ಸಿನಿ ಪ್ರಿಯರಿಗೆ ಗುಡ್ ನ್ಯೂಸ್; ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕಿಲ್ಲ ಅಡ್ಡಿ, ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಬೃಹತ್ ಬೆಂಗಳೂರು ನಗರ ಪಾಲಿಕೆ ಬೆಂಗಳೂರಲ್ಲಿ ಚಿತ್ರಮಂದಿರದಲ್ಲಿ ಆಸನ ವ್ಯವಸ್ಥೆಯನ್ನು ಶೇ.50ಕ್ಕೆ ಇಳಿಸಬೇಕು ಎಂದು ಸರ್ಕಾರದ ಮುಂದೆ ಪ್ರಸ್ತಾವನೆ ಇರಿಸಿತ್ತು. ಆದರೆ, ಈ ಪ್ರಸ್ತಾಪವನ್ನು ಸರ್ಕಾರ ನಿರಕಾರಿಸಿದೆ.
ಬೆಂಗಳೂರು ಸೇರಿ ರಾಜ್ಯಾದ್ಯಂತ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಇದು ಸರ್ಕಾರವನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ಕರೆದಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಕೋರಿದ್ದರು. ಈ ಮಧ್ಯೆ, ಬೃಹತ್ ಬೆಂಗಳೂರು ನಗರ ಪಾಲಿಕೆ ಬೆಂಗಳೂರಲ್ಲಿ ಚಿತ್ರಮಂದಿರದಲ್ಲಿ ಆಸನ ವ್ಯವಸ್ಥೆಯನ್ನು ಶೇ.50ಕ್ಕೆ ಇಳಿಸಬೇಕು ಎಂದು ಸರ್ಕಾರದ ಮುಂದೆ ಪ್ರಸ್ತಾವನೆ ಇರಿಸಿತ್ತು. ಆದರೆ, ಈ ಪ್ರಸ್ತಾಪವನ್ನು ಸರ್ಕಾರ ನಿರಕಾರಿಸಿದೆ.
ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಯಡಿಯೂರಪ್ಪ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ.
— CM of Karnataka (@CMofKarnataka) March 19, 2021
ನೀತಿ ಜಾರಿಗೆ ತರದಂತೆ ಮನವಿ ಮಾಡಿದ್ದ ಸ್ಯಾಂಡಲ್ವುಡ್
ಲಾಕ್ಡೌನ್ ಸಡಿಲಿಕೆಗೂ ಮುನ್ನ ಚಿತ್ರಮಂದಿರಗಳು ಸಂಪೂರ್ಣ ಬಂದ್ ಆಗಿದ್ದವು. ಬಳಿಕ ಶೇ.50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಲಾಯಿತು. ಪೊಗರು ಚಿತ್ರದ ರಿಲೀಸ್ ಸಂದರ್ಭದಲ್ಲಿ ಹೌಸ್ಫುಲ್ ಪ್ರದರ್ಶನಕ್ಕೆ ಅನುಮತಿ ಸಿಕ್ಕಿತು. ಆದರೆ ಈಗ ಕೊರೊನಾ ವೈರಸ್ ಎರಡನೇ ಅಲೆ ಹಬ್ಬುತ್ತಿದೆ ಎಂಬ ಕಾರಣಕ್ಕೆ ಮತ್ತೆ ಚಿತ್ರಮಂದಿರಗಳಲ್ಲಿ ಶೇ.50ಕ್ಕಿಂತ ಹೆಚ್ಚು ಆಸನಗಳ ಭರ್ತಿಗೆ ಅವಕಾಶ ನೀಡಬಾರದು ಎಂಬ ಪ್ರಸ್ತಾವನೆ ಕೇಳಿಬಂದಿತ್ತು. ಇದಕ್ಕೆ ಸ್ಯಾಂಡಲ್ವುಡ್ ಮಂದಿ ವಿರೋಧ ವ್ಯಕ್ತಪಡಿಸಿದ್ದರು.
ಇತ್ತೀಚೆಗೆ ಕಿಚ್ಚ ಸುದೀಪ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಂದೇ ವೇದಿಕೆ ಮೇಲೆ ಇದ್ದರು. ಆಗ ಸುದೀಪ್ ಶೇ. 100 ಆಸನ ಭರ್ತಿಗೆ ನೀಡಿರುವ ಅವಕಾಶವನ್ನು ಹಿಂಪಡೆಯಬೇಡಿ ಎಂದು ಸರ್ಕಾರದ ಮುಂದೆ ಮನವಿ ಇರಿಸಿದ್ದರು. ಇಂದು ನಟ ಪುನೀತ್ ರಾಜ್ಕುಮಾರ್ ಕೂಡ ಇದೇ ಮನವಿ ಮಾಡಿದ್ದರು. ಈ ಮನವಿಗೆ ಸರ್ಕಾರ ಧನಾತ್ಮಕವಾಗಿ ಸ್ಪಂದಿಸಿದಂತಾಗಿದೆ.
ಇದನ್ನೂ ಓದಿ: ಕೊರೊನಾ 2ನೇ ಅಲೆ: ಹೌಸ್ಫುಲ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್? ಬಿಬಿಎಂಪಿ ಪ್ರಸ್ತಾವನೆಗೆ ಪುನೀತ್ ವಿರೋಧ
Published On - 6:09 pm, Fri, 19 March 21