Singer Mangli: ಸಿಂಗರ್​ ಮಂಗ್ಲಿ ಈಗ ಹೀರೋಯಿನ್​; ಚಂದ್ರಚೂಡ್​ ನಿರ್ದೇಶನದ ‘ಪಾದರಾಯ’ ಚಿತ್ರದಲ್ಲಿ ನಟನೆ

Padaraya | Kannada Movie: ನೈಜ ಘಟನೆಯನ್ನು ಆಧರಿಸಿ ‘ಪಾದರಾಯ’ ಸಿನಿಮಾ ಮೂಡಿಬರಲಿದೆ. ಈ ಸಿನಿಮಾದಲ್ಲಿ ಖ್ಯಾತ ಗಾಯಕಿ ಮಂಗ್ಲಿ ಅವರು ಹೀರೋಯಿನ್​ ಆಗಿ ನಟಿಸುವುದು ಖಚಿತವಾಗಿದೆ.

Singer Mangli: ಸಿಂಗರ್​ ಮಂಗ್ಲಿ ಈಗ ಹೀರೋಯಿನ್​; ಚಂದ್ರಚೂಡ್​ ನಿರ್ದೇಶನದ ‘ಪಾದರಾಯ’ ಚಿತ್ರದಲ್ಲಿ ನಟನೆ
ಮಂಗ್ಲಿ, ಚಕ್ರವರ್ತಿ ಚಂದ್ರಚೂಡ್
Follow us
TV9 Web
| Updated By: ಮದನ್​ ಕುಮಾರ್​

Updated on: Jan 12, 2023 | 5:14 PM

ಬಿಗ್​ ಬಾಸ್​ ಖ್ಯಾತಿಯ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ‘ಪಾದರಾಯ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ‘ಮಾಸ್ತಿಗುಡಿ’ ಖ್ಯಾತಿಯ ನಿರ್ದೇಶಕ ನಾಗಶೇಖರ್ (Nagashekar) ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಶೂಟಿಂಗ್​ ಶುರುವಾಗುವುದಕ್ಕೂ ಮುನ್ನ ನಾಗಶೇಖರ್ ಅವರು 42 ದಿನಗಳ ಕಟ್ಟುನಿಟ್ಟಿನ ವ್ರತ ಆಚರಣೆ ಮಾಡುತ್ತಿದ್ದಾರೆ. ಚಕ್ರವರ್ತಿ ಚಂದ್ರಚೂಡ್ ಅವರಿಂದ ಹನುಮ ಮಾಲೆ ಹಾಕಿಸಿಕೊಂಡಿರುವ ನಾಗಶೇಖರ್ ಅಂಜನಾದ್ರಿ ಬೆಟ್ಟದಲ್ಲಿ ವ್ರತ ಆಚರಿಸುತ್ತಿದ್ದಾರೆ. ಈ ನಡುವೆ ಇನ್ನೊಂದು ಸೆನ್ಸೇಷನ್​ ನ್ಯೂಸ್​ ಕೇಳಿಬಂದಿದೆ. ಈ ಚಿತ್ರಕ್ಕೆ ಗಾಯಕಿ ಮಂಗ್ಲಿ (Singer Mangli) ಅವರು ಹೀರೋಯಿನ್​ ಆಗಿ ಸೆಲೆಕ್ಟ್​ ಆಗಿದ್ದಾರೆ.

‘ಕಣ್ಣೇ ಅದಿರಿಂದಿ’ ಹಾಡಿನ ಮೂಲಕ ಅಪಾರ ಜನಪ್ರಿಯತೆ ಪಡೆದುಕೊಂಡ ತೆಲುಗಿನ ಗಾಯಕಿ ಮಂಗ್ಲಿ ಅವರು ನಂತರ ಕನ್ನಡದ ಅನೇಕ ಹಾಡುಗಳಿಗೆ ಧ್ವನಿ ನೀಡಿದರು. ಈಗ ಹೀರೋಯಿನ್​ ಆಗಿ ಕನ್ನಡ ಚಿತ್ರರಂಗಕ್ಕೆ ಅವರು ಎಂಟ್ರಿ ನೀಡುತ್ತಿದ್ದಾರೆ. ಆ ಮೂಲಕ ಅವರ ಹೊಸ ಜರ್ನಿ ಆರಂಭಿಸುತ್ತಿದ್ದಾರೆ. ಅಭಿಮಾನಿಗಳಿಗೆ ಈ ಸುದ್ದಿ ಖುಷಿ ತಂದಿದೆ. ‘ಪಾದರಾಯ’ ಪ್ಯಾನ್ ಇಂಡಿಯಾ ಸಿನಿಮಾ ಎಂಬುದು ವಿಶೇಷ. ಈ ಚಿತ್ರದಲ್ಲಿ ಮಂಗ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಮೂಡಿದೆ.

ಇದನ್ನೂ ಓದಿ: Mangli: ಮೈಸೂರಿಗೆ ಬಂದು ‘ಕನ್ನಡ ನನಗೆ ಎರಡನೇ ಮನೆ’ ಎಂದು ತೆಲುಗಿನಲ್ಲೇ ಹೇಳಿದ ಗಾಯಕಿ ಮಂಗ್ಲಿ

ಇದನ್ನೂ ಓದಿ
Image
Mangli: ಮೈಸೂರಿಗೆ ಬಂದು ‘ಕನ್ನಡ ನನಗೆ ಎರಡನೇ ಮನೆ’ ಎಂದು ತೆಲುಗಿನಲ್ಲೇ ಹೇಳಿದ ಗಾಯಕಿ ಮಂಗ್ಲಿ
Image
Singer Mangli: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ತೆಲುಗು ಗಾಯಕಿ ಮಂಗ್ಲಿ ‘ವಂದೇ ಮಾತರಂ’ ಘೋಷ
Image
‘ಪುಷ್ಪ’ ಸಿನಿಮಾದ ಐಟಂ ಸಾಂಗ್​ ಹಾಡಿದ್ದು ‘ಮಂಗ್ಲಿ’ ಸಹೋದರಿ; ಹಿಟ್​ ಆಯ್ತು ಹಾಡು
Image
Singer Mangli: ‘ಏಕ್​ ಲವ್ ಯಾ’ ಸುದ್ದಿಗೋಷ್ಠಿಯಲ್ಲಿ ಪುನೀತ್​ ನೆನೆದು ಕಣ್ಣೀರು ಹಾಕಿದ ಗಾಯಕಿ ಮಂಗ್ಲಿ

ಚಕ್ರವರ್ತಿ ಚಂದ್ರಚೂಡ್ ಹಾಗೂ ನಾಗಶೇಖರ್ ಕಾಂಬಿನೇಶನ್​ನಲ್ಲಿ ತಯಾರಾಗುತ್ತಿರುವ ‘ಪಾದರಾಯ’ ಸಿನಿಮಾದ ಶೀರ್ಷಿಕೆಯು ಹನುಮ ಜಯಂತಿಯಂದು ರಿವೀಲ್ ಆಗಿತ್ತು. ಈಗ ಚಿತ್ರೀಕರಣಕ್ಕೆ ಭರದ ಸಿದ್ಧತೆ ನಡೆಯುತ್ತಿರುವ ಸಮಯದಲ್ಲಿ ಪಾತ್ರವರ್ಗದ ಬಗ್ಗೆ ಅಪ್​ಡೇಟ್​ ನೀಡಲಾಗಿದ್ದು, ಮಂಗ್ಲಿ ಅವರು ನಾಯಕಿಯಾಗಿ ಬಣ್ಣ ಹಚ್ಚುತ್ತಾರೆ ಎಂಬ ಸುದ್ದಿ ಅಧಿಕೃತವಾಗಿದೆ.

ಇದನ್ನೂ ಓದಿ: Singer Mangli: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ತೆಲುಗು ಗಾಯಕಿ ಮಂಗ್ಲಿ ‘ವಂದೇ ಮಾತರಂ’ ಘೋಷ

‘ಪಾದರಾಯ’ ಚಿತ್ರವನ್ನು ಸಿದ್ದೇಶ್ವರ ಎಂಟರ್ಪ್ರೈಸಸ್ ಬ್ಯಾನರ್ ಮೂಲಕ ಆರ್. ಚಂದ್ರು ಅವರು ನಿರ್ಮಾಣ ಮಾಡುತ್ತಿದ್ದಾರೆ. ನಾಗಶೇಖರ್ ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಆಂಟೋನಿ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಸತ್ಯ ಹೆಗಡೆ ಅವರು ಛಾಯಾಗ್ರಹಣ ಮಾಡಲಿದ್ದಾರೆ.

ನೈಜ ಘಟನೆ ಆಧರಿಸಿದ ‘ಪಾದರಾಯ’:

2013-14ರ ಸಮಯದಲ್ಲಿ ನಡೆದ ನೈಜ ಘಟನೆಯನ್ನು ಆಧಾರವಾಗಿ ಇಟ್ಟುಕೊಂಡು ‘ಪಾದರಾಯ’ ಚಿತ್ರವನ್ನು ಕಟ್ಟಿಕೊಡಲಾಗುತ್ತಿದೆ. ಆರು ರಾಜ್ಯಕ್ಕೆ ಸಂಬಂಧಿಸಿದ ಘಟನೆಯೇ ಈ ಚಿತ್ರದ ಕಥಾವಸ್ತು. ಹಾಗಾಗಿ ಇದು ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿಬರುತ್ತಿದೆ. ಶೀಘ್ರದಲ್ಲೇ ಈ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ. ಚಿತ್ರದಲ್ಲಿ ಇನ್ನೂ ಯಾರೆಲ್ಲ ನಟಿಸಲಿದ್ದಾರೆ ಎಂಬ ಬಗ್ಗೆ ಸದ್ಯದಲ್ಲೇ ಮಾಹಿತಿ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು