‘ಆದಿಪುರುಷ್​’ನಾಗಿ ತೆರೆ ಮೇಲೆ ಮಿಂಚಲಿದ್ದಾರೆ ಪ್ರಭಾಸ್​.. ಸಿನಿಮಾ ಟೈಟಲ್​ ಪೋಸ್ಟರ್​ ರಿಲೀಸ್​ !

ಹೈದರಾಬಾದ್: ಬಾಹುಬಲಿ ಮತ್ತು ಸಾಹೋ ಚಿತ್ರಗಳ ಮೂಲಕ ದೇಶಾದ್ಯಂತ ಖ್ಯಾತಿ ಪಡೆದ ತೆಲುಗು ಸ್ಟಾರ್​ ಪ್ರಭಾಸ್​ ಇದೀಗ ಮತ್ತೊಂದು ಮೆಗಾ ಸಿನಿಮಾದಲ್ಲಿ ನಟಿಸಲಿದ್ದಾರೆ. ನಿರ್ದೇಶಕ ಓಮ್​ ರೌತ್​ ಜೊತೆ ಕೈಜೋಡಿಸಿರುವ ಪ್ರಭಾಸ್​ ಇದೀಗ ಆದಿಪುರುಷನಾಗಿ ತೆರೆ ಮೇಲೆ ಮಿಂಚಲಿದ್ದಾರೆ. ಹೌದು, ಪ್ರತಿಷ್ಠಿತ T ಸೀರೀಸ್​ ಸಂಸ್ಥೆಯ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ 3D ಌಕ್ಷನ್​ ಸಿನಿಮಾ ಹಿಂದಿ ,ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಸೇರಿದಂತೆ ಕೆಲವು ವಿದೇಶಿ ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ಆದಿಪುರುಷ್​ ದೇಶದ ಅತ್ಯುನ್ನತ ಪೌರಾಣಿಕ […]

‘ಆದಿಪುರುಷ್​’ನಾಗಿ ತೆರೆ ಮೇಲೆ ಮಿಂಚಲಿದ್ದಾರೆ ಪ್ರಭಾಸ್​.. ಸಿನಿಮಾ ಟೈಟಲ್​ ಪೋಸ್ಟರ್​ ರಿಲೀಸ್​ !
Follow us
KUSHAL V
|

Updated on: Aug 18, 2020 | 7:15 PM

ಹೈದರಾಬಾದ್: ಬಾಹುಬಲಿ ಮತ್ತು ಸಾಹೋ ಚಿತ್ರಗಳ ಮೂಲಕ ದೇಶಾದ್ಯಂತ ಖ್ಯಾತಿ ಪಡೆದ ತೆಲುಗು ಸ್ಟಾರ್​ ಪ್ರಭಾಸ್​ ಇದೀಗ ಮತ್ತೊಂದು ಮೆಗಾ ಸಿನಿಮಾದಲ್ಲಿ ನಟಿಸಲಿದ್ದಾರೆ. ನಿರ್ದೇಶಕ ಓಮ್​ ರೌತ್​ ಜೊತೆ ಕೈಜೋಡಿಸಿರುವ ಪ್ರಭಾಸ್​ ಇದೀಗ ಆದಿಪುರುಷನಾಗಿ ತೆರೆ ಮೇಲೆ ಮಿಂಚಲಿದ್ದಾರೆ.

ಹೌದು, ಪ್ರತಿಷ್ಠಿತ T ಸೀರೀಸ್​ ಸಂಸ್ಥೆಯ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ 3D ಌಕ್ಷನ್​ ಸಿನಿಮಾ ಹಿಂದಿ ,ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಸೇರಿದಂತೆ ಕೆಲವು ವಿದೇಶಿ ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ಆದಿಪುರುಷ್​ ದೇಶದ ಅತ್ಯುನ್ನತ ಪೌರಾಣಿಕ ಕಥೆಯಾದ ರಾಮಾಯಣದ ಕಥಾಹಂದರವನ್ನು ಹೊಂದಿದೆ ಎಂದು ತಿಳಿದುಬಂದಿದೆ.

ಸಿನಿಮಾದಲ್ಲಿ ಆದಿಪುರುಷನಾಗಿ ಕಾಣಿಸಲಿರುವ ಪ್ರಭಾಸ್​ ನಿನ್ನೆ ಚಿತ್ರದ ನಿರ್ದೇಶಕ ಓಮ್​ ರೌತ್​ ಜೊತೆ ಸೇರಿ ತಮ್ಮ ಫ್ಯಾನ್ಸ್​ಗಳಿಗಾಗಿ ಇನ್​ಸ್ಟಾಗ್ರಾಮ್​ನಲ್ಲಿ ನಾಳೆ ಬೆಳಗ್ಗೆ 7.11ಕ್ಕೆ ಸಜ್ಜಾಗಿದ್ದೀರಾ ಎಂಬ ಕುತೂಹಲಕಾರಿ ಪೋಸ್ಟ್​ ಹಾಕಿದ್ದರು. ಇದೀಗ, ಸಿನಿಮಾದ ಟೈಟಲ್​ ಪೋಸ್ಟರ್​ ರಿಲೀಸ್​ ಮಾಡಿರುವ ಪ್ರಭಾಸ್​ ಅಭಿಮಾನಿಗಳಲ್ಲಿ ಮತ್ತಷ್ಟು ನಿರೀಕ್ಷೆ ಹುಟ್ಟಿಸಿದ್ದಾರೆ.

ಅಧರ್ಮದ ವಿರುದ್ಧ ಧರ್ಮದ ವಿಜಯದ ಸಂಭ್ರಮಾಚರಣೆ ಎಂಬ ಟ್ಯಾಗ್​ಲೈನ್​ ಅಡಿಯಲ್ಲಿ ಮೂಡಿಬರುತ್ತಿರುವ ಸಿನಿಮಾಗೆ 2021ರಲ್ಲಿ ಶೂಟಿಂಗ್​ ಪ್ರಾರಂಭವಾಗಲಿದ್ದು 2022ಕ್ಕೆ ತೆರೆ ಮೇಲೆ ಅಪ್ಪಳಿಸಲಿದೆ.

https://www.instagram.com/p/CEBp2d_JUxC/

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ