‘ಆ ನೋವು ಹಾಗೆಯೇ ಇರುತ್ತದೆ; ‘ಜಾಕಿ’ ಭಾವನಾಗೆ ಮರೆಯಾಗುವುದಿಲ್ಲ ಆ ಘಟನೆ

ಭಾವನಾ ಅವರ ತಂದೆಯ ಹೆಸರು ಬಾಲಚಂದ್ರ. ಅವರು 2015ರಲ್ಲಿ ನಿಧನ ಹೊಂದಿದರು. ಆಗ ಅವರಿಗೆ 59 ವರ್ಷ ವಯಸ್ಸಾಗಿತ್ತು. ಬಾಲಚಂದ್ರ ಅವರಿಗೆ ಅನಾರೋಗ್ಯ ಕಾಡಿದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿರಲಿಲ್ಲ.

‘ಆ ನೋವು ಹಾಗೆಯೇ ಇರುತ್ತದೆ; ‘ಜಾಕಿ’ ಭಾವನಾಗೆ ಮರೆಯಾಗುವುದಿಲ್ಲ ಆ ಘಟನೆ
ಭಾವನಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 21, 2023 | 7:55 AM

ನಟಿ ಭಾವನಾ ಅವರು ಕನ್ನಡ ಮಂದಿಗೆ ಚಿರಪರಿಚಿತರು. ಶಿವರಾಜ್​ಕುಮಾರ್ (Shivarajkumar), ಪುನೀತ್ ರಾಜ್​ಕುಮಾರ್ ಸೇರಿ ಅನೇಕ ಸ್ಟಾರ್ ಹೀರೋಗಳ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಹಲವು ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ತಂದೆಯ ನಿಧನದ ಬಗ್ಗೆ ಮಾತನಾಡಿದ್ದಾರೆ. ಅವರು ತಂದೆಯನ್ನು ಕಳೆದುಕೊಂಡು 8 ವರ್ಷ ಕಳೆದಿದೆ. ಆದರೆ, ಆ ನೋವು ಮಾತ್ರ ಹಾಗೆಯೇ ಇದೆ.

‘ನನ್ನ ತಂದೆಯ ಸಾವಿನ ನೋವು ಯಾವಾಗಲೂ ಹಾಗೆಯೇ ಇರುತ್ತದೆ. ಹೊರಗೆ ಎಷ್ಟು ಖುಷಿಯಾಗಿದ್ದರೂ ಒಳಗಿನ ನೋವು ಹಾಗೆಯೇ ಇದೆ. ಇಷ್ಟು ವರ್ಷ ಕಳೆದರೂ ಆ ದುಃಖದಿಂದ ಹೊರಬರಲು ಸಾಧ್ಯವಾಗಿಲ್ಲ. ಜೀವನ ಸಂಪೂರ್ಣವಾಗಿ ಬದಲಾಗಿದೆ. ಆದರೆ ನನ್ನ ತಂದೆ ಇಲ್ಲ ಎಂಬುದು ನನ್ನನ್ನು ಯಾವಾಗಲೂ ಕಾಡುತ್ತದೆ. ಈ ಕಾಡುವಿಕೆ ಕೆಲವೊಮ್ಮೆ ಹೆಚ್ಚಿರುತ್ತದೆ, ಕೆಲವೊಮ್ಮೆ ಕಡಿಮೆ. ಆದರೆ, ಆ ನೋವು ಹಾಗೆಯೇ ಇದೆ’ ಎಂದಿದ್ದಾರೆ ಭಾವನಾ.

ಭಾವನಾ ಅವರ ತಂದೆಯ ಹೆಸರು ಬಾಲಚಂದ್ರ. ಅವರು 2015ರಲ್ಲಿ ನಿಧನ ಹೊಂದಿದರು. ಆಗ ಅವರಿಗೆ 59 ವರ್ಷ ವಯಸ್ಸಾಗಿತ್ತು. ಬಾಲಚಂದ್ರ ಅವರಿಗೆ ಅನಾರೋಗ್ಯ ಕಾಡಿದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿರಲಿಲ್ಲ. ತಂದೆಯ ಬಗ್ಗೆ ಅವರು ಯಾವಾಗಲೂ ಪ್ರೀತಿ ವ್ಯಕ್ತಪಡಿಸುತ್ತಾ ಇರುತ್ತಾರೆ. ಅವರು ಈ ಮಟ್ಟಕ್ಕೆ ಬೆಳೆಯಲು ತಂದೆ ಕಾರಣ ಎಂದು ಅವರು ಹಲವು ಬಾರಿ ಹೇಳಿಕೊಂಡಿದ್ದಿದೆ.

ಇದನ್ನೂ ಓದಿ: ಕ್ಯೂಟ್ ಅವತಾರದಲ್ಲಿ ಕಾಣಿಸಿಕೊಂಡ ನಟಿ ಭಾವನಾ ಮೆನನ್; ಇಲ್ಲಿದೆ ಫೋಟೋ ಗ್ಯಾಲರಿ

ಭಾವನಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2002ರಲ್ಲಿ. ಮಲಯಾಳಂ ಸಿನಿಮಾ ಮೂಲಕ ಅವರು ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರು ಬ್ಯಾಕ್​ ಟು ಬ್ಯಾಕ್ ಮಲಯಾಳಂ ಸಿನಿಮಾ ಮಾಡಿದರು. 2010ರಲ್ಲಿ ರಿಲೀಸ್ ಆದ ‘ಜಾಕಿ’ ಅವರ ನಟನೆಯ ಮೊದಲ ಕನ್ನಡ ಸಿನಿಮಾ. ಪುನೀತ್ ರಾಜ್​ಕುಮಾರ್​ಗೆ ಜೊತೆಯಾಗಿ ಅವರು ತೆರೆಹಂಚಿಕೊಂಡರು. ಅಲ್ಲಿಂದ ಅವರು ‘ಜಾಕಿ’ ಭಾವನಾ ಎಂದೇ ಫೇಮಸ್ ಆದರು. ನಂತರ ಅವರು ‘ರೊಮಿಯೋ’, ‘ಟೋಪಿವಾಲ’, ‘ಮೈತ್ರಿ’, ‘ಇನ್ಸ್​ಪೆಕ್ಟರ್ ವಿಕ್ರಮ್’ ಸೇರಿ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಅವರು ಕನ್ನಡ, ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ