ಸೂಟ್ಗಳ ಬಗ್ಗೆಯೂ ಬರುತ್ತಿದೆ ಸಿನಿಮಾ, ಹಾಡು ಬಿಡುಗಡೆ
Sandalwood: ಯಾವ ಯಾವದೋ ವಿಷಯಗಳ ಬಗ್ಗೆ ಸಿನಿಮಾಗಳು ಬಂದಿವೆ. ಇದೀಗ ಧರಿಸುವ ಸೂಟ್ ಬಗ್ಗೆಯೂ ಸಿನಿಮಾವೊಂದು ಕನ್ನಡದಲ್ಲಿ ತಯಾರಾಗಿದೆ. ಇತ್ತೀಚೆಗೆ ‘ಸೂಟ್’ ಸಿನಿಮಾದ ಹಾಡುಗಳು ಬಿಡುಗಡೆ ಆಗಿವೆ, ಸಿನಿಮಾ ಶೀಘ್ರವೇ ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ.
‘ಸೂಟ್ಸ್’ (Suits) ಹೆಸರಿನ ವೆಬ್ ಸರಣಿಯೊಂದು ನೆಟ್ಫ್ಲಿಕ್ಸ್ನಲ್ಲಿ (Netflix) ಸ್ಟ್ರೀಮ್ ಆಗುತ್ತಿದೆ. ಈಗ ಅದೇ ಹೆಸರಿನಲ್ಲಿ ಕನ್ನಡ ಸಿನಿಮಾ ಒಂದು ತೆರೆಗೆ ಬರಲು ಸಜ್ಜಾಗುತ್ತಿದೆ. ಮದುವೆ ಮುಂತಾದ ಸಮಾರಂಭಗಳಲ್ಲಿ “ಸೂಟ್” ಧರಿಸುವುದು ಸಾಮಾನ್ಯ ಅಭ್ಯಾಸ. ಅಂತಹ “ಸೂಟ್” ಬಗ್ಗೆ ಸಿನಿಮಾವೊಂದು ಬರುತ್ತಿದ್ದು, ಸಿನಿಮಾಕ್ಕೆ ‘ದಿ ಸೂಟ್’ ಎಂದು ಹೆಸರಿಡಲಾಗಿದೆ. ಇತ್ತೀಚೆಗೆ ಈ ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು “ಸೂಟ್” ನ ಬಗ್ಗೆ ಮಾತನಾಡಿದ್ದಾರೆ.
ಸಿನಿಮಾವನ್ನು ಭಗತ್ ರಾಜ್ ನಿರ್ದೇಶನ ಮಾಡಿದ್ದಾರೆ, “ಸೂಟ್” ಗೆ ಅದರದೇ ಆದ ವಿಶೇಷತೆ ಇದೆ. ಜೀವನದಲ್ಲಿ ಒಮ್ಮೆಯೂ “ಸೂಟ್” ಹಾಕದವರು, ಮದುವೆ ಆರತಕ್ಷತೆಯಲ್ಲಾದರೂ “ಸೂಟ್” ಧರಿಸುವುದು ಈಗಿನ ವಾಡಿಕೆ. ಅಂತಹ “ಸೂಟ್” ನಮ್ಮ ಸಿನಿಮಾದ ಕಥಾನಾಯಕ. ಈ ಚಿತ್ರದಲ್ಲಿ “ಸೂಟ್” ಅನ್ನು ಬರೀ ಬಟ್ಟೆಯಂತೆ ತೋರಿಸಿಲ್ಲ. ಮನುಷ್ಯನ ಹೊರಗಿನ ಮನಸ್ಸನ್ನು “ಸೂಟ್” ನ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇನೆ. “ಸೂಟ್” ಬಗ್ಗೆ ಅನೇಕ ಗಣ್ಯರು ತಮಗನಿಸಿದನ್ನು ಕವನಗಳ ಮೂಲಕ ಬರೆದಿದ್ದಾರೆ. ಅದನ್ನು ಸಂಕಲನವಾಗಿ ಹೊರ ತಂದಿದ್ದೇವೆ. ಸಂಗೀತ ನಿರ್ದೇಶಕ ಕಿರಣ್ ಶಂಕರ್ ಸುಮಧುರ ಹಾಡುಗಳನ್ನು ನೀಡಿದ್ದಾರೆ. ಛಾಯಾಗ್ರಾಹಕ ಕಿರಣ್ ಹಂಪಾಪುರ ಅವರ ಛಾಯಾಗ್ರಹಣ “ಸೂಟ್” ನ ಅಂದವನೆ ಮತ್ತಷ್ಟು ಹೆಚ್ಚುಸಿದೆ. ರೇಖಾಚಿತ್ರಗಳ ಮೂಲಕ ಕಿರಣ್ ನಮ್ಮ ಚಿತ್ರಕ್ಕೆ ಜೀವ ತುಂಬಿದ್ದಾರೆ. ಚಿತ್ರದಲ್ಲಿ ಐವತ್ತಕ್ಕೂ ಅಧಿಕ ಕಲಾವಿದರು ನಟಿಸಿದ್ದಾರೆ. ಸದ್ಯದಲ್ಲೇ “ಸೂಟ್” ತೆರೆಗೆ ಬರಲಿದೆ ಎಂದರು.
ಇದನ್ನೂ ಓದಿ:‘ಏಕೆ ಟಾಮ್ ಕ್ರೂಸ್ ರೀತಿ ಬೈಕ್ ಸ್ಟಂಟ್ಸ್ ಪ್ರಯತ್ನಿಸಬಾರದು?’; ಶಾರುಖ್ ಖಾನ್ ಕೊಟ್ರು ಉತ್ತರ
ಸಾಹಿತಿ ವಿ.ನಾಗೇಂದ್ರ ಪ್ರಸಾದ್ ತಾವು ಸಹ ಈ ಸಿನಿಮಾದಲ್ಲಿ ನಟಿಸಿರುವುದಾಗಿ ಹೇಳಿದ ಜೊತೆಗೆ, “ಸೂಟ್” ಬಗ್ಗೆ ತಾವು ಬರೆದಿರುವ ಕಾವನವನ್ನು ವಾಚಿಸಿದರು. ಚಿತ್ರದಲ್ಲಿ ಅಭಿನಯಿಸಿರುವ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಪ್ರಣಯ ಮೂರ್ತಿ, ದೀಪ್ತಿ ಕಾಪ್ಸೆ, ಭೀಷ್ಮ ರಾಮಯ್ಯ ಮುಂತಾದವರು ಚಿತ್ರ ಹಾಗೂ ತಮ್ಮ-ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಅನಾರೋಗ್ಯದ ನಿಮಿತ್ತ ಕಾರ್ಯಕ್ರಮಕ್ಕೆ ಹಾಜರಾಗದ ಸಂಗೀತ ನಿರ್ದೇಶಕ ಕಿರಣ್ ಶಂಕರ್ ಹಾಡುಗಳ ಹಾಗೂ ಹಾಡಿದವರ ಬಗ್ಗೆ ವಿಡಿಯೋ ಮೂಲಕ ಮಾಹಿತಿ ನೀಡಿದರು. ಛಾಯಾಗ್ರಾಹಕ ಕಿರಣ್ ಹಂಪಾಪುರ ಸೇರಿದಂತೆ ಅನೇಕ ತಂತ್ರಜ್ಞರು, ಕಲಾವಿದರು ಹಾಗೂ ಅತಿಥಿಗಳು ಆಡಿಯೋ ರಿಲೀಸ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. “ದ ಸೂಟ್” ಚಿತ್ರಕ್ಕೆ “ಅತಿಥಿದೇವೋ ಭವ” ಎಂಬ ಅಡಿಬರಹವಿದೆ.ಸಹ ನಿರ್ಮಾಪಕಿ ಮಾಲತಿ ಗೌಡ ಸಮಾರಂಭಕ್ಕೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ರಾಮಸ್ವಾಮಿ ಈ ಚಿತ್ರದ ನಿರ್ಮಾಪಕರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ