AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್​ ವೆಂಕಟೇಶ್​ ಸೋದರನ ಮನೆಯಲ್ಲಿ 5 ಕೆಜಿ ಚಿನ್ನ ಕಳ್ಳತನ; ದೂರು ದಾಖಲು

ರಾಕ್​ಲೈನ್​ ವೆಂಕಟೇಶ್​ ಅವರ ಸಹೋದರನ ಕುಟುಂಬದವರು ದೂರು ನೀಡಿದ ಬಳಿಕ ಮಹಾಲಕ್ಷ್ಮೀ ಲೇಔಟ್ ಠಾಣೆ​ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸದ್ಯಕ್ಕೆ ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಮನೆಯ ಸದಸ್ಯರಿಂದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ರಾಕ್​ಲೈನ್​ ವೆಂಕಟೇಶ್​ ಸೋದರನ ಮನೆಯಲ್ಲಿ 5 ಕೆಜಿ ಚಿನ್ನ ಕಳ್ಳತನ; ದೂರು ದಾಖಲು
ರಾಕ್​ಲೈನ್​ ವೆಂಕಟೇಶ್​
ಶಿವಪ್ರಸಾದ್​ ಬಿ.
| Edited By: |

Updated on:Oct 30, 2023 | 6:25 PM

Share

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ (Rockline Venkatesh)​ ಸೋದರ ಭ್ರಮರೇಶ್ ಅವರ ಮನೆಯಲ್ಲಿ 5 ಕೆಜಿ ಚಿನ್ನ ಕಳ್ಳತನ (Theft) ಆಗಿದೆ. ಚಿನ್ನದ ಜೊತೆಗೆ 6 ಲಕ್ಷ ನಗದು ಕಳ್ಳತನವಾಗಿರುವ ಬಗ್ಗೆ ದೂರು ನೀಡಲಾಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ನಿವಾಸದಲ್ಲಿ ಕಳ್ಳತನ ನಡೆದಿದೆ. ರಾಕ್​ಲೈನ್​ ವೆಂಕಟೇಶ್​ ಅವರ ಕುಟುಂಬದವರು ಇತ್ತೀಚೆಗೆ ಯೂರೋಪ್​ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಭಾನುವಾರ (ಅಕ್ಟೋಬರ್​ 30) ವಾಪಸಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸ್ (Mahalakshmi Layout Police)​ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ರಾಕ್​ಲೈನ್​ ವೆಂಕಟೇಶ್​ ಅವರ ಸಹೋದರನ ಕುಟುಂಬದವರು ದೂರು ನೀಡಿದ ಬಳಿಕ ಮಹಾಲಕ್ಷ್ಮೀ ಲೇಔಟ್ ಠಾಣೆ​ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸದ್ಯಕ್ಕೆ ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಮನೆಯ ಸದಸ್ಯರಿಂದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಿಗಾಗಿ ಪೊಲೀಸರಿಂದ ತೀವ್ರ ಶೋಧಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ: ರಾಕ್​ಲೈನ್ ವೆಂಕಟೇಶ್ ಮನೆ ಪರಿಶೋಧಿಸಿದ ಅಧಿಕಾರಿಗಳು ಹೇಳಿದ್ದು ಹೀಗೆ

ಹುಲಿ ಉಗುರು ಕೇಸ್​:

ಇತ್ತೀಚೆಗೆ ಹುಲಿ ಉಗುರು ಕೇಸ್​ನಲ್ಲಿ ರಾಕ್​ಲೈನ್​ ವೆಂಕಟೇಶ್​ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ ಅವರು ಹುಲಿ ಉಗುರು ಹೊಂದಿದ್ದ ಆರೋಪದ ಮೇಲೆ ಅರೆಸ್ಟ್​ ಆದ ಬಳಿಕ ಇನ್ನುಳಿದ ಸೆಲೆಬ್ರಿಟಿಗಳ ಫೋಟೋ ಕೂಡ ವೈರಲ್​ ಆಗಿತ್ತು. ರಾಕ್​ಲೈನ್​ ವೆಂಕಟೇಶ್​ ಸಹ ಹುಲಿ ಉಗುರು ಧರಿಸಿದ್ದರಿಂದ ಅವರಿಗೂ ಅರಣ್ಯಾಧಿಕಾರಿಗಳು ನೋಟಿಸ್​ ನೀಡಿ, ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಅಧಿಕಾರಿಗಳು ಭೇಟಿ ನೀಡಿದ್ದಾಗ ವೆಂಕಟೇಶ್​ ಅವರು ವಿದೇಶಕ್ಕೆ ತೆರಳಿದ್ದರು. ಅವರ ಅನುಪಸ್ಥಿತಿಯಲ್ಲೇ ಮನೆಯಲ್ಲಿ ಶೋಧ ಮಾಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮನೆ ಕಳ್ಳತನ ಮಾಡ್ತಿದ್ದ ಆರೋಪಿ ಬಂಧನ; 8 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

‘ಮೇಲಾಧಿಕಾರಿಗಳ ಆದೇಶದ ಮೇರೆಗೆ ರಾಕ್​ಲೈನ್​ ವೆಂಕಟೇಶ್​ ಅವರ ಮನೆಯನ್ನು ಪೂರ್ತಿಯಾಗಿ ಪರಿಶೀಲಿಸಿದ್ದೇವೆ. ಇದಕ್ಕೆ ಅವರ ಪುತ್ರ ಸ್ಪಂದಿಸಿದ್ದಾರೆ. ಎಲ್ಲ ಲಾಕರ್​ಗಳನ್ನು ತೆಗೆದು ತೋರಿಸಿದ್ದಾರೆ. ವನ್ಯಜೀವಿಗೆ ಸಂಬಂಧಿಸಿದ ಯಾವುದೇ ವಸ್ತು ಪತ್ತೆ ಆಗಿಲ್ಲ. ರಾಕ್​ಲೈನ್​ ವೆಂಕಟೇಶ್​ ಜೊತೆ ಮಾತನಾಡುವ ಪ್ರಯತ್ನ ಮಾಡುತ್ತಿದ್ದೇವೆ. ಅವರು ಸಂಪರ್ಕಕ್ಕೆ ಸಿಕ್ಕಿಲ್ಲ’ ಎಂದು ಅರಣ್ಯಾಧಿಕಾರಿಗಳು ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:07 pm, Mon, 30 October 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ