‘ಪಯಣ ಶುರುವಾಗಿದೆ’; ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಬಗ್ಗೆ ಅಪ್​ಡೇಟ್ ಕೊಟ್ಟ ಯಶ್

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಯಾವಾಗ ಆರಂಭಿಸಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಇಂದಿನಿಂದ (ಆಗಸ್ಟ್ 8) ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಆರಂಭಿಸುತ್ತಿದ್ದಾರೆ.

‘ಪಯಣ ಶುರುವಾಗಿದೆ’; ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಬಗ್ಗೆ ಅಪ್​ಡೇಟ್ ಕೊಟ್ಟ ಯಶ್
ಯಶ್-ವೆಂಕಟ್
Edited By:

Updated on: Aug 08, 2024 | 11:30 AM

‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಬಗ್ಗೆ ಯಶ್ ಅವರು ಇಂದು (ಆಗಸ್ಟ್ 8) ಬೆಳ್ಳಂಬೆಳಿಗ್ಗೆಯೇ ಅಪ್​ಡೇಟ್ ಕೊಟ್ಟಿದ್ದಾರೆ. ‘ಪಯಣ ಶುರುವಾಗಿದೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ‘ಟಾಕ್ಸಿಕ್’ ಸಿನಿಮಾದ ಶೂಟ್ ಇಂದಿನಿಂದ ಆರಂಭ ಆಗಿದೆ ಎಂಬುದನ್ನು ಅಧಿಕೃತ ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ. ಅಂದುಕೊಂಡ ದಿನಾಂಕದಂದು ಸಿನಿಮಾ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

‘ಟಾಕ್ಸಿಕ್’ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ವೆಂಕಟ್ ಕೆ. ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ವೆಂಕಟ್ ಜೊತೆ ಇರೋ ಫೋಟೋನ ಯಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ಗೆ ಅರ್ಧಗಂಟೆಯಲ್ಲಿ ಎರಡೂವರೆ ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ.

ಯಶ್ ಅವರು ಇತ್ತೀಚೆಗಷ್ಟೇ ಧರ್ಮಸ್ಥಳ, ಸುರ್ಯದಲ್ಲಿರುವ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲಿ ದೇವರ ದರ್ಶನ ಪಡೆದಿದ್ದರು. ಈ ವೇಳೆ ಅವರ ಪತ್ನಿ ರಾಧಿಕಾ ಪಂಡಿತ್ ಹಾಗೂ ನಿರ್ಮಾಪಕ ವೆಂಕಟ್ ಕೂಡ ಇದ್ದರು. ಈ ಬೆನ್ನಲ್ಲೆ ಇಂದಿನಿಂದ (ಆಗಸ್ಟ್ 8) ಬೆಂಗಳೂರಿನ ಹೊರವಲಯದಲ್ಲಿ ಶೂಟಿಂಗ್ ಆರಂಭ ಆಗಿದೆ.

ಆಗಸ್ಟ್ 8ರಂದು ಶೂಟಿಂಗ್ ಆರಂಭಿಸುವುದಕ್ಕೂ ಒಂದು ಕರಣ ಇದೆ. ಎಂಟನ್ನು ಯಶ್ ಅವರು ಲಕ್ಕಿ ಎಂದು ಪರಿಗಣಿಸುತ್ತಾರೆ. ಅವರ ಹುಟ್ಟಿದ್ದು ಕೂಡ ಎಂಟಕ್ಕೆ (ಜನವರಿ 8). ಇಂದಿನ ದಿನಾಂಕದಲ್ಲಿ ಎಲ್ಲವೂ ಎಂಟೇ ಇದೆ. 8-8-2024 (2+0+2+4=8). ಈ ಕಾರಣಕ್ಕೆ ಆಗಸ್ಟ್ 8ರಿಂದ ಶೂಟಿಂಗ್ ಆರಂಭಿಸಲಾಗಿದೆ ಎಂದು ವರಯಲಾಗಿದೆ.

ಇದನ್ನೂ ಓದಿ: ಲಕ್ಕಿ ನಂಬರ್ ಡೇಟ್​ನಿಂದ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ ಯಶ್

ಮಲಯಾಳಂನ ಖ್ಯಾತ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಪಾತ್ರವರ್ಗದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ರಿವೀಲ್ ಆಗಬೇಕಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:02 am, Thu, 8 August 24

ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us