AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 650 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಪುನೀತ್​ ರಾಜ್​ಕುಮಾರ್​ಗೆ ಶ್ರದ್ಧಾಂಜಲಿ

ಪ್ರದರ್ಶಕರ ವಲಯ ಮತ್ತು ಥಿಯೇಟರ್ ಸಿಬ್ಬಂದಿಗಳಿಂದ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಂಡಿದ್ದರು. ಪುನೀತ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ದೀಪ ಬೆಳಗಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

ರಾಜ್ಯದ 650 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಪುನೀತ್​ ರಾಜ್​ಕುಮಾರ್​ಗೆ ಶ್ರದ್ಧಾಂಜಲಿ
ಪುನೀತ್​ ರಾಜ್​ಕುಮಾರ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 07, 2021 | 7:36 PM

Share

ಪುನೀತ್​ ರಾಜ್​ಕುಮಾರ್​​ ಸಿನಿಮಾಗಳು ಸ್ಯಾಂಡಲ್​ವುಡ್​ನಲ್ಲಿ ಒಳ್ಳೆಯ ಬಿಸ್​ನೆಸ್​ ಮಾಡುತ್ತಿತ್ತು. ಪುನೀತ್​ ಸಿನಿಮಾ ರಿಲೀಸ್​ ಆಗುತ್ತಿದೆ ಎಂದರೆ ಚಿತ್ರಮಂದಿರಗಳಿಗೆ ಹೊಸ ಕಳೆ ಬರುತ್ತಿತ್ತು. ಅಭಿಮಾನಿಗಳು ಅದ್ಭುತವಾಗಿ ಥಿಯೇಟರ್​ಗಳನ್ನು ಸಿಂಗರಿಸುತ್ತುದ್ದರು. ಆದರೆ, ಈಗ ಪುನೀತ್​ ನಿಧನ ಹೊಂದಿದ್ದಾರೆ. ಇದು ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಈ ಕಾರಣಕ್ಕೆ ರಾಜ್ಯದ ಎಲ್ಲಾ 650 ಚಿತ್ರಮಂದಿರಗಳಲ್ಲಿ ಇಂದು (ನವೆಂಬರ್ 7) ಸಂಜೆ 6 ಗಂಟೆಗೆ ಪುನೀತ್ ರಾಜ್​​ಕುಮಾರ್​​ಗೆ ವಿಶೇಷ ಹಾಡನ್ನು ಹಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

ಪ್ರದರ್ಶಕರ ವಲಯ ಮತ್ತು ಥಿಯೇಟರ್ ಸಿಬ್ಬಂದಿಗಳಿಂದ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಂಡಿದ್ದರು. ಪುನೀತ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ದೀಪ ಬೆಳಗಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಚಿತ್ರ ರಿಲೀಸ್ ಆಗುವ ಮೊದಲ ದಿನ ಮೊದಲ ಶೋಗೆ ಪುನೀತ್​ ಥಿಯೇಟರ್​​ಗೆ ಬರುತ್ತಿದ್ದರು. ಥಿಯೇಟರ್ ಸಿಬ್ಬಂದಿಯನ್ನು ಆತ್ಮೀಯವಾಗಿ ಮಾತನಾಡಿಸುತ್ತಿದ್ದರು. ಆದರೆ, ಅಂತಹ ಪುನೀತ್​ ಈಗ ನಮ್ಮ ಜತೆ ಇಲ್ಲ. ಈ ಕಾರಣಕ್ಕೆ ಪುನೀತ್​ ರಾಜ್​ಕುಮಾರ್ ಅವರ ಜತೆಗಿನ ನೆನಪನ್ನು ಥಿಯೇಟರ್ ಸಿಬ್ಬಂದಿ ಮೆಲುಕು ಹಾಕುತ್ತಿದ್ದಾರೆ. ಗೀತ ಸಾಹಿತಿ ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಪುನೀತ್​ ಅವರನ್ನು ನೆನೆದು ಎಲ್ಲರೂ ಕಣ್ಣೀರು ಹಾಕಿದ್ದಾರೆ.  ಇನ್ನು, ಈ ವೇಳೆ ನೂರಾರು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೇಣದಬತ್ತಿ ಹಚ್ಚಿ, ದೀಪ ಬೆಳಗಲಾಗಿದೆ.

ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದವರು ಪುನೀತ್​ ರಾಜ್​ಕುಮಾರ್​. ಹೃದಯಾಘಾತದಿಂದ ಸಡನ್​ ಆಗಿ ಅವರು ಇಹಲೋಕ ತ್ಯಜಿಸಿದ ಬಳಿಕ ಅಪಾರ ಸಂಖ್ಯೆಯ ಅಭಿಮಾನಿ ಬಳಗಕ್ಕೆ ತೀವ್ರ ನೋವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಚಿಕ್ಕ ಮಕ್ಕಳು ಸಂಕಟಪಡುತ್ತಿದ್ದಾರೆ. ಪುನೀತ್​ ಅವರ ಸಿನಿಮಾಗಳನ್ನು ಎಲ್ಲ ವರ್ಗದ ಪ್ರೇಕ್ಷಕರು ಇಷ್ಟಪಡುತ್ತಿದ್ದರು. ಮಕ್ಕಳು ಕೂಡ ಅಪ್ಪು ಅಭಿನಯವನ್ನು ಮನಸಾರೆ ಮೆಚ್ಚಿಕೊಂಡಿದ್ದರು. ಆದರೆ ಈಗ ಪುನೀತ್​ ಇಲ್ಲ ಎಂಬ ಕಹಿ ಸತ್ಯದಿಂದ ಪುಟಾಣಿಗಳಿಗೆ ನೋವಾಗಿದೆ.

ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಪ್ರತಿ ದಿನ ಭಾರಿ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಪೋಷಕರ ಜೊತೆ ಮಕ್ಕಳು ಕೂಡ ಸರದಿ ಸಾಲಿನಲ್ಲಿ ಬಂದು ಅಪ್ಪು ಸಮಾಧಿಗೆ ನಮಿಸುತ್ತಿದ್ದಾರೆ. ಸಮಾಧಿ ಎದುರು ಪುನೀತ್​ ಸಿನಿಮಾಗಳ ಹಾಡುಗಳನ್ನು ಹೇಳಿ ನಮನ ಸಲ್ಲಿಸಲಾಗುತ್ತಿದೆ.

ಇದನ್ನೂ ಓದಿ: Puneeth Rajkumar: ಪುನೀತ್ ಸಮಾಧಿ ದರ್ಶನದ ಅವಧಿ ಇಂದು 7 ಗಂಟೆವರೆಗೆ ವಿಸ್ತರಣೆ; ನಾಳೆ ಕಾರ್ಯ ಮುಗಿಸಿದ ನಂತರ ದರ್ಶನಕ್ಕೆ ಅವಕಾಶ

ಪುನೀತ್​ ಸಮಾಧಿ ಬಳಿ ಬಂದು ಹಾಡು ಹೇಳಿದ ಮಕ್ಕಳು; ಪುಟ್ಟ ಹೃದಯಗಳಿಗೆ ಅಪ್ಪು ಎಂದರೆ ಪಂಚಪ್ರಾಣ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ