಾಣ ನಿಧಿಗೆ ದೇಣಿಗೆ ನೀಡುವಂತೆ ನಿರ್ದೇಶಿಸಿದೆ.

'ಟಾಕ್ಸಿಕ್' ಸಿನಿಮಾ ಬೆಲೆ ಏರಿಕೆಗೆ ತೆಲಂಗಾಣದಲ್ಲಿ ಅವಕಾಶ; ಕೊಡಬೇಕು 1 ಕೋಟಿ ರೂಪಾಯಿ
ಟಾಕ್ಸಿಕ್ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Aug 25, 2026 | 2:33 PM

Share

ಮುಖ್ಯಾಂಶಗಳು

  • ತೆಲಂಗಾಣದಲ್ಲಿ 'ಟಾಕ್ಸಿಕ್' ಟಿಕೆಟ್ ದರ ಏರಿಕೆಗೆ ಸರ್ಕಾರದ ಗ್ರೀನ್ ಸಿಗ್ನಲ್
  • ಸಿಂಗಲ್ ಸ್ಕ್ರೀನ್‌ನಲ್ಲಿ ₹50, ಮಲ್ಟಿಪ್ಲೆಕ್ಸ್‌ನಲ್ಲಿ ₹100 ಟಿಕೆಟ್ ದರ ಹೆಚ್ಚಳ
  • ತೆಲುಗು ಚಿತ್ರರಂಗದ ಕಾರ್ಮಿಕರ ಕಲ್ಯಾಣ ನಿಧಿಗೆ 1 ಕೋಟಿ ರೂ. ನೀಡಲಿರುವ KVN

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರವು ಅಲ್ಲಿನ ಚಿತ್ರಮಂದಿರಗಳಲ್ಲಿ ‘ಟಾಕ್ಸಿಕ್’ ಸಿನಿಮಾದ ಟಿಕೆಟ್ ದರವನ್ನು ಹೆಚ್ಚಿಸಲು ಅಧಿಕೃತ ಅನುಮತಿಯನ್ನು ನೀಡಿ ಆದೇಶ ಹೊರಡಿಸಿದೆ. ಅಲ್ಲದೆ ಇದಕ್ಕೆ ಪ್ರತಿಯಾಗಿ ಒಂದು ದೊಡ್ಡ ಕಂಡಿಷನ್ ಕೂಡ ಹಾಕಿದೆ.

ಟಿಕೆಟ್ ದರ ಏರಿಕೆ ವಿವರ

ಸರ್ಕಾರದ ಗೃಹ ಇಲಾಖೆ ಹೊರಡಿಸಿರುವ ಆದೇಶದ ಪ್ರಕಾರ, ಆಗಸ್ಟ್ 26ರಿಂದ ಸೆಪ್ಟೆಂಬರ್ 4ರವರೆಗೆ (10 ದಿನಗಳ ಕಾಲ) ಹಾಗೂ ದಿನಕ್ಕೆ 5 ಪ್ರದರ್ಶನಗಳಿಗೆ ಅನ್ವಯವಾಗುವಂತೆ ಈ ಕೆಳಗಿನ ದರ ಏರಿಕೆಗೆ ಅವಕಾಶ ನೀಡಲಾಗಿದೆ.

ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು: ಟಿಕೆಟ್ ದರದಲ್ಲಿ 50 ರೂಪಾಯಿ ಹೆಚ್ಚಳ (ಜಿಎಸ್‌ಟಿ ಸೇರಿ).

ಮಲ್ಟಿಪ್ಲೆಕ್ಸ್ ಹಾಗೂ ಸ್ಪೆಷಲ್ ಥಿಯೇಟರ್‌ಗಳು: ಟಿಕೆಟ್ ದರದಲ್ಲಿ 100 ರೂಪಾಯಿ ಹೆಚ್ಚಳ (ಜಿಎಸ್‌ಟಿ ಸೇರಿ).

ಕಾರ್ಮಿಕರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಲು ನಿರ್ದೇಶನ

ಟಿಕೆಟ್ ದರ ಏರಿಕೆಗೆ ಅನುಮತಿ ನೀಡುವ ಜೊತೆಗೆ, ತೆಲಂಗಾಣ ಸರ್ಕಾರವು ಸಿನಿಮಾದ ನಿರ್ಮಾಣ ಸಂಸ್ಥೆಯಾದ ‘ಕೆವಿಎನ್ – ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್’ಗೆ (ಪ್ರಮುಖ ಷರತ್ತೊಂದನ್ನು ವಿಧಿಸಿದೆ. ತೆಲುಗು ಚಿತ್ರರಂಗದ ನೌಕರರು ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ‘ತೆಲುಗು ಫಿಲ್ಮ್ ಇಂಡಸ್ಟ್ರಿ ಎಂಪ್ಲಾಯೀಸ್ ವೆಲ್ಫೇರ್ ಕಮಿಟಿ’ ಖಾತೆಗೆ ಕಡ್ಡಾಯವಾಗಿ 1 ಕೋಟಿ ರೂಪಾಯಿ ದೇಣಿಗೆಯನ್ನು ಜಮೆ ಮಾಡುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಇದರೊಂದಿಗೆ, ಚಿತ್ರಪ್ರದರ್ಶನದ ಸಮಯದಲ್ಲಿ ಮಾದಕ ದ್ರವ್ಯ ನಿಗ್ರಹ ಹಾಗೂ ಸೈಬರ್ ಕ್ರೈಮ್ ಜಾಗೃತಿ ಜಾಹೀರಾತುಗಳನ್ನು ಪ್ರದರ್ಶಿಸಲು ಥಿಯೇಟರ್‌ಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್

ಬುಕಿಂಗ್ ಆರಂಭ

ಟಿಕೆಟ್ ಹೈಕ್ ಆದೇಶದ ಬೆನ್ನಲ್ಲೇ ಹೈದರಾಬಾದ್​ನಲ್ಲಿ ಬುಕಿಂಗ್ ಆರಂಭ ಆಗಿದೆ. ಬುಕಿಂಗ್ ಓಪನ್ ಆಗುತ್ತಿದ್ದಂತೆ ಜನರು ಮುಗಿಬಿದ್ದು ಟಿಕೆಟ್ ಕಾಯ್ದಿರಿಸುತ್ತಿದ್ದಾರೆ. ಮೊದಲ ದಿನ ತೆಲಂಗಾಣ ಹಾಗೂ ಹೈದರಾಬಾದ್ ಭಾಗದಲ್ಲಿ ಭರ್ಜರಿ ಗಳಿಕೆ ಆಗೋ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್