AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ಬರ್ತ್​​ಡೇಗೆ ‘ದ ಜಡ್ಜ್​ಮೆಂಟ್​’ ಸಿನಿಮಾದ ಫಸ್ಟ್​ ಲುಕ್ ರಿವೀಲ್ ಮಾಡಿದ ತಂಡ

ರವಿಚಂದ್ರನ್ ಅವರು ಈ ಚಿತ್ರದಲ್ಲಿ ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಲಾಗಿದೆ.

ರವಿಚಂದ್ರನ್ ಬರ್ತ್​​ಡೇಗೆ ‘ದ ಜಡ್ಜ್​ಮೆಂಟ್​’ ಸಿನಿಮಾದ ಫಸ್ಟ್​ ಲುಕ್ ರಿವೀಲ್ ಮಾಡಿದ ತಂಡ
ರವಿಚಂದ್ರನ್
ರಾಜೇಶ್ ದುಗ್ಗುಮನೆ
|

Updated on: May 30, 2023 | 2:31 PM

Share

ಕ್ರೇಜಿಸ್ಟಾರ್ ರವಿಚಂದ್ರನ್ (V Ravichandran) ಅವರಿಗೆ ಇಂದು (ಮೇ 30) ಬರ್ತ್​ಡೇ ಸಂಭ್ರಮ. ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಎಲ್ಲರೂ ಶುಭಕೋರುತ್ತಿದ್ದಾರೆ. ಇದರ ಜೊತೆಗೆ ಅವರ ಮನೆಯ ಎದುರು ಅಭಿಮಾನಿಗಳು ನೆರೆದಿದ್ದಾರೆ. ರವಿಚಂದ್ರನ್ ಅವರನ್ನು ನೋಡಿಯೇ ಮನೆಗೆ ತೆರಳುವುದಾಗಿ ಅವರು ಹೇಳುತ್ತಿದ್ದಾರೆ. ಇದರ ಜೊತೆಗೆ ರವಿಚಂದ್ರನ್ ನಟನೆಯ ಸಿನಿಮಾ ತಂಡದಿಂದ ಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ. ‘ದ ಜಡ್ಜ್​ಮೆಂಟ್’ ಸಿನಿಮಾ ತಂಡ ರವಿಚಂದ್ರನ್ ಅವರ ಲುಕ್ ರಿವೀಲ್ ಮಾಡಿದೆ.

ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದಲ್ಲಿ ‘ದಿ ಜಡ್ಜ್​​ಮೆಂಟ್’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರತಂಡ ಈಗಾಗಲೇ ಎರಡು ಬಾರಿ ಸುದ್ದಿಗೋಷ್ಠಿ ನಡೆಸಿತ್ತು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಅವರ ಲುಕ್ ರಿವೀಲ್ ಆಗಿರಲಿಲ್ಲ. ಈಗ ಕ್ರೇಜಿಸ್ಟಾರ್ ಜನ್ಮದಿನಕ್ಕೆ ‘ದ ಜಡ್ಜ್​ಮೆಂಟ್’ ಸಿನಿಮಾದಲ್ಲಿನ ರವಿಚಂದ್ರನ್ ಲುಕ್ ರಿವೀಲ್ ಆಗಿದೆ.

ರವಿಚಂದ್ರನ್ ಅವರು ಈ ಚಿತ್ರದಲ್ಲಿ ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಲಾಗಿದೆ. ರವಿಚಂದ್ರನ್ ಲುಕ್ ಸಾಕಷ್ಟು ಗಮನ ಸೆಳೆದಿದೆ. ‘ದ ಜಡ್ಜ್​​ಮೆಂಟ್​’ ಸಿನಿಮಾಗೆ ಭರದಿಂದ ಶೂಟಿಂಗ್ ನಡೆಯುತ್ತಿದೆ. ಬೆಂಗಳೂರು ಮೊದಲಾದ ಕಡೆಗಳಲ್ಲಿ ಈ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಸಿನಿಮಾ ರಿಲೀಸ್ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Ravichandran: ರವಿಚಂದ್ರನ್​ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್​ ಆಯ್ತು ‘ಕೆಡಿ’ ಚಿತ್ರದ ಹೊಸ ಪೋಸ್ಟರ್​; ಹೆಚ್ಚಿತು ನಿರೀಕ್ಷೆ

ಕ್ರೇಜಿ ಸ್ಟಾರ್ ರವಿಚಂದ್ರನ್ ಜೊತೆ ದಿಗಂತ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮ್​​ಕುಮಾರ್​, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ್ ಬೆಳವಾಡಿ, ಕೃಷ್ಣಾ ಹೆಬ್ಬಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ, ಸುಜಯ್ ಶಾಸ್ತ್ರೀ, ರೂಪಾ ರಾಯಪ್ಪ, ರವಿಶಂಕರ ಗೌಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪಿ. ಕೆ. ಎಚ್ ದಾಸ್​ ಛಾಯಾಗ್ರಾಹಣ, ಅನೂಪ ಸೀಳಿನ್ ಸಂಗೀತ ಸಂಯೋಜನೆ, ಕೆಂಪರಾಜ ಬಿ.ಎಸ್. ಸಂಕಲನ, ಪ್ರಮೋದ್ ಮರವಂತೆ ಗೀತ ರಚನೆ, ಎಂ ಎಸ್ ರಮೇಶ್ ಸಂಭಾಷಣೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!