Kichcha Sudeep: ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

|

Updated on: Apr 05, 2023 | 10:28 AM

ಸುದೀಪ್​ಗೆ ಬೆದರಿಕೆ ಪತ್ರ ಬಂದಿದ್ದು ಆತಂಕ ಮೂಡಿಸಿದೆ. ಸುದೀಪ್ ಮ್ಯಾನೇಜರ್ ಜಾಕ್ ಮಂಜುಗೆ ಈ ಪತ್ರ ಸಿಕ್ಕಿದೆ. ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಆಗಿದೆ.

Kichcha Sudeep: ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಸುದೀಪ್
Follow us on

ನಟ ಕಿಚ್ಚ ಸುದೀಪ್ (Sudeep) ಅವರು ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ರೆಡಿ ಆಗಿದ್ದಾರೆ. ಸ್ಟಾರ್ ಪ್ರಚಾರಕನಾಗಿ ಕಮಲ ಪಾಳಯದ ಪರ ಅವರು ಕ್ಯಾಂಪೇನ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ವಿವಿಧ ಕ್ಷೇತ್ರಗಳಿಗೆ ತೆರಳಿ ಅವರು ಮತ ಕೇಳಲಿದ್ದಾರೆ. ಹೀಗಿರುವಾಗಲೇ ಸುದೀಪ್​ಗೆ ಬೆದರಿಕೆ ಪತ್ರ ಬಂದಿತ್ತು. ಈಗ ಈ ಕೇಸ್ ಸಿಸಿಬಿಗೆ ವರ್ಗಾವಣೆ ಆಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ (Pratap Reddy) ಆದೇಶ ಹೊರಡಿಸಿದ್ದಾರೆ. ಪತ್ರಬರೆದ ಕಿಡಿಗೇಡಿಯನ್ನು ಹುಡುಕುವ ಕೆಲಸ ಆಗುತ್ತಿದೆ.

ಏನಿದು ಪ್ರಕರಣ?

ಸುದೀಪ್​ಗೆ ಬೆದರಿಕೆ ಪತ್ರ ಬಂದಿದ್ದು ಆತಂಕ ಮೂಡಿಸಿತ್ತು. ಸುದೀಪ್ ಮ್ಯಾನೇಜರ್ ಜಾಕ್ ಮಂಜುಗೆ ಈ ಪತ್ರ ಸಿಕ್ಕಿದೆ. ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಆಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಲಾಗಿದೆ. ‘ನಟನ ಘನತೆಗೆ ಧಕ್ಕೆ ತರಲು ಮಾಡಿರೋ ಸಂಚು’ ಎಂದು ಮಂಜು ಅವರು ದೂರಿದ್ದಾರೆ. ಪುಟ್ಟೇನಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಈ ಪತ್ರ ಎಲ್ಲಿಂದ ಬಂತು, ಯಾರು ಕಳುಹಿಸಿದ್ದು ಎನ್ನುವ ತನಿಖೆ ನಡೆಯುತ್ತಿದೆ. ಈ ಪ್ರಕರಣ ಈಗ ಸಿಸಿಬಿಗೆ ವರ್ಗಾವಣೆ ಆಗಿದೆ.

ಬಿಜೆಪಿ ಪರ ಪ್ರಚಾರ ಮಾಡಲಿರುವ ಸುದೀಪ್

ಇಂದು (ಏಪ್ರಿಲ್ 5) ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗವಹಿಸುವ ಸಾಧ್ಯತೆ ಇದೆ. ಖಾಸಗಿ ಹೋಟೆಲ್​ನಲ್ಲಿ ಈ ಪ್ರೆಸ್​ಮೀಟ್​ ನಡೆಯಲಿದೆ. ಸುದ್ದಿಗೋಷ್ಠಿ ವೇಳೆ ಸುದೀಪ್ ಅವರು ಬಿಜೆಪಿಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ. ಆದರೆ, ಅವರು ಪಕ್ಷ ಸೇರುತ್ತಾರೆ ಎಂಬುದು ಬಹುತೇಕ ಅನುಮಾನವೇ.

ಇದನ್ನೂ ಓದಿ: Kichcha Sudeep: ‘ನಿಮ್ಮ ಖಾಸಗಿ ವಿಡಿಯೋ ಲೀಕ್​ ಮಾಡ್ತೀವಿ’; ಸುದೀಪ್​ಗೆ ಬಂತು ಎರಡು ಬೆದರಿಕೆ ಪತ್ರ

ಸುದೀಪ್ ಅವರು ಬಿಜೆಪಿ ಪ್ರಚಾರ ರಾಯಭಾರಿ ಆದರೆ ಪಕ್ಷಕ್ಕೆ ದೊಡ್ಡ ಬಲ ಸಿಕ್ಕಂತೆ ಆಗಲಿದೆ. ಬಿಜೆಪಿ ಪಕ್ಷದ ಪರ ಅವರ ಅಭಿಮಾನಿಗಳು ಪ್ರಚಾರ ಮಾಡಲಿದ್ದಾರೆ. ಸುದೀಪ್​ಗೆ ದೊಡ್ಡ ಅಭಿಮಾನಿ ವರ್ಗ ಇದೆ. ಅವರು ಪಕ್ಷದ ಪರ ಪ್ರಚಾರ ಮಾಡಿದರೆ ದೊಡ್ಡ ಬಲ ಸಿಕ್ಕಂತೆ ಆಗಲಿದೆ ಅನ್ನೋದು ಬಿಜೆಪಿ ಆಲೋಚನೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:18 am, Wed, 5 April 23