AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟು ಕಾದರೂ ದರ್ಶನ್ ಬರಲಿಲ್ಲ: ಡಿ ಬಾಸ್ ಇಲ್ಲದೇ ನಡೆಯಿತು ‘ದಿ ಡೆವಿಲ್’ ಸುದ್ದಿಗೋಷ್ಠಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಅವರು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರ ಅನುಪಸ್ಥಿತಿಯಲ್ಲೇ ‘ದಿ ಡೆವಿಲ್’ ಸಿನಿಮಾದ ಸುದ್ದಿಗೋಷ್ಠಿ ಮಾಡಲಾಗಿದೆ. ಚಿತ್ರತಂಡ ಇದರಲ್ಲಿ ಭಾಗಿ ಆಗಿದೆ. ನಿರ್ದೇಶಕ ಪ್ರಕಾಶ್ ವೀರ್ ಅವರು ಸುದ್ದಿಗೋಷ್ಠಿಯಲ್ಲಿ ದರ್ಶನ್ ಬಗ್ಗೆ ಮಾತನಾಡಿದರು. ಆ ಬಗ್ಗೆ ಇಲ್ಲಿದೆ ಮಾಹಿತಿ..

ಎಷ್ಟು ಕಾದರೂ ದರ್ಶನ್ ಬರಲಿಲ್ಲ: ಡಿ ಬಾಸ್ ಇಲ್ಲದೇ ನಡೆಯಿತು ‘ದಿ ಡೆವಿಲ್’ ಸುದ್ದಿಗೋಷ್ಠಿ
Prakash Veer, Darshan
ಮದನ್​ ಕುಮಾರ್​
|

Updated on: Dec 02, 2025 | 5:36 PM

Share

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ (Darshan) ಅವರು ಅಭಿನಯಿಸಿರುವ ‘ದಿ ಡೆವಿಲ್’ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಡಿಸೆಂಬರ್ 11ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಈಗ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರು ಹೊರಗೆ ಬಂದ ನಂತರವೇ ಸುದ್ದಿಗೋಷ್ಠಿ ಮಾಡೋಣ ಎಂಬುದು ನಿರ್ದೇಶಕ ಪ್ರಕಾಶ್ ವೀರ್ ಅವರ ಪ್ಲ್ಯಾನ್ ಆಗಿತ್ತು. ಆದರೆ ಇಷ್ಟು ದಿನಗಳು ಕಾದರೂ ಕೂಡ ದರ್ಶನ್ ಅವರು ಜೈಲಿನಿಂದ ಹೊರಗೆ ಬರಲೇ ಇಲ್ಲ. ಹಾಗಾಗಿ ದರ್ಶನ್ ಅವರ ಅನುಪಸ್ಥಿತಿಯಲ್ಲೇ ‘ದಿ ಡೆವಿಲ್’ (The Devil) ಸಿನಿಮಾ ತಂಡ ಸುದ್ದಿಗೋಷ್ಠಿ ಮಾಡಿದೆ. ಈ ವೇಳೆ ಪ್ರಕಾಶ್ ವೀರ್ ಅವರು ಮಾತನಾಡಿದರು.

‘ಎಲ್ಲರಿಗೂ ಕ್ಷಮೆ ಕೇಳುತ್ತೇನೆ. ಇಷ್ಟು ದಿನ ಕಾದು ನಾವು ಇಂದು ಪ್ರೆಸ್ ಮೀಟ್ ಮಾಡುತ್ತಿದ್ದೇವೆ. ಅದಕ್ಕಾಗಿ ಕ್ಷಮೆ ಇರಲಿ. ಅದಕ್ಕೆ ಕಾರಣ ಇಷ್ಟೇ.. ಈ ಹಿಂದೆ ನಾವು ಒಂದು ಸುದ್ದಿಗೋಷ್ಠಿ ಮಾಡಬೇಕು ಎಂದಾಗ ತುಂಬಾ ಗೊಂದಲಗಳು ಇದ್ದವು. ಆ ಬಳಿಕ ದರ್ಶನ್ ಬರುತ್ತಾರೆ, ಅವರು ನಮ್ಮ ಜೊತೆ ಇರುತ್ತಾರೆ ಎಂಬ ಒಂದೇ ಒಂದು ಆಸೆ ಇಟ್ಟುಕೊಂಡು ನಾನು ಇಷ್ಟು ದಿನ ಸುದ್ದಿಗೋಷ್ಠಿಯನ್ನು ಮುಂದಕ್ಕೆ ತಳ್ಳಿದೆ. ದುರಾದೃಷ್ಟವಶಾತ್ ಇಂದು ಕೂಡ ದರ್ಶನ್ ನಮ್ಮ ಜೊತೆ ಇಲ್ಲ’ ಎಂದು ಪ್ರಕಾಶ್ ವೀರ್ ಅವರು ಸುದ್ದಿಗೋಷ್ಠಿ ಆರಂಭಿಸಿದರು.

‘ದರ್ಶನ್ ನನ್ನ ಜೊತೆ ಇದ್ದರೆ ಒಂದು ಆನೆ ಬಲ. ಏನೋ ಒಂದು ಸಪೋರ್ಟ್ ಸಿಸ್ಟಮ್. ಅದನ್ನು ನಾನು ಖಂಡಿತವಾಗಿಯೂ ಮಿಸ್ ಮಾಡಿಕೊಳ್ಳುತ್ತೇನೆ. 2018ರಲ್ಲೇ ನಾನು ಮತ್ತು ದರ್ಶನ್ ಅವರು ಈ ಸಿನಿಮಾ ಬಗ್ಗೆ ಚರ್ಚೆ ಮಾಡಿದ್ದೆವು. ಅವರು ಯಾವಾಗಲೂ ನನಗೆ ಫೋರ್ಸ್ ಮಾಡಲ್ಲ. ಸಮಯ ತೆಗೆದುಕೊಂಡು ಸ್ಕ್ರೀನ್ ಪ್ಲೇ ಮಾಡಿಕೊಂಡು ಬಂದ ನಂತರ ಶೂಟಿಂಗ್ ಮಾಡೋಣ ಎಂದಿದ್ದರು. ಆ ಮೇಲೆ ಕೊವಿಡ್ ಬಂತು, ನಮ್ಮ ತಂದೆ ತೀರಿಕೊಂಡರು’ ಎಂದಿದ್ದಾರೆ ಪ್ರಕಾಶ್ ವೀರ್.

‘ಕಾಟೇರ ಮುಗಿಸಿದ ನಂತರ ದಿ ಡೆವಿಲ್ ಮಾಡೋಣ ಅಂತ ನಿರ್ಧರಿಸಿದೆವು. ಇಂದು ನಿಮ್ಮ ಮುಂದೆ ಕುಳಿತಿದ್ದೇವೆ. ಡಿಸೆಂಬರ್ 11ರಂದು ಸಿನಿಮಾ ಬಿಡುಗಡೆ ಆಗಲಿದೆ. ದರ್ಶನ್ ಇಲ್ಲ ಎಂಬುದು ನಮಗೆ ತುಂಬಾ ದೊಡ್ಡ ನಷ್ಟ. ಅದನ್ನು ನಾವು ತುಂಬೋಕೆ ಆಗಲ್ಲ. ಅವರು ಇಲ್ಲ ಎಂಬ ನೋವು ತುಂಬಾ ಇದೆ. ಅವರು ನನಗೆ ಸ್ನೇಹಿತನಾಗಿ ಕೂಡ ದೊಡ್ಡ ಬಲ. ಅವರ ಕುಟುಂಬದವರು ಸದಾ ನಮ್ಮ ಜೊತೆ ನಿಂತಿದ್ದಾರೆ. ಅವರ ಅಭಿಮಾನಿಗಳು ಕೂಡ ಚೆನ್ನಾಗಿ ಪ್ರಚಾರ ಮಾಡುತ್ತಿದ್ದಾರೆ. ಅವರಿಗೆ ಧನ್ಯವಾದಗಳು’ ಎಂದು ಪ್ರಕಾಶ್ ವೀರ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ದರ್ಶನ್ ಫಾರ್ಮ್​ಹೌಸ್​ ಎದುರು ಮುಗಿಲೆತ್ತರದ ‘ದಿ ಡೆವಿಲ್’ ಪೋಸ್ಟರ್

‘ಡೆವಿಲ್ ಎಂಬ ಟೈಟಲ್ ಬಹಳ ಸೂಕ್ತವಾಗಿದೆ. ಟೈಟಲ್​​ಗಾಗಿ ಕಥೆ ಮಾಡಿಲ್ಲ. ಕಥೆಗಾಗಿ ಆ ಟೈಟಲ್ ಇಟ್ಟಿದ್ದೇವೆ. ದರ್ಶನ್ ಅವರು ವೃತ್ತಿಪರ ನಟ. ಶೂಟಿಂಗ್ ವೇಳೆ ಬೇರೆ ಯಾವುದೇ ಚರ್ಚೆ ನಡೆಯಲ್ಲ. ಜೈಲಿನಿಂದ ಹೊರಬಂದು ಶೂಟಿಂಗ್ ಮಾಡಿದಾಗಲೂ ಕೂಡ ಯಾವುದೇ ವ್ಯತ್ಯಾಸ ಇರಲಿಲ್ಲ’ ಎಂದಿದ್ದಾರೆ ನಿರ್ದೇಶಕ ಪ್ರಕಾಶ್ ವೀರ್. ಈ ಸಿನಿಮಾದಲ್ಲಿ ಶರ್ಮಿಳಾ ಮಾಂಡ್ರೆ, ರಚನಾ ರೈ, ಗಿಲ್ಲಿ ನಟ, ಅಚ್ಯುತ್ ಕುಮಾರ್ ಮುಂತಾದ ಕಲಾವಿದರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ